ಡೆಹ್ರಾಡೂನ್: ಕಳೆದ ನಾಲ್ಕೈದು ದಿನಗಳಿಂದ ಉತ್ತರಾಖಂಡ( Uttarakhand ) ಕೇರಳ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಮಳೆಯಾರ್ಭಟ ತೀವ್ರವಾಗಿದೆ. ಉತ್ತರಾಖಂಡದಲ್ಲಿ ಭಾರಿ ಮಳೆಯಿಂದಾಗಿ ಹಲವೆಡೆ ಭೂಕುಸಿತ ಉಂಟಾಗಿದೆ.
ನೈನಿತಾಲ್ ಜಿಲ್ಲೆಯ ಮುಕ್ತೇಶ್ವರದ ಪದವಿ ಕಾಲೇಜಿನ ಬಳಿ ಗೋಡೆ ಕುಸಿದು ಐವರು ಕಾರ್ಮಿಕರು ಮೃತಪಟ್ಟಿದ್ದಾರೆ. ಮೃತದೇಹಗಳನ್ನು ಅವಶೇಷಗಳ ಅಡಿಯಿಂದ ಹೊರತೆಗೆಯಲಾಗಿದೆ, ಮತ್ತೊಬ್ಬ ಕಾರ್ಮಿಕನನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಮಳೆಯಿಂದಾಗಿ ಈವರೆಗೆ ೨೪ ಜನ ಸಾವನ್ನಪ್ಪಿದ್ದಾರೆ ಎಂದು ಉತ್ತರಾಖಂಡ್ ಡಿಜಿಪಿ ಅಶೋಕ್ ಕುಮಾರ್ ತಿಳಿಸಿದ್ದಾರೆ.

ಬದರಿನಾಥ ಹೆದ್ದಾರಿಯಲ್ಲಿನ ಲಂಬಗಡ ಚರಂಡಿಯಲ್ಲಿ ಸಿಲುಕಿಕೊಂಡಿದ್ದ ಕಾರನ್ನು ಗಡಿ ರಸ್ತೆ ಸಂಸ್ಥೆ (ಬಿಆರ್‌ಒ) ಸುರಕ್ಷಿತವಾಗಿ ಹೊರತೆಗೆದಿದೆ. ಉತ್ತರಾಖಂಡದ ಋಷಿಕೇಶ್-ಬದರಿನಾಥ್ ಹೆದ್ದಾರಿಯನ್ನು ನಿರ್ಬಂಧಿಸಲಾಗಿದೆ. ಸಿರೋಬಗಡ್‌ನಲ್ಲಿ ವಾಹನಗಳು ಜಖಂಗೊಂಡಿವೆ. ಖಂಖ್ರಾ-ಖೇಡಾಖಾಲ್-ಖಿರ್ಸು ಸಂಪರ್ಕ ರಸ್ತೆ ಕೂಡ ಭೂಕುಸಿತದಿಂದಾಗಿ ನಿರ್ಬಂಧಿಸಲಾಗಿದೆ.
#WATCH | Uttarakhand: Occupants of a car that was stuck at the swollen Lambagad nallah near Badrinath National Highway, due to incessant rainfall in the region, was rescued by BRO (Border Roads Organisation) yesterday. pic.twitter.com/ACek12nzwF
— ANI (@ANI) October 19, 2021
ಕೋಸಿ ನದಿ ತುಂಬಿದ ಪರಿಣಾಮ ರಾಮನಗರ-ರಾಣಿಖೇತ್ ಮಾರ್ಗದಲ್ಲಿರುವ ಲೆಮನ್ ಟ್ರೀ ರೆಸಾರ್ಟ್‌ನಲ್ಲಿ ಸುಮಾರು 100 ಜನರು ಸಿಲುಕಿಕೊಂಡಿದ್ದಾರೆ. ಅವರೆಲ್ಲರು ಸುರಕ್ಷಿತವಾಗಿದ್ದು, ರಕ್ಷಿಣಾ ಕಾರ್ಯಚಾರಣೆ ನಡೆಯುತ್ತಿದೆ. ಕೋಸಿ ನದಿ ತುಂಬಿದ ಪರಿಣಾಮ ನದಿ ನೀರು ರೆಸಾರ್ಟ್ ಪ್ರವೇಶಿಸಿದೆ. ರೆಸಾರ್ಟ್‌ಗೆ ಹೋಗುವ ಮಾರ್ಗವನ್ನು ನಿರ್ಬಂಧಿಸಲಾಗಿದೆ ಎಂದು ಉತ್ತರಾಖಂಡ್ ಡಿಜಿಪಿ ಅಶೋಕ್ ಕುಮಾರ್ ತಿಳಿಸಿದ್ದಾರೆ.
Around 100 people were stuck at Lemon Tree Resort (in pics) located at Ramnagar-Ranikhet route. All of them are safe & process to rescue them is on. Water from Kosi River entered the resort after the river overflowed, blocking the route to the resort: Uttarakhand DGP Ashok Kumar pic.twitter.com/2UUmWJaaYR
— ANI (@ANI) October 19, 2021
ಉತ್ತರಾಖಂಡದ ಚಮೋಲಿ ಜಿಲ್ಲೆಯ ಬದರಿನಾಥ ರಾಷ್ಟ್ರೀಯ ಹೆದ್ದಾರಿಯನ್ನು ಕಳೆದ 48 ಗಂಟೆಗಳಿಂದ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಏಳು ಸ್ಥಳಗಳಲ್ಲಿ ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಡಳಿತ ಮಂಗಳವಾರ ತಿಳಿಸಿದೆ. ಜಿಲ್ಲಾ ಕೇಂದ್ರ ಸೇರಿದಂತೆ ಹಲವು ಪ್ರದೇಶಗಳಲ್ಲಿ ಸೋಮವಾರ ರಾತ್ರಿಯಿಂದ ವಿದ್ಯುತ್ ಕಡಿತವಾಗಿದೆ.
Prayers for #UttarakhandRain
— Awanish Sharan (@AwanishSharan) October 19, 2021
Respect for the ‘Khaki’.🙏 🇮🇳 pic.twitter.com/WUyyBWsLnk
ಮುಂಜಾಗ್ರತಾ ಕ್ರಮವಾಗಿ ಬದರಿನಾಥ ಚಾರ್ ಧಾಮ್ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿದೆ ಮತ್ತು ಬದರಿನಾಥ ದೇವಸ್ಥಾನಕ್ಕೆ ಹೋಗುವ ಪ್ರಯಾಣಿಕರನ್ನು ಸುರಕ್ಷಿತ ಸ್ಥಳಗಳಿಗೆ ಕಳುಹಿಸಲಾಗಿದೆ. ನಂದಾಕಿನಿ ನದಿಯಲ್ಲಿ ನೀರಿನ ಮಟ್ಟ ಕೂಡ ಗಣನೀಯವಾಗಿ ಏರಿಕೆಯಾಗಿದ್ದು, ಅಪಾಯದ ಮಟ್ಟ ತಲುಪುತ್ತಿದೆ. ಡೆಹ್ರಾಡೂನ್ ಹವಾಮಾನ ಕೇಂದ್ರದ ಪ್ರಕಾರ, ಚಮೋಲಿಯಲ್ಲಿ ಕಳೆದ 24 ಗಂಟೆಗಳಲ್ಲಿ 19.8 ಮಿಮೀ ಮಳೆಯಾಗಿದೆ. ಭಾರತ ಹವಾಮಾನ ಇಲಾಖೆ (ಐಎಂಡಿ) ಉತ್ತರಾಖಂಡಕ್ಕೆ ರೆಡ್ ಅಲರ್ಟ್ ಘೋಷಿಸಿದ್ದು, ರಾಜ್ಯದಲ್ಲಿ ಭಾರಿ ಮತ್ತು ಅತಿ ಹೆಚ್ಚು ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.