Women Safety ನವದೆಹಲಿ: (ನ.23) : ದೇಶದಲ್ಲಿ ಕರೋನಾ ನಿಯಂತ್ರಣವಾಗುತ್ತಿದ್ದರೂ ಮಹಿಳೆಯರ ಮೇಲೆ ನಡೆಯುತ್ತಿರುವ ನಿರಂತರ ದೌರ್ಜನ್ಯ ಪ್ರಕರಣ ನಿಯಂತ್ರಿಸುವಲ್ಲಿ ದೆಹಲಿಯಲ್ಲಿ ಸರ್ಕಾರ ವಿಫಲವಾಗಿದೆ. ವಿಶ್ವಕ್ಕೆ ಹೋಲಿಸಿದರೆ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರ ಮೇಲೆ ನಡೆದಿರುವ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿದೆ.
ಇತರ ನಗರಗಳಿಗೆ ಹೋಲಿಸಿದರೆ ದೆಹಲಿಯಲ್ಲಿ ಮಹಿಳೆಯರ ವಿರುದ್ಧ ನಡೆಯುತ್ತಿರುವ ಪ್ರಕರಣಗಳು ಹೆಚ್ಚಾಗಿದೆ. ದೆಹಲಿ ಪೊಲೀಸರು ಬಿಡುಗಡೆ ಮಾಡಿರುವ ವರದಿಯ ಪ್ರಕಾರ ಈ ವರ್ಷ 3,117 ಮಹಿಳೆಯರ ಕಿಡ್ನಾಪ್ ಪ್ರಕರಣ ದಾಖಲಾಗಿದೆ.ಅತ್ಯಾಚಾರ ಪ್ರಕರಣಗಳು 1,725 ದಾಖಲಾಗಿದೆ. ಈ ವರದಿಗಳು ಅಕ್ಟೋಬರ್ 31ರ ವರೆಗಿನ ವರೆಗೆ ದಾಖಲಾಗಿದೆ.

ಕೌಟುಂಬಿಕ ಕಲಹಗಳು
ಕಳೆದ ವರ್ಷಕ್ಕೆ ಹೋಲಿಸಿದರೆ ದೆಹಲಿಯಲ್ಲಿ ಈ ವರ್ಷ ಕೌಟುಂಬಿಕ ಕಲಹಗಳು ಪ್ರಕರಣಗಳು ಜಾಸ್ತಿಯಾಗಿದೆ. 2020ರಲ್ಲಿ ಅತ್ತೆಯಂದಿರ ವಿರುದ್ಧ ಪ್ರಕರಣಗಳು 1,931 ದಾಖಲಾಗಿತ್ತು. ಈ ವರ್ಷ ಅಕ್ಟೋಬರ್ 31ರ ವರೆಗಿನ ಪ್ರಕಾರ, ದುಪ್ಪಟ್ಟಾಗಿದೆ ಅಂದರೆ 3,742 ಪ್ರಕರಣಗಳು ದಾಖಲಾಗಿದೆ.
ಮಹಿಳೆಯರ ಮೇಲಿನ ದೌರ್ಜನ್ಯದ ಪ್ರಕರಣಗಳ ಸಂಖ್ಯೆಯ ವಿವರ:
ಮಹಿಳೆಯರ ಮೇಲೆ ನಡೆಯುತ್ತಿರುವ ದೌರ್ಜನ್ಯ ಹಲ್ಲೆ ಅತ್ಯಾಚಾರ ಸೇರಿದಂತೆ ಅನೇಕ ಪ್ರಕರಣಗಳು ದೆಹಲಿಯಲ್ಲಿ ಹೆಚ್ಚಾಗಿದೆ. ಕಳೆದ ವರ್ಷ 2020ರಲ್ಲಿ ದೆಹಲಿಯಲ್ಲಿ 10,093(24.65%) ರಷ್ಟು ದಾಖಲಾಗಿತ್ತು.
ಇನ್ನೂ ಉತ್ತರ ಪ್ರದೇಶದಲ್ಲಿ ಹೆಚ್ಚು ಅತ್ಯಾಚಾರ ಕೊಲೆ ಸೇರಿದಂತೆ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ವರದಿಯಾಗುತ್ತಿದೆ. ದೆಹಲಿಯಲ್ಲಿ ಉತ್ತರಪ್ರದೇಶ ಕ್ಕಿಂತಲೂ ಹೆಚ್ಚು ಮಹಿಳೆಯರ ವಿರುದ್ಧ ಪ್ರಕರಣಗಳು ದಾಖಲಾಗುತ್ತಿದೆ.
ದೆಹಲಿಯಲ್ಲಿ ನಡೆದ ನಿರ್ಭಯ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದ ನಂತರ ಅನೇಕ ಅತ್ಯಾಚಾರ ಪ್ರಕರಣಗಳು ಇಂದಿಗೂ ದಾಖಲಾಗುತ್ತಿವೆ. ಸರ್ಕಾರ ಮಹಿಳೆಯರ ಸುರಕ್ಷತೆಗೆ ಕ್ರಮ ಕೈಗೊಂಡಿದ್ದರು ಪರಿಣಾಮಕಾರಿಯಾಗಿ ಕಾನೂನು ಜಾರಿಯಾಗಿಲ್ಲ. ಮಹಿಳೆಯರಿಗೆ ಸುರಕ್ಷತೆಯು ವರೆಗೆ ಸುವಲ್ಲಿ ಸರ್ಕಾರಗಳು ವಿಫಲವಾಗುತ್ತಿದೆ ಆಧುನಿಕ ತಂತ್ರಜ್ಞಾನ ಬಳಸಿಕೊಳ್ಳಬೇಕಿದೆ ಪ್ರತಿಯೊಬ್ಬ ನಾಗರಿಕನಿಗೂ ಸರ್ಕಾರ ಸುರಕ್ಷತೆಯನ್ನು ಒದಗಿಸಬೇಕು. ಪ್ರತಿದಿನ ಅತ್ಯಾಚಾರ ಪ್ರಕರಣಗಳು ಒಂದರಮೇಲೊಂದು ದಾಖಲಾಗುತ್ತಿದ್ದರೂ ಸರ್ಕಾರ ಯಾವುದೇ ಜವಾಬ್ದಾರಿಯನ್ನು ತೆಗೆದುಕೊಳ್ಳುತ್ತಿಲ್ಲ, ಬದಲಾಗಿ ಅತ್ಯಾಚಾರ ಪ್ರಕರಣದ ನಂತರ ಪ್ರತಿಭಟನೆ ಚರ್ಚೆಗಳು ಮಾತ್ರ ಹೊರಬರುತ್ತದೆ ಹೊರತು ಯಾವುದೇ ಕ್ರಮ ಕೈಗೊಂಡಿಲ್ಲ.