ಹೈದರಾಬಾದ್ : ಟಾಲಿವುಡ್ ಕ್ಯೂಟ್ ಜೋಡಿ ನಟಿ ಸಮಂತಾ ಮತ್ತು ನಟ ನಾಗಚೈತನ್ಯ ದಾಂಪತ್ಯ ಜೀವನ ಅಂತ್ಯವಾಗಿದ್ದು ಇಂದು ಅಧಿಕೃತವಾಗಿ ತಾವು ಬೇರ್ಪಡುತ್ತಿರುವುದಾಗಿ ಘೋಷಿಸಿಕೊಂಡಿದ್ದಾರೆ. ಟ್ವಿಟರ್ ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವ ಸಮಂತಾ, ನಾಗಚೈತನ್ಯ ಜೊತೆಗಿನ ದಾಂಪತ್ಯ ಜೀವನ ಅಂತ್ಯಗೊಳಿಸುತ್ತಿರುವುದಾಗಿ ಹೇಳಿದ್ದಾರೆ.
Actress samantha samantha-naga chaitanya
ಬಹಳಷ್ಟು ಯೋಚನೆ ಮಾಡಿದ ಬಳಿಕ ಗಂಡ ಹೆಂಡತಿಯಾಗಿದ್ದ ನಾವು ಬೇರ್ಪಡಲು ನಿರ್ಧರಿಸಿದ್ದೇವೆ ಎಂದು ಅವರು ಹೇಳಿದ್ದಾರೆ ಒಂದು ದಶಕದ ಸ್ನೇಹವನ್ನು ಹೊಂದಲು ನಾವು ಅದೃಷ್ಟಶಾಲಿಯಾಗಿದ್ದೇವೆ, ಇದು ಯಾವಗಲೂ ವಿಶೇಷ ಬಾಂಧವ್ಯವಾಗಿರುತ್ತದೆ ಎಂದು ನಂಬಿದ್ದೇವೆ ಎಂದು ಸಮಂತಾ ಹೇಳಿದ್ದಾರೆ.
ಈ ಕಷ್ಟದ ಸಮಯದಲ್ಲಿ ನಮ್ಮ ಅಭಿಮಾನಿಗಳು, ಹಿತೈಷಿಗಳು ಮತ್ತು ಮಾಧ್ಯಮಗಳು ನಮ್ಮನ್ನು ಬೆಂಬಲಿಸಬೇಕು ಮತ್ತು ನಮಗೆ ಬೇಕಾದ ಗೌಪ್ಯತೆಯನ್ನು ನೀಡಬೇಕೆಂದು ನಾವು ವಿನಂತಿಸುತ್ತೇವೆ ಸಮಂತಾ ಕೇಳಿಕೊಂಡಿದ್ದಾರೆ.
ಕಳೆದ ಕೆಲವು ತಿಂಗಳುಗಳಿಂದ ಸಮಂತಾ ಮತ್ತು ನಾಗಚೈತನ್ಯ ನಡುವಿನ ವೈವಾಹಿಕ ಜೀವನದಲ್ಲಿ ಬಿರುಕು ಕಾಣಿಸಿಕೊಂಡಿದ್ದು ಅವರು ವಿವಾಹ ವಿಚ್ಛೇದನಕ್ಕೆ ತಿರ್ಮಾನಿಸಿದ್ದಾರೆ ಎಂದು ಹೇಳಲಾಗಿತ್ತು. ಈಗ ಅಧಿಕೃತವಾಗಿ ಈ ಸಂಬಂಧ ಬೇರೆಯಾಗಿದೆ.