ಬೆಂಗಳೂರು : ಯುಪಿಯ ಲಖೀಂಪುರಲ್ಲಿ ಪ್ರತಿಭಠನೆ ಮಾಡಿದ ರೈತರ ಮೇಲೆ ಕಾರು ಹತ್ತಿಸಿ ಕೊಲ್ಲಲ್ಪಟ್ಟ ಘಟನೆಯನ್ನು ಖಂಡಿಸಿ ಬೆಂಗಳೂರಿನಲ್ಲಿ ಯುವ ಸಮುದಾಯ ಬೀದಿಗಿಳಿದಿದೆ. ಬಿಜೆಪಿ ಮತ್ತು ಸರ್ಕಾರದ ವಿರುದ್ದ, ಮೋದಿ ವಿರುದ್ದ ಘೋಷಣೆ ಕೂಗುತ್ತಿದ್ದಾರೆ.

ಸಂಯುಕ್ತ ಹೋರಾಟ ಕರ್ನಾಟಕ ಮತ್ತು ರೈತ ಸಂಘಟನೆಗಳು, ಪ್ರಗತಿಪರ ಮತ್ತು ಎಡ ಸಂಘಟನೆಗಳು ಮೈಸೂರು ಬ್ಯಾಂಕ್ ವೃತ್ತದ ಬಳಿ ಸೇರಿ ಆಕ್ರೋಶ ಹೊರ ಹಾಕಿದ್ದಾರೆ. ಬಹು ಮುಖ್ಯವಾಗಿ ಗಮನಿಸಬೇಕಾದ ಅಂಶವೆಂದರೆ ವಿದ್ಯಾರ್ಥಿ ಯುವಜನ ಸಂಘಟನೆಗಳು ಕೂಡ ಈ ಒಂದು ಬೃಹತ್ ಪ್ರತಿಭಟನೆಗೆ ಸಾಥ್ ನೀಡಿವೆ.