ಬೆಂಗಳೂರು : ದೇಶದ ಜನತೆಗೆ ಶನಿವಾರ ಮತ್ತೆ ಬೆಲೆ ಏರಿಕೆಯ ಬರೆ ಬಿದ್ದಿದೆ, ಈಗಾಗಲೇ ದಿನನಿತ್ಯ ಅಗತ್ಯ ಬಳಕೆಯ ವಸ್ತುಗಳ ಬೆಲೆ ದಾಖಲೆಯ ಮಟ್ಟದಲ್ಲಿ ಏರಿಕೆಯಾಗಿ ಜನ ಜೀವನ ಅಸ್ತವ್ಯಸ್ತವಾಗಿರುವ ಈ ಹೊತ್ತಿನಲ್ಲೇ ಸತತ ನಾಲ್ಕು ದಿನಗಳಿಂದ ಇಂಧನ ಬೆಲೆ ನಿರಂತರವಾಗಿ ಏರುತ್ತ ಗಾಯದ ಮೇಲೆ ಬರೆ ಎಳೆದಂತಾಗಿದೆ.

ದೇಶದ ಸರ್ಕಾರಿ ಸ್ವಾಮ್ಯದ ತೈಲ ಸಂಸ್ಥೆಗಳು ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಮತ್ತೆ ಏರಿಕೆ ಮಾಡಿದ್ದು, ಕಳೆದ ನಾಲ್ಕು ದಿನಗಳಿಂದ ಸತತವಾಗಿ ಏರಿಕೆಯಾಗುತ್ತಿದೆ. ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ದಾಟಿ ಇಂಧನ ದರ ಏರಿಕೆಯಾಗಿದ್ದು, ಇಂದು (ಅ.16, ಶನಿವಾರ) ಕೂಡ ದೇಶದ ಎಲ್ಲಾ ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಮಾಡಲಾಗಿದೆ.

ರಾಜ್ಯ ರಾಜಧಾನಿ ಬೆಂಗಳೂರಲ್ಲಿ ಇಂದು ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 109.16 ರೂ ಆಗಿದ್ದರೆ. ಡಿಸೇಲ್ ಬೆಲೆ ಪ್ರತಿ ಲೀಟರ್‌ಗೆ 100 ರೂ ಗೆ ತಲುಪಿದೆ.
ಪ್ರತಿದಿನ ಬೆಳಿಗ್ಗೆ 6 ಗಂಟೆಗೆ ಇಂಧನ ದರ ಪರಿಷ್ಕರಣೆ – ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗೆ ಅಬಕಾರಿ ಸುಂಕಗಳನ್ನು ಸೇರಿಸಿದ ನಂತರ, ಅದರ ಬೆಲೆ ದ್ವಿಗುಣಗೊಳ್ಳುತ್ತದೆ. ಈ ಮಾನದಂಡಗಳ ಆಧಾರದ ಮೇಲೆ, ತೈಲ ಕಂಪನಿಗಳು ಪ್ರತಿದಿನ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ನಿಗದಿಪಡಿಸುತ್ತವೆ. ಪ್ರತಿನಿತ್ಯ ಹೊಸ ದರಗಳು ಬೆಳಿಗ್ಗೆ 6 ಗಂಟೆಗೆ ನಿಗದಿಯಾಗುತ್ತವೆ.