ಮಂಗಳೂರು: (ನ.24) Vidhanaparishath Elections: ವಿಧಾನಪರಿಷತ್ ದಕ್ಷಿಣಕನ್ನಡ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಇಂದು 8 ಮಂದಿ ಅಭ್ಯರ್ಥಿಗಳು 14 ನಾಮಪತ್ರಗಳನ್ನು ಸಲ್ಲಿಸಿದರು. ಜಿಲ್ಲಾಧಿಕಾರಿಯವರ ಕಛೇರಿಯ ಸಭಾಂಗಣದಲ್ಲಿ ನಾಮಪತ್ರ ಸಲ್ಲಿಕೆ ನಡೆಯಿತು. ಅವುಗಳಲ್ಲಿ 13 ನಾಮಪತ್ರಗಳು ಕ್ರಮಬದ್ಧವಾಗಿದ್ದು ಸ್ವೀಕೃತ ಗೊಂಡಿದ್ದು ಒಬ್ಬರು ಪಕ್ಷೇತರ ಅಭ್ಯರ್ಥಿಯ ನಾಮಪತ್ರ ತಿರಸ್ಕೃತಗೊಂಡಿದೆ.

ಸಲ್ಲಿಕೆಯಾಗಿದ್ದು ಒಟ್ಟು 14 ನಾಮಪತ್ರಗಳಲ್ಲಿ 7 ಅಭ್ಯರ್ಥಿಗಳ 13 ನಾಮಪತ್ರಗಳು ಸ್ವೀಕೃತವಾಗಿವೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಮಂಜುನಾಥ ಭಂಡಾರಿ ಮೂರು ನಾಮಪತ್ರ ಸಲ್ಲಿಸಿದ್ದಾರೆ. ಬಿಜೆಪಿ ಅಭ್ಯರ್ಥಿಯಾಗಿ ಕೋಟ ಶ್ರೀನಿವಾಸ ಪೂಜಾರಿ 4 ನಾಮಪತ್ರ, ಸೋಶಿಯಲ್ ಡೆಮಾಕ್ರೆಟಿಕ್ ಪಾರ್ಟಿ ಆಫ್ ಇಂಡಿಯಾ ಪಕ್ಷದ ಅಭ್ಯರ್ಥಿ ಇಸ್ಮಾಯಿಲ್ ಶಾಫಿ ಕೆ ಬೆಳ್ಳಾರೆ ಅವರು ಒಂದು ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷೇತರ ಅಭ್ಯರ್ಥಿ ಕೌಶಿಕಿ ಶೆಟ್ಟಿ ಅವರು ಎರಡು ನಾಮಪತ್ರ ಸಲ್ಲಿಸಿದ್ದಾರೆ. ಪಕ್ಷೇತರ ಅಭ್ಯರ್ಥಿ ನವೀನ್ ಕುಮಾರ್ ರವರು ಒಂದು ನಾಮಪತ್ರ, ಪಕ್ಷೇತರ ಅಭ್ಯರ್ಥಿಯಾಗಿ ನಿತಿನ್ ಕುಮಾರ್ ಹಾಗೂ ಪಕ್ಷೇತರ ಅಭ್ಯರ್ಥಿ ಶಶಿಧರ್ ಎಂಬವರು ಸಲ್ಲಿಸಿದ್ದ ಒಂದು ನಾಮಪತ್ರ ಕ್ರಮಬದ್ಧವಾಗಿದ್ದು. ಪಕ್ಷೇತರ ಅಭ್ಯರ್ಥಿ ಸುಪ್ರೀತ್ ಕುಮಾರ್ ಪೂಜಾರಿ ಅವರು ಸಲ್ಲಿಸಿದ್ದ ನಾಮಪತ್ರ ತಿರಸ್ಕೃತಗೊಂಡಿದೆ.
ನಾಮಪತ್ರಗಳನ್ನು ಹಿಂಪಡೆಯಲು ನವಂಬರ್ 26 ರಂದು ಮಧ್ಯಾಹ್ನ 3 ಗಂಟೆಯ ವರೆಗೆ ಅವಕಾಶ ಇದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆಬಿ ಅವರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.