ಮಳೆಯ ನಡುವೆ ಅಸ್ವಸ್ಥಗೊಂಡು ಬಿದ್ದಿದ್ದ ವ್ಯಕ್ತಿಯನ್ನು ರಕ್ಷಿಸಿದ ಮಹಿಳಾ ಪೋಲಿಸ್ ಅಧಿಕಾರಿಯ ವೀಡಿಯೋ ಈಗ ವೈರಲ್ ಆಗುತ್ತಿದ್ದು ನೆಟ್ಟಿಗರು ಪೋಲಿಸ್ ಅಧಿಕಾರಿಯನ್ನು ಹಾಡಿ ಹೊಗಳಿದ್ದಾರೆ. ಅಸ್ವಸ್ಥಗೊಂಡು ಪ್ರಜ್ಞೆ ತಪ್ಪಿ ಬಿದ್ದಿದ್ದ ವ್ಯಕ್ತಿಯನ್ನು ಮಹಿಳಾ ಪೋಲಿಸ್ ಅಧಿಕಾರಿ ರಾಜೇಶ್ವರಿ ತಮ್ಮ ಹೆಗಲ ಮೇಲೆ ಹೊತ್ತುಕೊಂಡು ಬಂದು ರಕ್ಷಿಸಿದ್ದಾರೆ. ಈ ವೀಡಿಯೋ ಈಗ ಎಲ್ಲೆಡೆ ವೈರಲ್ ಆಗುತ್ತಿದೆ.

ಟಿಪಿ ಚತ್ರಂ ಎಂಬ ಸ್ಥಳದಲ್ಲಿರುವ ಸ್ಮಶಾನವೊಂದರಲ್ಲಿ ವ್ಯಕ್ತಿಯೊಬ್ಬನು ಪ್ರಜ್ಞೆಯಿಲ್ಲದೇ ಬಿದ್ದಿದ್ದನು. ಮಳೆಯನ್ನೂ ಸಹ ಲೆಕ್ಕಿಸದೇ ತಾವೇ ತೆರಳಿ ಆ ವ್ಯಕ್ತಿಯನ್ನು ತಮ್ಮ ಹೆಗಲ ಮೇಲೆ ಹೊತ್ತುಕೊಂಡು ಬಂದು ಆಟೋದಲ್ಲಿ ಮಲಗಿಸಿದ್ದಾರೆ. ನಂತರ ಆತನನ್ನು ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ರಾಜೇಶ್ವರಿಯವರ ಈ ಕೆಲಸ ನೆಟ್ಟಿಗರಿಂದ ಭಾರಿ ಪ್ರಶಂಸೆ ಗಳಿಸಿದೆ. ಪೋಲಿಸ್ ಅಧಿಕಾರಿಯ ಈ ವೀಡಿಯೋ ಎಲ್ಲೆಡೆ ವೈರಲ್ ಆಗುತ್ತಿದ್ದು ಜನರು ರಾಜೇಶ್ವರಿಯವರನ್ನು ಹಾಡಿ ಹೊಗಳುತ್ತಿದ್ದಾರೆ.