ಬೆಂಗಳೂರು : ರಾಜ್ಯದಲ್ಲಿ ಇನ್ನೂ ಮೂರು ದಿನ ಗುಡುಗು ಸಿಡಿಲಿನಿಂದ ಕೂಡಿದ ಭಾರೀ ಮಳೆಯಾಗುವ (Heavy rain) ಸಾಧ್ಯತೆ ಇದ್ದು , ಹಲವು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ (Meteorological Department) ಯೆಲ್ಲೋ ಅಲರ್ಟ್ (Yellow Alert) ಘೋಷಣೆ ನೀಡಿದೆ .
ಇಂದು ಮತ್ತು ನಾಳೆ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಕನ್ನಡ , ಉಡುಪಿ , ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ .
ಇದನ್ನೂ ಓದಿ: Exercise: ಉತ್ತಮ ಆರೋಗ್ಯಕ್ಕೆ ಬೇಕು ನಿತ್ಯ ವ್ಯಾಯಾಮ
ತುಮಕೂರು , ದಾವಣಗೆರೆ , ಚಿತ್ರದುರ್ಗ , ಚಾಮರಾಜನಗರ , ಚಿಕ್ಕಮಗಳಲೂರು , ಕೊಡಗು , ಹಾಸನ , ಶಿವಮೊಗ್ಗ , ಮೈಸೂರು , ಚಾಮರಾಜನಗರ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರೀ ಮಳೆಯಾಗುವ ಸಾಧ್ಯತೆ ಇದ್ದು , ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು , ಕರಾವಳಿ ಜಿಲ್ಲೆಗಳಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ .
ಇನ್ನು ರಾಜಧಾನಿ ಬೆಂಗಳೂರಿನಲ್ಲಿಯೂ ಭಾರೀ ಮಳೆಯಾಗಲಿದ್ದು ಈಗಾಗಲೇ ರಾಜಧಾನಿ ಜನತೆ ಮಳೆಯಿಂದ ಬೇಸತ್ತಿದ್ದಾರೆ. ಬಿಟ್ಟುಬಿಡದೇ ಸುರಿಯುತ್ತಿರುವ ಮಳೆಯಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಸೋಮವಾರ ಬೆಳಿಗ್ಗೆಯಿಂದ ಮಂಗಳವಾರ ಬೆಳಿಗ್ಗೆವರೆಗೆ ೨೪ ಗಂಟೆಗಳಲ್ಲಿ ಬೆಂಗಳೂರಿನಲ್ಲಿ ೭೩ ಮಿಲಿ ಮಳೆಯಾಗಿದೆ.

ಬೆಂಗಳೂರಿನ ಯಶವಂತಪುರ, ರಾಜಾಜಿನಗರ, ಸದಾಶಿವನಗರ, ಮೆಜೆಸ್ಟಿಕ್ ಸೇರಿದಂತೆ ಹಲವೆಡೆ ಮಳೆಯಿಂದಾಗಿ ರಸ್ತೆ ಮೇಲೆ ನೀರು ಹರಿಯಿತು. ದೈನಂದಿನ ಕೆಲಸ ಮುಗಿಸಿ ತೆರಳುತ್ತಿದ್ದವರು ಸಕಾಲಕ್ಕೆ ಮನೆ ತಲುಪಲು ಸಾಧ್ಯವಾಗಲಿಲ್ಲ. ಅಲ್ಲಲ್ಲಿ ಫ್ಲೈ ಓವರ್ ಕೆಳಗೆ ಆಶ್ರಯ ಪಡೆದರು.
ಇನ್ನು ಮುಂದಿನ ದಿನಗಳಲ್ಲಿಯೂ ಹೆಚ್ಚಿನ ಮಳೆಯಾಗಲಿದ್ದು ಚೆನ್ನೈಗೆ ಈಗಾಗಲೇ ರೆಡ್ ಅಲರ್ಟ್ ನೀಡಲಾಗಿದೆ. ಈ ಪರಿಣಾಮ ಬೆಂಗಳೂರಿನಲ್ಲಿಯೂ ಆಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.