ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾನ್ಯ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ರವರು ಇಂದು ದೇಶದ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿದ್ದಾರೆ. ಭೇಟಿಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಬಸವರಾಜ್ ಬೊಮ್ಮಾಯಿ ಅವರು ಪ್ರಧಾನಿಗಳ ಜೊತೆ ಮಾತುಕತೆ ಉತ್ತಮವಾಗಿ ನಡೆದಿದೆ. ಹಲವಾರು ವಿಷಯಗಳ ಬಗ್ಗೆ ಚರ್ಚೆ ಮಾಡಿದೆವು ಎಂದು ಹೇಳಿದರು.

ನೂರು ದಿನಗಳಲ್ಲಿ ಕೈಗೊಂಡ ಕಾರ್ಯಕ್ರಮಗಳ ಬಗ್ಗೆ ಚರ್ಚೆ ಮಾಡಿದರು. 4 ಕಾರ್ಯಕ್ರಮಗಳಿಗೆ ನಾನು ಆಹ್ವಾನ ನೀಡಿದ್ದೇನೆ. ಆದರೆ ಅವರು ಡಿಸೆಂಬರ್ ನಲ್ಲಿ ಎರಡು ದಿನಾಂಕಗಳನ್ನು ಗೊತ್ತುಮಾಡಿದರೆ ಕಾರ್ಯಕ್ರಮಗಳಿಗೆ ಬರುವುದಾಗಿ ಹೇಳಿದರು. ಅಲ್ಲದೇ ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಚರ್ಚೆ ನಡೆಸಿದ್ದೇವೆ, ರೈತರ ಮಕ್ಕಳ ಯೋಜನೆಯನ್ನು ಸಮರ್ಪಕವಾಗಿ ಜಾರಿಗೆ ತರಲು ಸೂಚನೆ ನೀಡಿದ್ದಾರೆ ಎಂದು ಹೇಳಿದರು.
ಇದನ್ನೂ ಓದಿ: ಹೈನುಗಾರರಿಗೆ ಮತ್ತೆ ಶಾಕ್! ಹಾಲಿನ ಬೆಲೆ ಕಡಿತ!
ರಾಜ್ಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಬಿಟ್-ಕಾಯಿನ್ ಬಗ್ಗೆ ಯಾವುದೇ ಪ್ರಸ್ತಾಪ ಮಾಡಿಲ್ಲದಿದ್ದರೂ ಅವರು ಯಾವುದಕ್ಕೂ ತಲೆ ಕೆಡಿಸಿಕೊಳ್ಳಬೇಡಿ, ಧೈರ್ಯವಾಗಿ ನೀವು ಕೆಲಸಗಳನ್ನು ಮುಂದುವರೆಸಿ ಎಂದು ಸಲಹೆ ನೀಡಿದರು ಎಂದು ಬಸವರಾಜ್ ಬೊಮ್ಮಾಯಿ ಅವರು ಸುದ್ದಿಗಾರರೊಂದಿಗೆ ಹಂಚಿಕೊಂಡಿದ್ದಾರೆ.