ಮುಂಬೈ : ಲಕ್ನೋ-ಮುಂಬೈ ಪುಷ್ಪಕ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಮಹಿಳಾ ಪ್ರಯಾಣಿಕರ ಮೇಲೆ ಸುಮಾರು ೮ ದರೋಡೆಕೋರರು ಸಾಮೂಹಿಕ ಅತ್ಯಾಚಾರವೇಸಗಿದ್ದಾರೆ ಮತ್ತು ಅವರನ್ನು ವಿರೋಧಿಸಲು ಯತ್ನಿಸಿದ ಸುಮಾರು ಐದಾರು ಮಂದಿ ಸಹಪ್ರಯಾಣಿಕರನ್ನ ಗಾಯಗೊಳಿಸಿದ್ದಾರೆ.

ಉತ್ತರ ಪ್ರದೇಶದ ಲಕ್ನೋದಿಂದ ಮಹಾರಾಷ್ಟ್ರದ ಮುಂಬೈಗೆ ತೆರಳುತ್ತಿದ್ದ ರೈಲಿನಲ್ಲಿ ಮಹಿಳೆಯ ಮೇಲೆ 8 ಜನರ ಗುಂಪೊಂದು ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರು ಇಂದು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಭಂದಿಸಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ. ಉಳಿದವರಿಗಾಗಿ ಶೋಧ ನಡೆಸಲಾಗುತ್ತಿದೆ ಎಂದಿದ್ದಾರೆ. ಶುಕ್ರವಾರ ರಾತ್ರಿ, ಎಂಟು ಜನರ ತಂಡ, ಶಸ್ತ್ರಾಸ್ತ್ರಗಳನ್ನು ಹಿಡಿದು, ಲಕ್ನೋ-ಮುಂಬೈ ಪುಷ್ಪಕ್ ಎಕ್ಸ್‌ಪ್ರೆಸ್‌ನ ಸ್ಲೀಪರ್ ಕೋಚ್ ಅನ್ನು ಮಹಾರಾಷ್ಟ್ರ ರಾಜ್ಯದ ರಾಜಧಾನಿಯಿಂದ 120 ಕಿಮೀ ದೂರದಲ್ಲಿರುವ ಇಗತ್ಪುರಿ ಪಟ್ಟಣದಲ್ಲಿ ಹತ್ತಿದರು ಮತ್ತು ಪ್ರಯಾಣಿಕರನ್ನು ದರೋಡೆ ಮಾಡಲು ಪ್ರಾರಂಭಿಸಿದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ : ಯಾದಗಿರಿ ಅತ್ಯಾಚಾರ ಯತ್ನ ಮತ್ತು ಕೊಲೆ ಪ್ರಕರಣ – ಮತ್ತೆ ಇಬ್ಬರನ್ನು ಬಂಧಿಸಿದ ಪೊಲೀಸರು

ಮುಂಬೈನ ಕಾಸರ ನಿಲ್ದಾಣದಲ್ಲಿ ರೈಲು ನಿಂತಾಗ, ಪ್ರಯಾಣಿಕರು ಅಲಾರಂ ಎತ್ತುವಂತೆ ಕೂಗಲು ಆರಂಭಿಸಿದರು. ರೈಲ್ವೆ ಪೊಲೀಸರು ತಕ್ಷಣ ಸ್ಥಳಕ್ಕೆ ಆಗಮಿಸಿ ಇಬ್ಬರು ಆರೋಪಿಗಳನ್ನು ಹಿಡಿಯುವಲ್ಲಿ ಯಶಸ್ವಿಯಾದರು. ನಂತರ, ಇನ್ನಿಬ್ಬರು ಶಂಕಿತರನ್ನು ಬಂಧಿಸಲಾಗಿದೆ ಮತ್ತು ಇತರ ನಾಲ್ವರು ಆರೋಪಿಗಳಿಗಾಗಿ ಶೋಧ ನಡೆಸಲಾಗುತ್ತಿದೆ.

ಬಂಧಿತರಿಂದ ಸುಮಾರು ರೂ. 34,000 ಮೌಲ್ಯದ ಕದ್ದ ಮಾಲನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ರೈಲ್ವೆ ಪೊಲೀಸರು ಅತ್ಯಾಚಾರ ಮತ್ತು ದರೋಡೆ ಪ್ರಕರಣವನ್ನು ದಾಖಲಿಸಿದ್ದಾರೆ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.