ಬೆಂಗಳೂರು (Bangalore) : ಒಂದೇ ಕುಟುಂಬದ ಐವರು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮನೆಯ ಮಾಲೀಕ ಶಂಕರ್ನನ್ನ ಬ್ಯಾಡರಹಳ್ಳಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆತ್ಮಹತ್ಯೆಗೆ ಪ್ರಚೋದನೆ ಆರೋಪದಡಿ ಶಂಕರ್ನನ್ನ ವಶಕ್ಕೆ ಪಡೆಯಲಾಗಿದೆ.
ಬ್ಯಾಡರಹಳ್ಳಿಯಲ್ಲಿ ಒಂದೇ ಕುಟುಂಬದ ಐವರು ಸಾವನ್ನಪ್ಪಿರೋದು ಈಡೀ ಬೆಂಗಳೂರನ್ನೆ ಬೆಚ್ಚಿ ಬೀಳಿಸಿತ್ತು. ಜೊತೆಗೆ ಡೆತ್ನೋಟ್ನಲ್ಲಿ ಶಂಕರ್ ವಿರುದ್ಧ ಸಾವಿಗೀಡಾದ ಮಕ್ಕಳು ಆರೋಪವನ್ನು ಕೂಡ ಮಾಡಿದ್ದರು. ಈ ಹಿನ್ನೆಲೆ ಸದ್ಯ ಪೊಲೀಸರು ಶಂಕರ್ನನ್ನು ವಶಕ್ಕೆ ಪಡೆದಿದ್ದಾರೆ.

ಪೊಲೀಸರು ಶಂಕರ್ ಜೊತೆಗೆ ಅಳಿಯಂದಿರನ್ನೂ ಸಹ ವಿಚಾರಣೆಗೆ ಒಳಪಡಿಸಿದ್ದಾರೆ ಎನ್ನಲಾಗ್ತಿದೆ. ಸದ್ಯ ಮೂವರನ್ನೂ ಪ್ರತ್ಯೇಕ ವಿಚಾರಣೆಗೆ ಒಳಪಡಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.