ವಾರದಿಂದಲೂ ಸುದ್ದಿಯಲ್ಲಿರುವ ಸಿಎಂ ಬದಲಾವಣೆ ವಿಚಾರದಲ್ಲಿ ಇಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯಿಸಿದ್ದು ಸಿಎಂ ಬದಲಾವಣೆ ಬಗ್ಗೆ ಮಾರ್ಮಿಕವಾಗಿ ಮಾತನಾಡಿದ್ದಾರೆ.

ಪ್ರತಿಪಕ್ಷ ನಾಯಕರುಗಳೆಲ್ಲರೂ ಸಿಎಂ ಬದಲಾಗಲಿದ್ದಾರೆ ಎಂದು ಭವಿಷ್ಯ ನುಡಿಯುತ್ತಲೇ ಇದ್ದು ಇಲ್ಲಿಯವರೆಗೆ ಮೌನವಾಗಿದ್ದ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಇಂದು ಸಿಎಂ ಬದಲಾವಣೆ ಬಗ್ಗೆ ಮಾತನಾಡಿದ್ದಾರೆ. ಸಿಎಂ ಬೊಮ್ಮಾಯಿಯವರು ಬಹಳ ಹುಮ್ಮಸ್ಸಿನಲ್ಲಿ ಇದ್ದಾರೆ. ಸಿಎಂ ಆಗಿ ಬಸವರಾಜ ಬೊಮ್ಮಾಯಿಯವರಿಗೆ ಕೆಲಸ ಮಾಡಲು ಬಿಡಿ. ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದ್ದಾರೆ.
ಇದನ್ನೂ ಓದಿ: ಹೈನುಗಾರರಿಗೆ ಮತ್ತೆ ಶಾಕ್! ಹಾಲಿನ ಬೆಲೆ ಕಡಿತ!
ಇದಲ್ಲದೇ ಜೊತೆಗೆ “ಇದೇ ಅವಧಿಯಲ್ಲಿ ನನ್ನನ್ನೂ ಸೇರಿಸಿ ನಾಲ್ಕು ಜನ ಮುಖ್ಯಮಂತ್ರಿಗಳು ಆಗಬಹುದೋ ಏನೋ” ಎಂದು ಮಾರ್ಮಿಕವಾಗಿ ನುಡಿದಿದ್ದು ಇದು ಸಿಎಂ ಬದಲಾವಣೆ ಬಗ್ಗೆ ಮತ್ತಷ್ಟು ಗೊಂದಲವನ್ನು ಸೃಷ್ಟಿಸಿದೆ.