ಬೆಂಗಳೂರು : ಸಿಂದಗಿ ಹಾಗೂ ಹಾನಗಲ್ ಉಪ ಚುನಾವಣೆಯಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಪಕ್ಷದ ಪರವಾಗಿ ಸಾಕಷ್ಟು ದೊಡ್ಡ ಪ್ರಮಾಣದಲ್ಲಿ ಉತ್ಸಾಹ, ಬೆಂಬಲ ಸಿಕ್ಕಿದ್ದು, ಎರಡೂ ಕ್ಷೇತ್ರಗಳಲ್ಲಿ ನಾವು ಗೆಲ್ಲುತ್ತೇವೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಇದೇ ವೇಳೆ ಮಾತನಾಡಿದ ಅವರು, ಬೆಳಗ್ಗೆ 10 ರಿಂದ ರಾತ್ರಿ 10 ಗಂಟೆವರೆಗೂ ಇದ್ದ ಚುನಾವಣೆ ಪ್ರಚಾರದ ಅವಕಾಶವನ್ನು ರಾತ್ರಿ 7 ಗಂಟೆಗೆ ಸೀಮಿತಗೊಳಿಸಿ ಹೊಸ ನಿಯಮ ತಂದಿದ್ದಾರೆ. ನಾವು ನಮ್ಮದೇ ಆದ ತಂತ್ರಗಾರಿಕೆ ಮೂಲಕ ಪ್ರಚಾರ ಮಾಡುತ್ತೇವೆ.

ನಾವು ನಿತ್ಯ ಆಂತರಿಕ ವರದಿ ಪಡೆಯುತ್ತಿರುತ್ತೇವೆ. ಮುಖ್ಯಮಂತ್ರಿಗಳಿಗೂ ನಿತ್ಯ ವರದಿ ಹೋಗುತ್ತಿರುತ್ತದೆ. ಎರಡೂ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಪಕ್ಷ ಗೆಲ್ಲಲಿದೆ ಎಂಬ ಮಾಹಿತಿಯೇ ಮುಖ್ಯಮಂತ್ರಿಗಳಿಗೆ ರವಾನೆಯಾದ ವರದಿಯಲ್ಲೂ ಇದೆ. ಎಂದಿದ್ದಾರೆ.