ಬೆಂಗಳೂರು:(ನ 9):Sand Policy: ಗ್ರಾಮೀಣ ವಸತಿ ಯೋಜನೆಯಲ್ಲಿ ಗ್ರಾಮೀಣ ಜನರಿಗೆ ಮನೆ ಕಟ್ಟಿಕೊಳ್ಳಲು ರಿಯಾಯಿತಿ ದರದಲ್ಲಿ ಮರಳು ಪೂರೈಕೆ ಮಾಡಲು ಮರಳು ನೀತಿಗೆ ಅನುಮತಿ ನೀಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ ಸಿ ಮಧುಸ್ವಾಮಿ ಅವರು ತಿಳಿಸಿದರು.
ನದಿ ತೊರೆ ಹಳ್ಳ ಕೆರೆ ಜಲಾಶಯಗಳಲ್ಲಿ ಮರಳು ಗಣಿಗಾರಿಕೆ ನಡೆಸಿ ಅಗ್ಗದ ದರದಲ್ಲಿ ಗ್ರಾಹಕರಿಗೆ ಮರಳು ಪೂರೈಕೆ ಮಾಡುವ ಹೊಸ ಮರಳು ನೀತಿಗೆ ನೆನ್ನೆ ನೆಡೆದ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಯಿತು.
ಯಂತ್ರಗಳನ್ನು ಬಳಸುವಂತಿಲ್ಲ:
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸ್ಥಳೀಯರು ತಮ್ಮ ಮನೆಗಳಿಗೆ ಮನೆ ಕಟ್ಟಿಕೊಳ್ಳಲು ಮರಳು ಬಳಸಬಹುದು.
ನದಿಯಲ್ಲಿ ಮುಳುಗಿ ಮರಳು ತೆಗೆಯುವುದಕ್ಕೆ ಅವಕಾಶವಿದೆ ಆದರೆ ಮರಳು ತೆಗೆಯುವಾಗ ಯಾವುದೇ ಯಂತ್ರ ಉಪಕರಣಗಳನ್ನು ಬಳಸುವಂತಿಲ್ಲ.
ಪರಿಸರಕ್ಕೆ ಹಾನಿಯಾಗುವಂತೆ ಮರಳು ತೆಗೆಯುವುದಕ್ಕೆ ಅವಕಾಶವಿಲ್ಲ ಎಂದು ಮಾಧುಸ್ವಾಮಿ ಅವರು ತಿಳಿಸಿದರು.

ಮರಳು ಸಾಗಾಣಿಕೆಗೆ ಮೂರು ಹಂತ
ಮರಳು ಗಣಿಗಾರಿಕೆ ಮಾಡಿ ಅದರ ಸಾಗಣೆಗಾಗಿ 3 ಹಂತಗಳಲ್ಲಿ ವಿಂಗಡಿಸಲಾಗಿದೆ. ಕರ್ನಾಟಕ ಉಪ ಖನಿಜ ರಿಯಾಯಿತಿ ತಿದ್ದುಪಡಿ ನಿಯಮ 2021 ಕ್ಕೆ ಸಂಪುಟ ಅನುಮೋದನೆ ನೀಡಿದೆ. ಗ್ರಾಮ ಮಟ್ಟ, ನದಿ ಪಾತ್ರ ಹಾಗೂ ಸಮುದ್ರತೀರ ಎಂದು ವಿಭಜಿಸಲಾಗಿದೆ.ಗ್ರಾಮಮಟ್ಟದಲ್ಲಿ ಮಾರಲು ಪ್ರತಿ ಟನ್‌ಗೆ ₹300, ನದಿ ಸೇರುವ ಪಾತ್ರಗಳು ಮತ್ತು ಪಟ್ಟಣಗಳಿಗೆ ಟನ್‌ಗೆ ₹700 ನಿಗದಿ ಮಾಡಲಾಗಿದೆ ಎಂದರು.
ಗ್ರಾಮ ಪಂಚಾಯತಿಗೆ ಅವಕಾಶ
ಗ್ರಾಮ ಪಂಚಾಯತಿಗಳಿಗೆ ಜಿಲ್ಲಾ ಕಾಲೇಜ ಟ್ರಸ್ಟ್ ನಿಂದ ಶೇಕಡ ಎರಡರಷ್ಟು ನಿಧಿಯ ನೀಡಲು ಅವಕಾಶವನ್ನು ಕಲ್ಪಿಸಲಾಗಿದೆ. ಗ್ರಾಮ ಪಂಚಾಯತಿ ಮಟ್ಟದಲ್ಲಿ ಮರಳು ಶೇಖರಣೆ ಮಾಡಿ ಮಾರಾಟ ಮಾಡಲು ಅವಕಾಶವಿದೆ.
ಸರ್ಕಾರಕ್ಕೆ ಬರುವ ಶೇ 50ರಷ್ಟು ರಿಯಲ್ಟಿಯಲ್ಲಿ ಶೇ 25 ರಷ್ಟು ಆಯ ಪಂಚಾಯತಿಗಳಿಗೆ ನೀಡಲಾಗುವುದು.
ಸರ್ಕಾರ ವಸತಿ ಯೋಜನೆಯ ಸೇರಿದಂತೆ ವಿವಿಧ ಯೋಜನೆಗಳು ಬಡವರಿಗೆ ರಿಯಾಯಿತಿ ದರದಲ್ಲಿ ಮರಳು ನೀಡುವ ಅಧಿಕಾರವನ್ನು ಗ್ರಾಮಪಂಚಾಯಿತಿಗಳಿಗೆ ನೀಡಲಾಗಿದೆ.
ಸಂಪುಟ ಸಭೆಯಲ್ಲಿ ಚರ್ಚೆಯಾದ ವಿಷಯಗಳು:
1.ಜಿಲ್ಲಾ ಮಟ್ಟದಲ್ಲಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮತ್ತು ತಾಲ್ಲೂಕು ಮಟ್ಟದಲ್ಲಿ ಉಪವಿಭಾಗಾಧಿಕಾರಿಗಳ ಅಧ್ಯಕ್ಷತೆಯಲ್ಲಿ ‘ಮರಳು ಸಮಿತಿ’ಗಳ ರಚನೆ.
2.ಮರಳು ಗಣಿಗಾರಿಕೆ ಮತ್ತು ಸಾಗಣೆಯ ಉಸ್ತುವಾರಿಯನ್ನು ಈ ಸಮಿತಿಗಳು ಮೇಲುಸ್ತುವಾರಿ ವಹಿಸಲಿದೆ. ನಿಯಮಗಳ ಉಲ್ಲಂಘನೆ ಮಾಡಿದಲ್ಲಿ ದಂಡಿಸುವ ಅಧಿಕಾರ ನೀಡಲಾಗಿದೆ.
ದ್ವಿಚಕ್ರ ವಾಹನ, ಎತ್ತಿನಗಾಡಿ, ಟ್ರ್ಯಾಕ್ಟರ್, ಕತ್ತೆ ಮೇಲೆ ಮರಳು ಕೊಂಡೊಯ್ಯವ ರೈತರು ಮತ್ತು ಬಡವರಿಗೆ ವಿನಾಯಿತಿ ನೀಡಲಾಗುವುದು.
3.ಪಟ್ಟಾ ಭೂಮಿಯಲ್ಲಿ ಮರಳು ಗಣಿಗಾರಿಕೆ ನಿಷೇಧಿಸಲಾಗಿದ್ದರೂ, ಜಿಲ್ಲಾ ಮತ್ತು ತಾಲ್ಲೂಕು ಮರಳು ಸಮಿತಿಗಳಿಂದ ಅನಮತಿ ಪಡೆಯುವುದು ಕಡ್ಡಾಯ. ಇದಕ್ಕೆ ಸಮಿತಿಗಳು ಸಮಜಾಯಿಷಿ ನೀಡಬೇಕು.
4.ಸ್ವಂತ ಬಳಕೆಗಾಗಿ ಟ್ರ್ಯಾಕ್ಟರ್, ಎತ್ತಿನ ಬಂಡಿ, ದ್ವಿಚಕ್ರವಾಹನಗಳಲ್ಲಿ ಮರಳು ಸಾಗಣೆ ಮಾಡಿದರೆ ಪ್ರಕರಣ ದಾಖಲಿಸುವುದಿಲ್ಲ.ಮರಳನ್ನು ಬೇರೆ ಜಿಲ್ಲೆಗಳಿಗೆ ಸಾಗಣೆ ಮಾಡುವಂತಿಲ್ಲ. ಒಂದು ವೇಳೆ ಸಾಗಣಿಕೆ ಮಾಡಿದರೆ ಪ್ರಕರಣ ದಾಖಲಿಸಲಾಗುವುದು.
5.ಕೇಂದ್ರ ಪರಿಸರ ಮತ್ತು ಅರಣ್ಯ ಇಲಾಖೆಯು ಗಣಿಗಾರಿಕೆ ಸಂಬಂಧ ಹೊರಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು.