ಬರ್ಮರ್ (ರಾಜಸ್ಥಾನ್) : ರಾಜಸ್ಥಾನ (Rajasthan) ದಲ್ಲಿ ಬುಧವಾರ ಸಂಭವಿಸಿದ ಭೀಕರ ರಸ್ತೆ ದುರಂತದಲ್ಲಿ ಕನಿಷ್ಠ 12 ಜನರು ಸಾವನ್ನಪ್ಪಿದ್ದಾರೆ. ಹಲವಾರು ಜನ ಗಾಯಗೊಂಡಿದ್ದಾರೆ. ಬಾರ್ಮರ್-ಜೋಧ್‌ಪುರ ರಾಷ್ಟ್ರೀಯ ಹೆದ್ದಾರಿ (Bermar Jodhpur Highway) ಯಲ್ಲಿ ವೇಗವಾಗಿ ಚಲಿಸುತ್ತಿದ್ದ ತೈಲ ಟ್ಯಾಂಕರ್ (Oil Tanker) ಖಾಸಗಿ ಬಸ್ (Private Bus) ಗೆ ಡಿಕ್ಕಿ ಹೊಡೆದು ಬೆಂಕಿ (Fire) ಹೊತ್ತಿಕೊಂಡಿದೆ.

12 ಮಂದಿ ಪ್ರಯಾಣಿಕರು (12 Passengers) ಬೆಂಕಿಗೆ ಆಹುತಿಯಾಗಿದ್ದಾರೆ. ಅಪಘಾತ ಸಂಭವಿಸಿದಾಗ ಬಸ್ ನಲ್ಲಿ 25 ಮಂದಿ ಪ್ರಯಾಣಿಕರಿದ್ದರು. ಅಪಘಾತಕ್ಕೀಡಾದ ಬಸ್‌ನಿಂದ ಹತ್ತು ಮೃತದೇಹಗಳನ್ನು ಹೊರತೆಗೆಯಲಾಗಿದೆ. ಪೊಲೀಸರು ಮತ್ತು ಜಿಲ್ಲಾಧಿಕಾರಿಗಳು ಸ್ಥಳಕ್ಕೆ ಧಾವಿಸಿದ್ದಾರೆ. ಈ ಭೀಕರ ದುರಂತದ ನಂತರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಹಳ ಕಾಲ ಸಂಚಾರ ಅಸ್ತವ್ಯಸ್ತಗೊಂಡು ಬಹುತೇಕ ಸ್ಥಗಿತಗೊಂಡಿತ್ತು.

ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್‌ರವರು ಅಲ್ಲಿಯ ಜಿಲ್ಲಾಧಿಕಾರಿಗಳ ಜೊತೆಗೆ ಮಾತನಾಡಿ ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ನೀಡುವಂತೆ ತಿಳಿಸಿದ್ದಾರೆ.