ಬೆಂಗಳೂರು : ಕನ್ನಡದ ಪ್ರತಿಭಾನ್ವಿತ ನಟ ಪುನೀತ್ ರಾಜಕುಮಾರ್ ಅವರು ಇಂದು ಅಕಾಲಿಕವಾಗಿ ನಿಧನ ಹೊಂದಿದ್ದಾರೆ. ಇಂದು ಬೆಳಿಗ್ಗೆ ಲಘು ಹೃದಯಾಘಾತವಾದ ಹಿನ್ನೆಲೆಯಲ್ಲಿ ಅವರನ್ನು ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆ ಫಲಕಾರಿಯಾಗದೆ ಪುನೀತ್ ಇಹಲೋಕ ತ್ಯಜಿಸಿದ್ದಾರೆ.

ಪುನೀತ್ ರಾಜಕುಮಾರ್ ಅವರಿಗೆ 46 ವರ್ಷ ವಯಸ್ಸಾಗಿತ್ತು. ತನ್ನ ನೆಚ್ಚಿನ ನಟನ ಸಾವನ್ನ ಅರಗಿಸಿಕೊಳ್ಳಲು ಸಾಧ್ಯವಾಗದ ಅಭಿಮಾನಿಗಳು ಕಣ್ಣೀರು ಸುರಿಸಿದ್ದಾರೆ. ತಮ್ಮ ತಂದೆಯ ಹಾದಿಯಲ್ಲಿ ಸಾಗಿರುವ ಅಂತಹ ನಟ ಪುನೀತ್ ರಾಜಕುಮಾರ್ ನೇತ್ರದಾನ ಮಾಡುವ ಮೂಲಕ ಸಾರ್ಥಕತೆಯನ್ನು ಮೆರೆದಿದ್ದಾರೆ ಪುನೀತ್ ನಿಧನಕ್ಕೆ ನಾಡು ಅಪಾರ ಶೋಕದಲ್ಲಿ ಮುಳುಗಿದ್ದು ಸಂತಾಪ ಸೂಚಿಸಲಾಗುತ್ತಿದೆ
ಇದನ್ನೂ ಓದಿ : Puneeth Rajkumar; ಅಪ್ಪು ಸಾವಿನ ಸುದ್ದಿ ಕೇಳಿ ಅಭಿಮಾನಿ ಹೃದಯಾಘಾತದಿಂದ ಸಾವು
ಪಾರ್ಥಿವ ಶರೀರವನ್ನ ವಿಕ್ರಮ್ ಆಸ್ಪತ್ರೆಯಿಂದ ಸದಾಶಿವನಗರದಲ್ಲಿರುವ ಪುನೀತ್ ಅವರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆಯನ್ನು ಮಾಡಲಾಗಿತ್ತು. ಹಾಗೂ ಸಾರ್ವಜನಿಕರಿಗೆ ಕಂಠೀರವ ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ನಾಳೆ ಶನಿವಾರ ಇಡೀ ದಿನ ಅಂತಿಮ ದರ್ಶನಕ್ಕೆ ವ್ಯವಸ್ಥೆ ಇರುತ್ತದೆ. ಭಾನುವಾರ ಅಂತಿಮ ಸಂಸ್ಕಾರ ಮಾಡಲಾಗುವುದು ಎಂದು ಕುಟುಂಬಸ್ಥರು ತಿಳಿಸಿದ್ದಾರೆ. ಅಭಿಮಾನಿಗಳು ಶಾಂತಿಯಿಂದ ಪುನೀತ್ ಅವರನ್ನು ಕಳುಹಿಸಿಕೊಡಬೇಕು ಎಂದು ರಾಘವೇಂದ್ರ ರಾಜಕುಮಾರ, ಸಿ ಎಂ ಬಸವರಾಜ್ ಬೊಮ್ಮಾಯಿ, ಅಶೋಕ್ ಸೇರಿದಂತೆ ಹಲವಾರು ಗಣ್ಯರು ಮನವಿ ಮಾಡಿದ್ದಾರೆ.
ಇದನ್ನೂ ಓದಿ : ಅಪ್ಪು ಅಗಲಿಕೆಗೆ ಪ್ರಧಾನಿ ಮೋದಿ, ರಾಹುಲ್ ಗಾಂಧಿ ಸೇರಿದಂತೆ ಗಣ್ಯರ ಸಂತಾಪ
ಇನ್ನು ನಟ ಪುನೀತ ನಿಧನದ ಹಿನ್ನೆಲೆಯಲ್ಲಿ ಕೆಲವು ಖಾಸಗಿ ಶಾಲೆಗಳಿಂದ ನಾಳೆ ಒಂದು ದಿನ ರಜೆ ಘೋಷಣೆ ಮಾಡಲಾಗಿದೆ. ಈ ಕುರಿತು ಖಾಸಗಿ ಶಾಲೆಗಳ ಒಕ್ಕೂಟದಿಂದ ಘೋಷಣೆ ಮಾಡಲಾಗಿದೆ. ಬೆಂಗಳೂರು ನಗರ ವಿವಿಯ ಅಂತಿಮ ವರ್ಷದ ವಿದ್ಯಾರ್ಥಿಗಳ ಪರೀಕ್ಷೆಯನ್ನು ಸಹ ಮುಂದೂಡಿಕೆ ಮಾಡಲಾಗಿದೆ. 30 ಕೇಂದ್ರಗಳಿಗೆ ಪರೀಕ್ಷೆಗೆ ವ್ಯವಸ್ಥೆಯನ್ನು ಮಾಡಿಕೊಳ್ಳಲಾಗಿತ್ತು. ಪುನೀತ್ ರಾಜಕುಮಾರ್ ಅಕಾಲಿಕ ನಿಧನದ ಹಿನ್ನೆಲೆಯಲ್ಲಿ ನಾಳೆ ನಡೆಯಬೇಕಿದ್ದ ಪರೀಕ್ಷೆಗಳು ಮುಂದೂಡಿಕೆ ಮಾಡಲಾಗಿದೆ. ಇನ್ನೂ ಇವತ್ತಿನ ಈ ಪರೀಕ್ಷೆಗಳನ್ನ ಮಂಗಳವಾರ ನಡೆಸಲಾಗುವುದು ಎಂದು ವಿವಿ ತಿಳಿಸಿದೆ.