Sakath: (ನ.19) ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ಸಖತ್ ಸಿನಿಮಾಕ್ಕೆ ಸೆನ್ಸಾರ್ ಮಂಡಳಿ ಯು/ಎ ಸರ್ಟಿಫಿಕೇಟ್ ನೀಡಿದೆ.
ನವಂಬರ್ 26 ರಿಂದ ಸಖತ್ ಸಿನಿಮಾ ರಾಜ್ಯಾದ್ಯಂತ ಚಿತ್ರಮಂದಿರಗಳಲ್ಲಿ ರಿಲೀಸ್ ಆಗಲಿದೆ. ಈ ಹಿಂದೆ ನವಂಬರ್ 12ಕ್ಕೆ ಚಿತ್ರ ತೆರೆಗೆ ಬರಬೇಕಿತ್ತು. ಆದರೆ ಪವರ್ ಸ್ಟಾರ್ ಪುನೀತ್ ನಿಧನದಿಂದಾಗಿ ಚಿತ್ರ ಬಿಡುಗಡೆ ಮುಂದೂಡಲ್ಪಟ್ಟಿತ್ತು.
ಸಿಂಪಲ್ ಸುನಿ ನಿರ್ದೇಶನದ ಈ ಸಿನಿಮಾದಲ್ಲಿ ಗಣೇಶ್ ಎರಡು ವಿಭಿನ್ನ ಗೆಟಪ್ ಗಳಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಸಿನಿಮಾದ ಟೀಸರ್ ಗೆ ಈಗಾಗಲೇ ಭರ್ಜರಿ ಪ್ರತಿಕ್ರಿಯೆ ಸಿಕ್ಕಿದ್ದು, ಸಿನಿಮಾ ಬಗ್ಗೆ ಕುತೂಹಲ ಹೆಚ್ಚಿದೆ

ಚಿತ್ರದಲ್ಲಿ ಇದೇ ಮೊದಲ ಬಾರಿಗೆ ಗಣೇಶ್ ಅವರು ಅಂಧನ ಪಾತ್ರದಲ್ಲಿ ನಟಿಸಿದ್ದಾರೆ. ಗಣೇಶ್ ಅವರ ಮಗ ವಿಹಾನ್ ಕನ್ನಡ ಚಿತ್ರರಂಗಕ್ಕೆ ಈ ಚಿತ್ರದ ಮೂಲಕ ಪಾದಾರ್ಪಣೆ ಮಾಡಿದ್ದಾರೆ. ಸಿನಿಮಾದಲ್ಲಿ ಗಣೇಶ್ ಅವರ ಚಿಕ್ಕ ವಯಸ್ಸಿನ ಪಾತ್ರದಲ್ಲಿ ವಿಹಾನ್ ಅಭಿನಯಿಸಿದ್ದಾರೆ. ಜೂನಿಯರ್ ಬಾಲು ಆಗಿ ತೆರೆಯ ಮೇಲೆ ಕಾಣಿಸಿಕೊಳ್ಳುತ್ತಿದ್ದಾರೆ.
KVN ಪ್ರೊಡಕ್ಷನ್ಸ್ ಬ್ಯಾನರ್ ನಡಿ ನಿಶಾ ವೆಂಕಟ್ ಕೋಣಂಕಿ, ಸುಪ್ರೀತ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಚಿತ್ರದಲ್ಲಿ ನಿಶ್ವಿಕಾ ನಾಯ್ಡು ನಾಯಕಿಯಾಗಿ ನಟಿಸಿದ್ದಾರೆ.
ಈಗಾಗಲೇ ಈ ಸಿನಿಮಾ ಪ್ರೇಕ್ಷಕರಲ್ಲಿ ಸಾಕಷ್ಟು ನಿರೀಕ್ಷೆ ಮೂಡಿಸಿದ್ದು, ಚಿತ್ರದ ಬಿಡುಗಡೆಗೆ ಪ್ರೇಕ್ಷಕರು ಎದುರು ನೋಡುತ್ತಿದ್ದಾರೆ. ಕೆಲ ದಿನಗಳ ಹಿಂದೆ ಈ ಚಿತ್ರದ ವಿಡಿಯೋ ಸಾಂಗ್ ‘ ಪ್ರೇಮಕ್ಕೆ ಕಣ್ಣಿಲ್ಲ ‘ ಬಿಡುಗಡೆ ಆಗಿದ್ದು 24 ಲಕ್ಷಕ್ಕೂ ಹೆಚ್ಚು ಪ್ರೇಕ್ಷಕರ ಇದನ್ನು ವೀಕ್ಷಣೆ ಮಾಡುವ ಮೂಲಕ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಚಿತ್ರದ ಟೀಸರ್ ನಲ್ಲಿ ಹಾಸ್ಯದ ಸನ್ನಿವೇಶಗಳು ಕಂಡುಬಂದಿದ್ದು, ಮೊದಲ ಬಾರಿಗೆ ಅಂಧನ ಪಾತ್ರದಲ್ಲಿ ಕಾಣಿಸಿಕೊಂಡಿರುವ ಗಣೇಶ್ ಅವರು ಯಾವ ರೀತಿ ಅಭಿನಯಿಸಿದ್ದಾರೆ.