Secular TV
Sunday, April 2, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

ಅದಾನಿ ಮುಂದ್ರಾ ಬಂದರಿನಲ್ಲಿ ಡ್ರಗ್ಸ್ ಪತ್ತೆ ಪ್ರಕರಣದಲ್ಲಿ ಕೇಂದ್ರ ಸರ್ಕಾರದ ಮೌನ ಏಕೆ? ಕಾಂಗ್ರೆಸ್

Secular TVbySecular TV
A A
Reading Time: 2 mins read
ಅದಾನಿ ಮುಂದ್ರಾ ಬಂದರಿನಲ್ಲಿ ಡ್ರಗ್ಸ್ ಪತ್ತೆ ಪ್ರಕರಣದಲ್ಲಿ ಕೇಂದ್ರ ಸರ್ಕಾರದ ಮೌನ ಏಕೆ? ಕಾಂಗ್ರೆಸ್
0
SHARES
Share to WhatsappShare on FacebookShare on Twitter

‘ಅದಾನಿ ಮುಂದ್ರಾ ಅವರ ಬಂದರಲ್ಲಿ ಡ್ರಗ್ಸ್ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಬಿಜೆಪಿ ಸರ್ಕಾರ ಮೌನ ವಹಿಸಿರುವುದೇಕೆ? ಇದು ದೇಶದ ಭದ್ರತೆಗೆ ಅಪಾಯ ತರುವ ವಿಚಾರವಾಗಿದ್ದು, ಇದರ ಹಿಂದೆ ಯಾರಿದ್ದಾರೆ ಎಂದು ಪತ್ತೆ ಹಚ್ಚಲು ಹಾಲಿ ಸುಪ್ರೀಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಸಬೇಕು’ ಎಂದು ಕಾಂಗ್ರೆಸ್ ಆಗ್ರಹಿಸಿದೆ.

ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಈ ವಿಚಾರವಾಗಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಎಐಸಿಸಿ ವಕ್ತಾರರಾದ ಸುಪ್ರಿಯಾ ಶ್ರೀನೇಟ್ ಅವರು, ‘ಅದಾನಿ ಮುಂದ್ರಾ ಬಂದರಿನಲ್ಲಿ ಈ ರೀತಿ ಡ್ರಗ್ಸ್ ಪತ್ತೆ ಪ್ರಕರಣ ಇದೇ ಮೊದಲ ಬಾರಿಯಲ್ಲ. ಈ ಹಿಂದೆಯೂ ಡ್ರಗ್ಸ್ ಪತ್ತೆಯಾಗಿದ್ದು, ಆದರೂ ಬಂದರು ನಡೆಸುತ್ತಿರುವ ಅದಾನಿ ಸಮೂಹದ ವಿಚಾರಣೆ ನಡೆಸಿಲ್ಲ ಯಾಕೆ?’ ಎಂದು ಪ್ರಶ್ನಿಸಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಮಾಧ್ಯಮ ವಿಭಾಗ ಮುಖ್ಯಸ್ಥರಾದ ಬಿ.ಎಲ್ ಶಂಕರ್, ಎಐಸಿಸಿ ವಕ್ತಾರರಾದ ಭವ್ಯ ನರಸಿಂಹಮೂರ್ತಿ, ಕೆಪಿಸಿಸಿ ಸಂವಹನ ಹಾಗೂ ಮಾಧ್ಯಮ ವಿಭಾಗದ ಸಹ ಸಂಚಾಲಕರಾದ ರಾಮಚಂದ್ರಪ್ಪ ಹಾಗೂ ಸಲೀಂ ಅವರು ಇದ್ದರು.

ಇದನ್ನೂ ಓದಿ : ಕೇಂದ್ರ ಸರ್ಕಾರದಿಂದ ಗುಜರಾತ್ ಗೆ ನೀಡುವ ಅನುದಾನದಲ್ಲಿ ಶೇ 350ರಷ್ಟು ಏರಿಕೆ

‘ಕೆಲ ದಿನಗಳ ಹಿಂದೆ ಗುಜರಾತಿನ ಅದಾನಿ ಮುಂದ್ರಾ ಬಂದರಿನಲ್ಲಿ 3000 ಕೆ.ಜಿ ಅಂದರೆ 21 ಸಾವಿರ ಕೋಟಿ ಮೌಲ್ಯದ ಡ್ರಗ್ಸ್ ಪತ್ತೆಯಾಗಿತ್ತು. ಕಳೆದ ಜೂನ್ ತಿಂಗಳಲ್ಲಿ 25,000 ಕೆ.ಜಿಯಷ್ಟು ಡ್ರಗ್ಸ್ ಬಂದಿದ್ದು, ಅದು ಈಗಾಗಲೇ ಮಾರುಕಟ್ಟೆಯಲ್ಲಿ ಸರಬರಾಜಾಗುತ್ತಿವೆ. ಇದನ್ನು ಸೆಮಿ ಕಟ್ ಟಾಲ್ಕಮ್ ಪೌಡರ್ ಎಂದು ಹೆಸರಿಸಲಾಗಿದ್ದು, ಈ ಡ್ರಗ್ಸ್ ಗಳು ತಾಲಿಬಾನ್ ಹಿಡಿತದಲ್ಲಿರುವ ಅಫ್ಘಾನಿಸ್ತಾನದಿಂದ ಆಶಿ ಟ್ರೇಡಿಂಗ್ ಕಂಪನಿ ಆಮದು ಮಾಡಿಕೊಂಡಿದೆ. ಇದು ದೇಶದ ಯುವಕರ ಭವಿಷ್ಯದ ವಿಷಯವಾಗಿದೆ. ಆದರೂ ಈ ವಿಚಾರವಾಗಿ ನರೇಂದ್ರ ಮೋದಿ ಅವರ ಸರ್ಕಾರವಾಗಲಿ, ದೇಶದ ಪ್ರಮುಖ ಮಾಧ್ಯಮಗಳಾಗಲಿ ಮಾತನಾಡುತ್ತಿಲ್ಲ’ ಎಂದು ತಿಳಿಸಿದರು.

‘ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆಶಿ ಟ್ರೇಡಿಂಗ್ ಕಂಪನಿ ಮಾಲೀಕರಾದ ಸುಧಾಕರ್ ಮಚ್ವರಮ್ ಹಾಗೂ ಅವರ ಪತ್ನಿ ಗವಿಂದ ರಾಜು ವೈಶಾಲಿ ಅವರನ್ನು ಬಂಧಿಸಲಾಗಿದ್ದು, ಇಂತಹ ಸಣ್ಣ ಟ್ರೇಡಿಂಗ್ ಕಂಪನಿ ಇಷ್ಟು ದೊಡ್ಡ ಮೊತ್ತದ ಡ್ರಗ್ಸ್ ಆಮದು ಮಾಡಿಕೊಳ್ಳಲು ಸಾಧ್ಯವಿಲ್ಲ. ಇದರ ಹಿಂದೆ ಪ್ರಭಾವಿಗಳ ಕೈವಾಡದ ಶಂಕೆ ಇದ್ದು, ಅದು ಯಾರು ಎಂಬುದರ ಬಗ್ಗೆ ತನಿಖೆ ನಡೆದಿಲ್ಲ. ಜೂನ್ ತಿಂಗಳಲ್ಲಿ ಅಫ್ಘಾನಿಸ್ತಾನದ ಹಸನ್ ಹುಸೇನ್ ಲಿಮಿಟೆಡ್ ಕಂಪನಿ 25 ಸಾವಿರ ಕೆ.ಜಿ ಅಂದರೆ 1.75 ಲಕ್ಷ ಕೋಟಿಯಷ್ಟು ಮೊತ್ತದ ಹೆರಾಯಿನ್ ರಫ್ತು ಮಾಡಿದ್ದು, ಅದು ದೇಶದ ಮಾರುಕಟ್ಟೆಯಲ್ಲಿ ಸರಬರಾಜಾಗುತ್ತಿದೆ. ಇದು ದೇಶದ ಲಕ್ಷಾಂತರ ಯುವಕರು ಮಾದಕ ವ್ಯಸನಿಗಳಾಗುವ ಸ್ಥಿತಿ ನಿರ್ಮಾಣವಾಗಿದೆ. ಆ ಮೂಲಕ ಇದು ದೇಶದ ಭದ್ರತೆಗೆ ಮಾರಕವಾಗಲಿದೆ’ ಎಂದು ಅಭಿಪ್ರಾಯಪಟ್ಟರು.

‘ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ಯುವಕರಿಗೆ ಕಳೆದ 7 ವರ್ಷಗಳಲ್ಲಿ 14 ಕೋಟಿ ಉದ್ಯೋಗ ನೀಡಬೇಕಾಗಿತ್ತು, ಆದರೆ ದೇಶದ ಯುವಕರು ಈ ಡ್ರಗ್ಸ್ ಜಾಲಕ್ಕೆ ಸಿಲುಕುವಂತೆ ಮಾಡಲಾಗಿದೆ. ಕಳೆದ ವರ್ಷ ಕೇವಲ 2 ಗ್ರಾಂ ಡ್ರಗ್ಸ್ ಸಿಕ್ಕ ಪ್ರಕರಣದಲ್ಲಿ ಇಡೀ ಹಿಂದಿ ಚಿತ್ರರಂಗವನ್ನೇ ಜಾಲಾಡಿದ್ದ ಮಾಧ್ಯಮಗಳು, ಈ ವರ್ಷ ದೇಶದ ಇತಿಹಾಸದಲ್ಲಿ ಅತಿ ದೊಡ್ಡ ಪ್ರಮಾಣದ ಡ್ರಗ್ಸ್ ಪತ್ತೆಯಾಗಿದ್ದರೂ ಯಾವುದೇ ಚರ್ಚೆ ನಡೆಸುತ್ತಿಲ್ಲ. ಡ್ರಗ್ಸ್ ನಿಯಂತ್ರಣ ಮಾಡಲು ನೇಮಕಗೊಂಡಿರುವ ಮಾದಕ ವಸ್ತುಗಳ ನಿಯಂತ್ರಣ ಮಂಡಳಿಯಲ್ಲಿ ಕಳೆದ 18 ತಿಂಗಳಿನಿಂದ ವ್ಯವಸ್ಥಾಪಕ ನಿರ್ದೇಶಕರನ್ನು ನೇಮಿಸಿಲ್ಲ. ದೇಶಕ್ಕೆ ಡ್ರಗ್ಸ್ ಪ್ರವೇಶಿಸಲು ಗುಜರಾತಿನ ಬಂದರು ರಹದಾರಿಯಾಗಿದ್ದು, ಮೋದಿ ಸರ್ಕಾರ ಈ ವಿಚಾರದಲ್ಲಿ ಮೌನ ವಹಿಸಿದೆ’ ಎಂದು ತಿಳಿಸಿದರು.

ಈ ವೇಳೆ ಕೇಂದ್ರ ಬಿಜೆಪಿ ಸರ್ಕಾರಕ್ಕೆ ಸುಪ್ರಿಯಾ ಅವರು 10 ಪ್ರಶ್ನೆಗಳನ್ನು ಕೇಳಿದ್ದು ಅವುಗಳು ಹೀಗಿವೆ…

1) ದೇಶದಲ್ಲಿ ಡ್ರಗ್ಸ್ ಜಾಲ ನಿರಾತಂಕವಾಗಿ ಕಾರ್ಯಚಟುವಟಿಕೆ ನಡೆಸುತ್ತಿದ್ದು, 3 ಸಾವಿರ ಕೆ.ಜಿ ಹೆರಾಯಿನ್ ಪತ್ತೆಯಾಗಿರುವುದು ಇದಕ್ಕೆ ಸಾಕ್ಷಿಯಾಗಿದೆ. ಇದು ದೇಶದ ಯುವಕರ ಭವಿಷ್ಯಕ್ಕೆ ಮಾರಕವಲ್ಲವೇ?

2) ಕಳೆದ ಜೂನ್ ನಲ್ಲಿ ಆಮದುಗೊಂಡ 1.75ಲಕ್ಷ ಕೋಟಿ ಮೌಲ್ಯದ 25 ಸಾವಿರ ಕೆ.ಜಿ ಹೆರಾಯಿನ್ ನಾಪತ್ತೆಯಾಗಿದ್ದು, ಇದರ ಬಗ್ಗೆ ಈವರೆಗೂ ತನಿಖೆ ನಡೆಸಿಲ್ಲ ಯಾಕೆ?

3) ಭಾರತದ ಮಾದಕದ್ರವ್ಯ ನಿಯಂತ್ರಣ ಮಂಡಳಿ, ಸಿಬಿಐಐ, ಇಡಿ, ಡಿಆರ್ ಐ ಸಂಸ್ಥೆಗಳು ಏನು ಮಾಡುತ್ತಿವೆ? ಇವು ಕೇವಲ ರಾಜಕೀಯ ಎದುರಾಳಿಗಳ ವಿರುದ್ಧ ಬಳಸುವ ಅಸ್ತ್ರವಾಗಿದೆಯಾ?

4) ತಾಲಿಬಾನ್ ನಿಯಂತ್ರಣದಲ್ಲಿರುವ ಆಫ್ಘಾನಿಸ್ತಾನದಿಂದ ದೇಶಕ್ಕೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಡ್ರಗ್ಸ್ ರವಾನೆಯಾಗುತ್ತಿದ್ದು, ಇದು ದೇಶದ ಭದ್ರತೆಗೆ ಅಪಾಯಕಾರಿಯಲ್ಲವೇ?

5) ಪ್ರಭಾವಿ ವ್ಯಕ್ತಿ ಹೊರತಾಗಿ ಇತರರು ಇಷ್ಟು ದೊಡ್ಡ ಮಟ್ಟದ ಡ್ರಗ್ಸ್ ಆಮದು ಮಾಡಿಕೊಳ್ಳಲು ಸಾಧ್ಯವೇ? ಈ ಬಗ್ಗೆ ಪ್ರಧಾನಮಂತ್ರಿಗಳಾಗಲಿ, ಗೃಹಮಂತ್ರಿಗಳಾಗಲಿ ಅನುಮಾನಾಸ್ಪದ ಮೌನಕ್ಕೆ ಶರಣಾಗಿರುವುದೇಕೆ?

6) ಈ ಪ್ರಕರಣದಲ್ಲಿ ಅದಾನಿ ಮುಂದ್ರಾ ಬಂದರಿನ ವಿಚಾರಣೆ ನಡೆದಿಲ್ಲ ಯಾಕೆ? ಗುಜರಾತಿನಲ್ಲಿರುವ ಈ ಕಂಪನಿ ದೇಶಕ್ಕೆ ಡ್ರಗ್ಸ್ ಸರಬರಾಜು ಮಾಡುವ ರಹದಾರಿಯಾಗಿ ಮಾರ್ಪಟ್ಟಿದೆ?

7) ವಿಶೇಷ ನ್ಯಾಯಾಲಯದ ಅಭಿಪ್ರಾಯದಂತೆ ಮುಂದ್ರಾ ಬಂದರು ನಡೆಸುತ್ತಿರುವ ಅದಾನಿ ಗ್ರೂಪ್ ಈ ಆಮದಿನಿಂದ ಲಾಭ ಪಡೆಯುತ್ತಿಲ್ಲವೇ?

8) ಕಳೆದ 18 ತಿಂಗಳಿನಿಂದ ದೇಶದ ಮಾದಕ ದ್ರವ್ಯ ನಿಯಂತ್ರಣ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರ ಹುದ್ದೆ ಖಾಲಿ ಇರುವುದೇಕೆ?

9) ರಾಷ್ಟ್ರೀಯ ಭದ್ರತೆ ವಿಚಾರವಾಗಿ ಪ್ರಧಾನಮಂತ್ರಿಗಳು ಹಾಗೂ ಕೇಂದ್ರ ಸರ್ಕಾರ ಪದೇ ಪದೆ ವಿಫಲರಾಗುತ್ತಿರುವುದೇಕೆ?

10) ದೇಶದ ಯುವಕರ ಭವಿಷ್ಯಕ್ಕೆ ಮಾರಕವವಾಗಿರುವ ಈ ಡ್ರಗ್ಸ್ ಪ್ರಕರಣದಲ್ಲಿ ಹಾಲಿ ಸುಪ್ರಿಂ ಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ನಡೆಯುತ್ತಿಲ್ಲ ಯಾಕೆ?

RECOMMENDED

Ramanagara: ಪಾಕಿಸ್ತಾನಕ್ಕೆ ಹೋಗು ಎಂದು ಹೇಳಿ, ಮುಸ್ಲಿಂ ದನದ ವ್ಯಾಪಾರಿಯ ಹತ್ಯೆ; ಶಂಕಿತ ಪುನೀತ್ ಕೆರೆಹಳ್ಳಿ ಬಂಧನ

Ramanagara: ಪಾಕಿಸ್ತಾನಕ್ಕೆ ಹೋಗು ಎಂದು ಹೇಳಿ, ಮುಸ್ಲಿಂ ದನದ ವ್ಯಾಪಾರಿಯ ಹತ್ಯೆ; ಶಂಕಿತ ಪುನೀತ್ ಕೆರೆಹಳ್ಳಿ ಬಂಧನ

April 2, 2023
DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

March 26, 2023
  • 409 Followers
  • 23.8k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

Ramanagara: ಪಾಕಿಸ್ತಾನಕ್ಕೆ ಹೋಗು ಎಂದು ಹೇಳಿ, ಮುಸ್ಲಿಂ ದನದ ವ್ಯಾಪಾರಿಯ ಹತ್ಯೆ; ಶಂಕಿತ ಪುನೀತ್ ಕೆರೆಹಳ್ಳಿ ಬಂಧನ
Crime

Ramanagara: ಪಾಕಿಸ್ತಾನಕ್ಕೆ ಹೋಗು ಎಂದು ಹೇಳಿ, ಮುಸ್ಲಿಂ ದನದ ವ್ಯಾಪಾರಿಯ ಹತ್ಯೆ; ಶಂಕಿತ ಪುನೀತ್ ಕೆರೆಹಳ್ಳಿ ಬಂಧನ

April 2, 2023
DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್
Just-In

DK Shivkumar-CT Ravi: ಸಿ.ಟಿ ರವಿಗೆ ಸೋಲಿನ ಭೀತಿಯಿಂದ ಮತಿಭ್ರಮಣೆಯಾಗಿದೆ: ಡಿ.ಕೆ. ಶಿವಕುಮಾರ್

March 26, 2023
Mekedatu Padayathra: ನಾಳೆಯಿಂದ ಮೇಕೆದಾಟು  ​ಪಾದಯಾತ್ರೆ ಆರಂಭ! ಕಾಂಗ್ರೆಸ್ ಬೃಹತ್ ಸಮಾವೇಶಕ್ಕೆ ಬಿಬಿಎಂಪಿಯಿಂದ ಸಮ್ಮತಿ
Just-In

ಲಿಂಗಾಯತರು, ಒಕ್ಕಲಿಗರು, ಪರಿಶಿಷ್ಟ ಜಾತಿ/ಪಂಗಡ ಹಾಗೂ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲರಿಗೂ ಮೋಸ ಮಾಡುವುದು ಬಿಜೆಪಿಯ ತಂತ್ರಗಾರಿಕೆ-DK Shivkumar

March 26, 2023
Web Story : Dk Shivakumar : ರಾಜ್ಯದಲ್ಲಿ ಕಾಂಗ್ರೆಸ್ ಬಂದ್ರೆ ಡಬಲ್ ಬೆಡ್ ರೂಮ್ ಮನೆ : ಡಿಕೆಶಿ ಭರವಸೆ
Just-In

siddaramaiah:ಮೀಸಲಾತಿಯ ಅಸಂವಿಧಾನಿಕ ಪರಿಷ್ಕರಣೆ ಈ ನಾಡಿಗೆ ಎಸಗಿರುವ ದ್ರೋಹ, ಕೂಡಲೇ ರಾಜ್ಯ ಸರ್ಕಾರವನ್ನು ವಜಾ ಮಾಡಬೇಕು: ಸಿದ್ದರಾಮಯ್ಯ

March 26, 2023
ನಾನು ಅನರ್ಹಗೊಂಡ ಸಂಸದ : ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ
India

ನಾನು ಅನರ್ಹಗೊಂಡ ಸಂಸದ : ಟ್ವಿಟರ್ ಬಯೋ ಬದಲಿಸಿದ ರಾಹುಲ್ ಗಾಂಧಿ

March 26, 2023
ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.
Entertainment

ಸೆಟ್ಟೇರಿತು ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ, ನಿತಿನ್ ನೂತನ ಸಿನಿಮಾ – ಚಿತ್ರತಂಡಕ್ಕೆ ಶುಭ ಹಾರೈಸಿದ ಮೆಗಾಸ್ಟಾರ್ ಚಿರಂಜೀವಿ.

March 25, 2023
KPCC: ಕೆಪಿಸಿಸಿ ಪದಾಧಿಕಾರಿಗಳ ನೇಮಕ: ಎಐಸಿಸಿಯಿಂದ ಅಧಿಕೃತ ಪಟ್ಟಿ ಘೋಷಣೆ
Just-In

ಕಾಂಗ್ರೆಸ್‌ ಮೊದಲ ಪಟ್ಟಿ ಬಿಡುಗಡೆ, ಲಿಂಗಾಯತ ಸಮುದಾಯದ ನಾಯಕರಿಗೇ ಹೆಚ್ಚು ಮಣೆ ಹಾಕಿದ ಕಾಂಗ್ರೆಸ್‌, ಜಾತಿ ಲೆಕ್ಕಾಚಾರ ಇಲ್ಲಿದೆ ನೋಡಿ…

March 25, 2023
Dk sivakumar: ರಾಜ್ಯದಲ್ಲಿ ಭಾರತ ಜೋಡೋ ಯಶಸ್ಸಿಗೆ ಡಿಕೆಶಿ ಸಂತಸ
Politics

DK Shivkumar On Rahul Gandhi: ರಾಜಕೀಯ ದ್ವೇಷದಿಂದ ರಾಹುಲ್ ಗಾಂಧಿಯವರನ್ನು ಅನರ್ಹ ಮಾಡಲಾಗಿದೆ: ಡಿ.ಕೆ. ಶಿವಕುಮಾರ್

March 25, 2023
Next Post
Film Theatres Open; ಇಂದಿನಿಂದ ಚಿತ್ರಮಂದಿರಗಳಲ್ಲಿ ಶೇ.100 ಆಸನ ಭರ್ತಿ

Film Theatres Open; ಇಂದಿನಿಂದ ಚಿತ್ರಮಂದಿರಗಳಲ್ಲಿ ಶೇ.100 ಆಸನ ಭರ್ತಿ

ಆಟವಾಡುವಾಗ 11ನೇ ಮಹಡಿಯಿಂದ ಬಿದ್ದು ಬಾಲಕ ಸಾವು

ಆಟವಾಡುವಾಗ 11ನೇ ಮಹಡಿಯಿಂದ ಬಿದ್ದು ಬಾಲಕ ಸಾವು

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist