ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ಮತ್ತೊಮ್ಮೆ ವಾಯುಭಾರ ಕುಸಿತ ಉಂಟಾಗಿರುವುದರಿಂದ ರಾಜ್ಯದಲ್ಲಿ ರಾಜಧಾನಿ ಬೆಂಗಳೂರು ಸೇರಿದಂತೆ 11 ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್(Orrange alert) ಘೋಷಣೆ ಮಾಡಲಾಗಿದೆ. ಮತ್ತು 9 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್(Yellow alert) ಅನ್ನು ಘೋಷಣೆ ಮಾಡಲಾಗಿದೆ.
ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ನಾಳೆ ಬೆಳಗ್ಗೆವರೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಇದನ್ನೂ ಓದಿ: ಕಡಲತೀರದಲ್ಲಿ ರಾಶಿ ರಾಶಿ ಚಿನ್ನ: ಚಿನ್ನದ ಬೇಟೆಗಿಳಿದ ಮೀನುಗಾರರು!
ಇನ್ನುಳಿದಂತೆ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಚಾಮರಾಜನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ನ್ನು ನೀಡಲಾಗಿದೆ. ಆರೆಂಜ್ ಅಲರ್ಟ್ ನೀಡಿರುವ ಪ್ರದೇಶಗಳಲ್ಲಿ (very heavy rain)ಧಾರಾಕಾರ ಮಳೆಯಾಗುವ ಸಂಭವವಿದ್ದು, ಯಲ್ಲೋ ಅಲರ್ಟ್(heavy rain) ಘೋಷಿಸಿರುವ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಈಗಾಗಲೇ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಸಾಧಾರಣ, ತುಂತುರು ಮಳೆಯಾಗುತ್ತಿದೆ.

ಅಲ್ಲದೇ ಬಂಗಾಳಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಚೆನ್ನೈ ಹಾಗೂ ತಮಿಳುನಾಡಿನ ಇತರ ಕೆಲ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಹಿಂದೆ ಸುರಿದಿರುವ ಮಳೆಯಿಂದಲೇ ತಮಿಳುನಾಡಿನ ಕೆಲವೆಡೆ ಪ್ರವಾಹ(Flood) ಪರಿಸ್ಥಿತಿ ಉಂಟಾಗಿತ್ತು. ಮುನ್ನೆಚ್ಚರಿಕೆ ಕ್ರಮವಾಗಿ ಈಗಾಗಲೇ ಚೆನ್ನೈನಲ್ಲಿ ರೆಡ್ ಅಲರ್ಟ್(Red alert) ಘೋಷಿಸಲಾಗಿದೆ.
ಇನ್ನೂ ಕೆಲದಿನಗಳ ಕಾಲ ವಾಯುಭಾರ ಕುಸಿತದ ಪರಿಣಾಮ ಹೆಚ್ಚು ಮಳೆಯನ್ನು ನಿರೀಕ್ಷಿಸಲಾಗಿದೆ. ಹಾಗಾಗಿ ಮುನ್ನೆಚ್ಚರಿಕಾ ಕ್ರಮಗಳನ್ನು ಸಹ ಕೈಗೊಳ್ಳಲಾಗುತ್ತಿದೆ.