ಮಡಿಕೇರಿ : ರಾಜ್ಯ ಸರ್ಕಾರ ಕೆಲವೇ ದಿನಗಳ ಹಿಂದೆ ಪ್ರಾಥಮಿಕ ಶಾಲೆಗಳನ್ನು ತೆರೆಯಲು ಅನುಮತಿ ನೀಡಿತ್ತು ಆದರೆ ಕೇವಲ ಒಂದೆ ವಾರದಲ್ಲಿ ಶಾಲಾ ಸಿಬ್ಬಂದಿಗಳು, ಮಕ್ಕಳು ಹಾಗೂ ಪೋಷಕರು ಬೆಚ್ಚಿ ಬೀಳುವಂತಹ ವರದಿಯೊಂದು ಹೊರಬಿದ್ದಿದೆ. ಒಂದೇ ಶಾಲೆಯಲ್ಲಿ 32 ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ಧೃಡಪಟ್ಟಿದೆ.

ಕೊಡಗು ಜಿಲ್ಲೆಯ ಮಡಿಕೇರಿಯಲ್ಲಿರುವ ಜವಾಹರ್ (ನವೋದಯ ವಿದ್ಯಾಲಯ ವಸತಿ) ಶಾಲೆಯಲ್ಲಿ 32 ವಿದ್ಯಾರ್ಥಿಗಳು ಮತ್ತು ಒಬ್ಬ ಸಿಬ್ಬಂದಿಗೆ ಕೊರೊನ ಪಾಸಿಟಿವ್ ಬಂದಿದೆ. ಅವರಲ್ಲಿ 10 ವಿದ್ಯಾರ್ಥಿಗಳಿಗೆ ರೋಗಲಕ್ಷಣಗಳಿದ್ದರೆ ಇನ್ನೂ 22 ಮಂದಿಗೆ ಯಾವುದೇ ರೋಗಲಕ್ಷಣಗಳಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಎಲ್ಲರನ್ನು ಈಗಾಗಲೇ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಅವರು ಹೇಳಿದರು.
ಇದನ್ನೂ ಓದಿ : IMMUNITY SYSTEM : ರೋಗ ನಿರೋಧಕ ಶಕ್ತಿ ವೃದ್ಧಿಸಿಕೊಳ್ಳಲು ಸರಳ ಉಪಾಯಗಳು
ಶಾಲೆಯಲ್ಲಿ ಒಟ್ಟು 270 ವಿದ್ಯಾರ್ಥಿಗಳಿದ್ದು, ಎಲ್ಲರೂ ಕರೋನಾ ಪರೀಕ್ಷೆಗೆ ಒಳಗಾಗಿದ್ದಾರೆ ಎಂದು ಶಾಲೆಯ ಪ್ರಾಂಶುಪಾಲರು ತಿಳಿಸಿದ್ದಾರೆ. ವಿದ್ಯಾರ್ಥಿಗಳ ಬಗ್ಗೆ ಪಾಲಕರು/ಪೋಷಕರು ಆತಂಕ ಪಡುವ ಅಗತ್ಯವಿಲ್ಲ ಎಲ್ಲರೂ ಕ್ಷೇಮವಾಗಿದ್ದಾರೆ. ಇಡೀ ಕ್ಯಾಂಪಸ್ ಅನ್ನು ಸ್ಯಾನಿಟೈಸ್ ಮಾಡಲಾಗಿದೆ ಎಂದು ಅವರು ಹೇಳಿದರು.