ಇಂದು ನಡೆಯಬೇಕಿದ್ದ ನಟ ಪುನೀತ್ ರಾಜಕುಮಾರ್ ಅಂತ್ಯಕ್ರಿಯೆ ನಾಳೆ ನಡೆಯಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಇಂದು ಸಂಜೆ ಪುನೀತ್ ಅಂತ್ಯಕ್ರಿಯೆ ಎಂದು ನಿರ್ಧಾರವಾಗಿತ್ತು. ಆದರೆ ಸಾಗರೋಪಾದಿಯಲ್ಲಿ ನೆರೆಯುತ್ತಿರುವ ಅಭಿಮಾನಿ ಬಳಗವನ್ನು ನಿಯಂತ್ರಿಸುವುದು ಕಷ್ಟಸಾಧ್ಯವಾಗುತ್ತಿದ್ದು ಹಾಗಾಗಿ ನಾಳೆಯವರೆಗೂ ಅಭಿಮಾನಿಗಳಿಗೆ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಸಿಎಂ ತಿಳಿಸಿದ್ದಾರೆ.
ಕುಟುಂಬದವರೊಂದಿಗೆ ಚರ್ಚೆ ನಡೆಸಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಅಂದು ಸಿಎಂ ತಿಳಿಸಿದ್ರು.

ಮತ್ತೆ ಮಾತನಾಡಿದ ರಾಘವೇಂದ್ರ ರಾಜಕುಮಾರ್ ‘ನೆನ್ನೆಯಿಂದಲೂ ಶಾಂತಿಯಿಂದ ಸಹಕರಿಸಿದ ಎಲ್ಲ ಅಭಿಮಾನಿಗಳಿಗೂ ಧನ್ಯವಾದಗಳು. ಅಪ್ಪು ಮಗಳು ಬರುವುದು ಸಂಜೆಯಾಗುವ ಕಾರಣ ಸಂಜೆಯ ಮೇಲೆ ಜನರ ನಿಯಂತ್ರಣ ಕಷ್ಟವಾಗಬಹುದು. ಈ ನಿಟ್ಟಿನಲ್ಲಿ ಸರ್ಕಾರದೊಂದಿಗೆ ಚರ್ಚಿಸಿ ನಾಳೆ ಅಂತ್ಯಕ್ರಿಯೆ ನಡೆಸಲು ನಿರ್ಧರಿಸಲಾಗಿದೆ. ಅಪ್ಪು ಆತ್ಮಕ್ಕೆ ಶಾಂತಿ ಸಿಗಲು ಅಭಿಮಾನಿಗಳು ಯಾವುದೇ ಅಹಿತಕರ ಘಟನೆಗಳನ್ನು ನಡೆಸದಂತೆ ಶಾಂತಿಯುತವಾಗಿ ಕಳುಹಿಸಿಕೊಡಿ’ ಎಂದು ಕೋರಿದರು.