ಗುವಾಹಾಟಿ: ಗುವಾಹಟಿಯಲ್ಲಿ ಇಂದು ಬೆಳಗ್ಗೆ 10 ಗಂಟೆ ಸುಮಾರಿಗೆ ಉಗ್ರರು ಪೈಶಾಚಿಕ ಕೃತ್ಯ ನಡೆಸಿರುವುದು ವರದಿಯಾಗಿದೆ. ದಾಳಿಯಲ್ಲಿ ಸೇನಾ ಕರ್ನಲ್ ಅವರ ಪತ್ನಿ ಮತ್ತು ಪುತ್ರ ಸೇರಿ ಸುಮಾರು 7 ಜನರು ಮೃತಪಟ್ಟಿದ್ದಾರೆ. ದಾಳಿಯಲ್ಲಿ ಹತ್ಯೆಗೀಡಾದ ಕರ್ನಲ್ ಮತ್ತು ಅವರ ಕುಟುಂಬದ ಸದಸ್ಯರನ್ನು ಹೊರತುಪಡಿಸಿ ನಾಲ್ಕು ಜನ ಅಸ್ಸಾಮ್ ರೈಫಲ್ಸ್ ಸಿಬ್ಬಂದಿ ಮೃತಪಟ್ಟಿದ್ದಾರೆ.
ಇದನ್ನೂ ಓದಿ: ಮಧ್ಯಪ್ರಿಯರಿಗೆ ಬೆಲೆಏರಿಕೆ ಬಿಸಿ; ದಿನಬಳಕೆ ವಸ್ತುಗಳೊಂದಿಗೆ ಮಧ್ಯವೂ ದುಬಾರಿ
ಅಷ್ಟೇ ಅಲ್ಲದೆ ಮೂರರಿಂದ ನಾಲ್ಕು ಸಿಬ್ಬಂದಿಗಳು ಗಾಯಗೊಂಡಿದ್ದಾರೆ ಎಂದು ಗುಪ್ತಚರ ಸಂಘಟನೆಯ ಮೂಲಗಳು ತಿಳಿಸಿವೆ. ಇಲ್ಲಿಯವರೆಗೂ ಯಾವುದೇ ಉಗ್ರಗಾಮಿ ಸಂಘಟನೆಗಳು ಸಹ ದಾಳಿಯ ಜವಾಬ್ದಾರಿ ತೆಗೆದುಕೊಂಡಿಲ್ಲ. ಪೊಲೀಸರು ಮತ್ತು ಭದ್ರತಾ ಪಡೆಗಳು ಕಾರ್ಯಾಚರಣೆ ಮುಂದುವರೆಸಿವೆ.

ಉಗ್ರರ ಈ ಕೃತ್ಯದ ಬಳಿಕ ಮಣಿಪುರದ ಮುಖ್ಯಮಂತ್ರಿ ನುಗ್ಗೋಪಂಬರಂ ಸಿಂಗ್ ಅವರು ಮಾತನಾಡಿ ಭಯೋತ್ಪಾದಕರ ಈ ಕೃತ್ಯವನ್ನು ಬಲವಾಗಿ ಖಂಡಿಸಿದ್ದಾರೆ. ಅಷ್ಟಲ್ಲದೆ ‘ಇವರನ್ನು ಸುಮ್ಮನೆ ಬಿಡುವುದಿಲ್ಲ, ತಪ್ಪಿತಸ್ಥರನ್ನು ಕಾನೂನಿನ ಪ್ರಕಾರ ಯಾವ ಕ್ರಮ ಕೈಗೊಳ್ಳಬೇಕೋ, ಕ್ರಮ ಕೈಗೊಳ್ಳಲಾಗುವುದು. ತಪ್ಪಿತಸ್ಥರನ್ನು ಕಾನೂನಾತ್ಮಕವಾಗಿ ಬಂಧಿಸಲಾಗುವುದು’ ಎಂದಿದ್ದಾರೆ. ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ ಅವರು ಟ್ವೀಟ್ ಮಾಡುವ ಮೂಲಕ ಸಂತಾಪ ಸೂಚಿಸಿದ್ದಾರೆ. ಈ ಸಾವಿಗೆ ನ್ಯಾಯ ದೊರಕಿಸಿ ಕೊಡುವುದಾಗಿ ಭರವಸೆ ಕೊಟ್ಟಿದ್ದಾರೆ. ಇದು ಅತ್ಯಂತ ನೋವಿನ ಸಂಗತಿಯಾಗಿದೆ ಎಂದು ಟ್ವೀಟ್ ಮಾಡುವ ಮೂಲಕ ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.