ಹುಬ್ಬಳ್ಳಿ : ಚಿಂತಕ, ಸಾಹಿತಿ, ನಟ ಜಿ. ಕೆ. ಗೋವಿಂದ ರಾವ್ ಅವರು ಅ.15 ರಂದು ಹುಬ್ಬಳ್ಳಿಯಲ್ಲಿ ಪುತ್ರಿಯ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 84 ವರ್ಷ ವಯಸ್ಸಾಗಿತ್ತು. ಲೇಖಕರಾಗಿ, ಪ್ರಾಧ್ಯಾಪಕರಾಗಿ, ರಂಗಭೂಮಿ ಕಲಾವಿದರಾಗಿ, ಚಿತ್ರ ನಟರಾಗಿ ಅವರು ಗುರುತಿಸಿಕೊಂಡಿದ್ದರು. ಎರಡು ತಿಂಗಳುಗಳಿಂದ ಅನಾರೋಗ್ಯಕ್ಕೀಡಾಗಿದ್ದ ಜಿ. ಕೆ. ಗೋವಿಂದ ರಾವ್ ಅವರ ಆರೋಗ್ಯ ಕಳೆದ ಐದು ದಿನಗಳಿಂದ ತೀರ ಹದಗೇಟ್ಟಿತ್ತು.

ವೃತ್ತಿಯಿಂದ ಇಂಗ್ಲಿಷ್ ಪ್ರಾಧ್ಯಾಪಕರಾಗಿದ್ದ ಅವರು, ರಂಗಭೂಮಿ ಕಲಾವಿದರೂ ಆಗಿದ್ದರು. ಮಾಲ್ಗುಡಿ ಡೇಸ್, ಮಹಾಪರ್ವ ಧಾರಾವಾಹಿ ಸೇರಿದಂತೆ ಹಲವಾರು ಧಾರವಾಹಿಗಳಲ್ಲಿ ಹಾಗೂ ಚಲನಚಿತ್ರಗಳಲ್ಲಿ ಅವರು ಅಭಿನಯಿಸಿದ್ದರು. ವಯೋಸಹಜ ಅನಾರೋಗ್ಯಕ್ಕೆ ಒಳಗಾಗಿದ್ದ ಜಿ.ಕೆ. ಗೋವಿಂದ ರಾವ್ ತಮ್ಮ ಇಳಿ ವಯಸ್ಸಿನಲ್ಲೂ ರಂಗ ಚಟುವಟಿಕೆ ಮತ್ತು ಹೋರಾಟದಲ್ಲಿ ಸಕ್ರಿಯರಾಗಿದ್ದರು.
ಇದನ್ನೂ ಓದಿ : ಚಾಲಕ ಸೈಯದ್ ಸತ್ಯಜಿತ್ ಆಗಿದ್ದು ಹೇಗೆ? ಹಿರಿಯ ಪೋಷಕ ನಟನಿಗೆ ನುಡಿನಮನ
ಬಿ.ಎಸ್.ಯಡಿಯೂರಪ್ಪ ಪ್ರೊ.ಜಿ.ಕೆ.ಜಿ ನಿಧನಕ್ಕೆ ಸಂತಾಪ ಸೂಚಿಸಿದ್ದು, ಅವರ ನಿಧನದ ಸುದ್ದಿ ತಿಳಿದು ಅತೀವ ದುಃಖವಾಗಿದೆ ಎಂದಿದ್ದಾರೆ. ಇನ್ನು ಪ್ರೊ.ಜಿ.ಕೆ.ಜಿ ನಿಧನಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ತೀವ್ರ ಆಘಾತಕ್ಕೊಳಗಾಗಿದ್ದಾರೆ ಎಂದು ತಿಳಿಸಿದ್ದಾರೆ.
ಹಿರಿಯ ಲೇಖಕ,
— Siddaramaiah (@siddaramaiah) October 15, 2021
ಚಿಂತಕ, ನಟ ಪ್ರೊ.ಜಿ.ಕೆ.ಗೋವಿಂದರಾವ್ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ.
ನನ್ನ ಹಿತೈಷಿ,
ಮಾರ್ಗದರ್ಶಕ ಮತ್ತು
ಆತ್ಮೀಯ ಸ್ನೇಹಿತರಾಗಿದ್ದ ಪ್ರೊ.ಜಿಕೆಜಿ ಅವರಿಗೆ ಗೌರವದ ನಮನಗಳು.
ಅವರನ್ನು ಕಳೆದುಕೊಂಡ ಕುಟುಂಬದ ಸದಸ್ಯರು, ಶಿಷ್ಯರು, ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ. pic.twitter.com/d3RDgJqyll
ಈ ಕುರಿತು ಟ್ವೀಟ್ ಮಾಡಿರುವ ಅವರು “ಹಿರಿಯ ಲೇಖಕ, ಚಿಂತಕ, ನಟ ಪ್ರೊ.ಜಿ.ಕೆ.ಗೋವಿಂದರಾವ್ ಸಾವಿನಿಂದ ಆಘಾತಕ್ಕೀಡಾಗಿದ್ದೇನೆ. ನನ್ನ ಹಿತೈಷಿ, ಮಾರ್ಗದರ್ಶಕ ಮತ್ತು ಆತ್ಮೀಯ ಸ್ನೇಹಿತರಾಗಿದ್ದ ಪ್ರೊ.ಜಿಕೆಜಿ ಅವರಿಗೆ ಗೌರವದ ನಮನಗಳು. ಅವರನ್ನು ಕಳೆದುಕೊಂಡ ಕುಟುಂಬದ ಸದಸ್ಯರು, ಶಿಷ್ಯರು, ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ.” ಎಂದು ಬರೆದುಕೊಂಡಿದ್ದಾರೆ.