ಲಕ್ನೌ : ಕೇಂದ್ರ ಗೃಹ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಅವರ ಕಾರು ಹಾಗೂ ಅವರ ಬೆಂಗಾವಲಿನಲ್ಲಿದ್ದ ಇನ್ನೊಂದು ವಾಹನ ಭಾನುವಾರ ಉತ್ತರ ಪ್ರದೇಶದ ಲಖಿಂಪುರ್ ಖೇರಿಯಲ್ಲಿ ರೈತರ ಮೇಲೆ ಹರಿಸಿದ ನಾಲ್ವರು ರೈತರು ಸಾವನ್ನಪ್ಪಿದ್ದಾರೆ.

ಈ ನಿಟ್ಟಿನಲ್ಲಿ ಸ್ಥಳೀಯ ಪೊಲೀಸರು ಆಶಿಶ್ ಮಿಶ್ರಾ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದಾರೆ. ಇತರ ಕೆಲವು ಹೆಸರುಗಳನ್ನು ಎಫ್‌ಐಆರ್‌ನಲ್ಲಿ ಸೇರಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ. ಎರಡೂ ಕಡೆಯವರು ನೀಡಿದ ದೂರಿನ ಪ್ರಕಾರ ಎರಡು ಎಫ್ಐಆರ್ ದಾಖಲಿಸಲಾಗಿದೆ ಎಂದು ಹೆಚ್ಚುವರಿ ಡಿಜಿ ತಿಳಿಸಿದ್ದಾರೆ.

ಸ್ಥಳೀಯವಾಗಿ ಸೆಕ್ಷನ್ 144 ವಿಧಿಸಲಾಗಿದೆ. ಮತ್ತೊಂದೆಡೆ, ರೈತರ ಮೇಲೆ ಅಪ್ಪಳಿಸಿದ ಕಾರಿನಲ್ಲಿ ತನ್ನ ಮಗ ಇದ್ದಾನೆ ಎಂಬ ಸುದ್ದಿಯನ್ನು ಸಚಿವರು ಈಗಾಗಲೇ ನಿರಾಕರಿಸಿದ್ದಾರೆ ಎಂದು ತಿಳಿದುಬಂದಿದೆ.