ನವ ದೆಹಲಿ : ಪಾಕಿಸ್ತಾನದ ಉಗ್ರನನ್ನು ಮಂಗಳವಾರ ದೆಹಲಿಯಲ್ಲಿ ವಿಶೇಷ ಸೆಲ್ ಪೊಲೀಸರು ಬಂಧಿಸಿದ್ದಾರೆ. ಎಕೆ -47 ಸೇರಿದಂತೆ ಅನೇಕ ಸ್ಫೋಟಕಗಳನ್ನು ಉಗ್ರನಿಂದ ವಶಪಡಿಸಿಕೊಳ್ಳಲಾಗಿದೆ. ಆತ ಭಾರತೀಯನಾಗಿ ನಕಲಿ ಗುರುತಿನ ಚೀಟಿಯೊಂದಿಗೆ ದೆಹಲಿಯಲ್ಲಿ ವಾಸಿಸುತ್ತಿರುವುದನ್ನು ಪೊಲೀಸರು ಪತ್ತೆ ಮಾಡಿದ್ದಾರೆ.

ಮೊಹಮ್ಮದ್ ಅಸ್ರಾಫ್ ಅಲಿಯಾಸ್ ಅಲಿ ಎಂದು ಗುರುತಿಸಲ್ಪಟ್ಟ ಉಗ್ರನನ್ನು ಲಕ್ಷ್ಮಿ ನಗರದ ರಮೇಶ್ ಪಾರ್ಕ್ ಪ್ರದೇಶದಿಂದ ಬಂಧಿಸಲಾಗಿದೆ. ಇತನ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ (ತಡೆ) ಕಾಯ್ದೆ, ಸ್ಫೋಟಕ ಕಾಯ್ದೆ, ಶಸ್ತ್ರಾಸ್ತ್ರ ಕಾಯ್ದೆ ಮತ್ತು ಇತರ ಸಂಬಂಧಿತ ಕಾನೂನುಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ : Coal Shortage : ಕತ್ತಲಾಗುತ್ತವೆಯೇ ಕರುನಾಡು ಸಹಿತ ದಕ್ಷಿಣ ಭಾರತದ ರಾಜ್ಯಗಳು
ಘಟನೆಗೆ ಪ್ರತಿಕ್ರಿಯಿಸಿದ ಪೊಲೀಸ್ ಆಯುಕ್ತ ರಾಕೇಶ್ ಅಸ್ತಾನಾ, ವಿಶೇಷ ಸೆಲ್ ತಂಡವು ಪಾಕಿಸ್ತಾನಿ ಉಗ್ರನನ್ನು ಬಂಧಿಸಿದೆ ಎಂದು ಹೇಳಿದರು. ದೇಶಾದ್ಯಂತ ದಸರಾ ಹಬ್ಬದ ಹಿನ್ನೆಲೆಯಲ್ಲಿ ಒಂದು ದೊಡ್ಡ ಭಯೋತ್ಪಾದಕ ದಾಳಿಯನ್ನು ವಿಫಲಗೊಳಿಸಿದ್ದೇವೆ ಎಂದು ಸಹ ಅವರು ತಿಳಿಸಿದರು.