ಕನ್ನಡದ ಯುವರತ್ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇಹಲೋಕ ತ್ಯಜಿಸಿದ್ದಾರೆ. ಕನ್ನಡದ ಮನೆಮಗನಂತಿದ್ದ ಪುನೀತ್ ಸಾವು ನಾಡಿಗೆ ಆಘಾತವನ್ನುಂಟು ಮಾಡಿದೆ.ಕನ್ನಡದ ಯುವರತ್ನ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಇಹಲೋಕ ತ್ಯಜಿಸಿದ್ದಾರೆ. ಕನ್ನಡದ ಮನೆಮಗನಂತಿದ್ದ ಪುನೀತ್ ಸಾವು ನಾಡಿಗೆ ಆಘಾತವನ್ನುಂಟು ಮಾಡಿದೆ.
ಬೆಳಿಗ್ಗೆ ವ್ಯಾಯಾಮ ಮಾಡುವ ಸಂದರ್ಭ ಹೃದಯಾಘಾತಕ್ಕೊಳಗಾದ ಪುನೀತ್ ವಿಕ್ರಂ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ.
ಇನ್ನು ಅಪ್ಪು ಅಂತಿಮ ದರ್ಶನಕ್ಕೆ ಎಲ್ಲಾ ಸಿದ್ಧತೆಗಳೂ ನಡೆದಿದ್ದು ಕಂಠೀರವ ಸ್ಟೇಡಿಯಂನಲ್ಲಿ ನಾಳೆ ಪೂರ್ತಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.
ಸದಾಶಿವನಗರದ ಪುನೀತ್ ನಿವಾಸದಿಂದ ಪಾರ್ಥೀವ ಶರೀರವನ್ನು ಕಂಠೀರವ ಸ್ಟೇಡಿಯಂಗೆ ಕೊಂಡೊಯ್ಯಲಾಗಿದೆ. ಸ್ಟೇಡಿಯಂ ಹಾಗೂ ನಿವಾಸದ ಬಳಿ ತಮ್ಮ ನೆಚ್ಚಿನ ನಟನ ಅಂತಿಮ ದರ್ಶನ ಪಡೆಯಲು ಅಭಿಮಾನಿಗಳು ಕಿಕ್ಕಿರಿದು ಸೇರಿದ್ದಾರೆ.