ಬೆಂಗಳೂರು : ಮಾಜಿ ಸಚಿವ ಜಮೀರ್ ಅಹ್ಮದ್ ಇಂದು ಬೆಂಗಳೂರಿನಲ್ಲಿ ಇಡಿ ಕಚೇರಿಗೆ ವಿಚಾರಣೆಗೆಂದು ಹಾಜರಾಗಿದ್ದಾರೆ. ಈ ಕುರಿತು ಪ್ರತಿಕ್ರಿಯೆ ನೀಡಿದ ಜಮೀರ್ ಅಹ್ಮದ್ ಫೋನ್ ಮೂಲಕ ವಿಚಾರಣೆಗೆ ಅಧಿಕಾರಿಗಳು ಬುಲಾವ್ ನೀಡಿದ್ದರು ಎಂದಿದ್ದಾರೆ.

ಈಗಾಗಲೇ ದಾಖಲೆಗಳನ್ನು ಸಲ್ಲಿಕೆ ಮಾಡಿರುವ ಜಮೀರ್ ಕೆಲವು ವಿಚಾರಗಳ ಬಗ್ಗೆ ಸ್ಪಷ್ಟನೆ ನೀಡುವ ಸಂಬಂಧ ವಿಚಾರಣೆಗೆ ಬಂದಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಈಗಾಗಲೇ ನೀಡಿರುವ ದಾಖಲೆಗಳನ್ನು ಆಧರಿಸಿ ಅಧಿಕಾರಿಗಳು ಸ್ಪಷ್ಟನೆ ಪಡೆಯಲಿದ್ದಾರೆ.