ಬೆಂಗಳೂರು: (ನ.25): Weather updates: ರಾಜ್ಯದಲ್ಲಿ ನವೆಂಬರ್ 29ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರಿನಲ್ಲಿ ಮಳೆಯಾಗಲಿದೆ ಎಂದು ಮಾಹಿತಿ ಲಭ್ಯವಾಗಿದೆ.
ಚಂಡಮಾರುತದ ಕೇಂದ್ರ ಬಿಂದು ನೈಋತ್ಯ ಮತ್ತು ಪಕ್ಕದ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಬಂಗಾಳಕೊಲ್ಲಿಯಲ್ಲಿ ಒಂದು ಚಂಡಮಾರುತ ಎದುರಾಗುವ ಸಾಧ್ಯತೆ ಇದ್ದು, ಅದರ ಪ್ರಭಾವದಿಂದ ವಾಯುಭಾರ ಕುಸಿತ ಪ್ರದೇಶವಾಗಿ ರೂಪಾಂತರಗೊಳ್ಳುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.
ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಕೂಡ ಮಳೆಯಾಗಲಿದೆ. ಬೀದರ್, ಕಲಬುರಗಿ, ಬಳ್ಳಾರಿ, ಚಿತ್ರದುರ್ಗ, ಕೊಪ್ಪಳದಲ್ಲಿ ಒಣಹವೆ ಮುಂದುವರೆಯಲಿದೆ, ಮುಂದಿನ ಐದು ದಿನಗಳ ಕಾಲ ದಕ್ಷಿಣ ಭಾರತದ ರಾಜ್ಯಗಳ ವಿವಿಧ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ
ಇದನ್ನೂ ಓದಿ: Vegetables Price Hike: ಗಗನಕ್ಕೇರಿದ ತರಕಾರಿ ಬೆಲೆ – ಗ್ರಾಹಕರ ಜೇಬಿಗೆ ಕತ್ತರಿ
ಮುಂದಿನ 24 ಗಂಟೆಗಳಲ್ಲಿ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಪ್ರದೇಶವಾಗಿ ರೂಪಾಂತರಗೊಳ್ಳುವ ಸಾಧ್ಯತೆಯಿದೆ ಸಾಧ್ಯತೆಯಿದೆ. ಇದು ಶ್ರೀಲಂಕಾ ಮತ್ತು ದಕ್ಷಿಣ ತಮಿಳುನಾಡು ಕರಾವಳಿಯ ಕಡೆಗೆ ಚಲಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ರಾಜಧಾನಿಯಲ್ಲಿ ವಾತಾವರಣ:
ಬೆಂಗಳೂರಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಾಧಾರಣ ಮಳೆಯಾಗಲಿದೆ. 29 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಎಚ್‌ಎಎಲ್‌ನಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 29.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.1ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್‌ನಲ್ಲಿ 29.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಮಳೆಯಾಗಿರುವ ಪ್ರದೇಶಗಳು:
ಕೆಆರ್ ನಗರ, ಮಂಡ್ಯ, ಯಡವಾಡ, ಜಾಲಹಳ್ಳಿ, ಶ್ರವಣಬೆಳಗೊಳ, ಸಿಂದಗಿ, ಆಲಮಟ್ಟಿ, ಮಸ್ಕಿ, ಕೆಂಭಾವಿ, ಕುಶಾಲನಗರ, ಹರಪನಹಳ್ಳಿ, ಸೈದಾಪುರ, ಕವಡಿಮಟ್ಟಿ, ಬೆಂಗಳೂರು, ಬಾದಾಮಿ, ಕೆರೂರು, ಮಹಾಲಿಂಗಪುರ, ಜಮಖಂಡಿ, ಬಾಗಲಕೋಟೆ, ಬೈಲಹೊಂಗಲ, ಅಥಣಿ, ನಾಗಮಂಗಲ, ಮೈಸೂರು, ನಾಪೋಕ್ಲು, ಸೋಮವಾರಪೇಟೆ, ಹಾರಂಗಿ, ಮಡಿಕೇರಿ, ಕೋಣನೂರು, ಬಂಡೀಪುರದಲ್ಲಿ ಮಳೆಯಾಗಿದೆ.
ಕರ್ನಾಟಕದಲ್ಲಿ ಇಂದಿನ ವಾತಾವರಣ:
ಕರಾವಳಿ, ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಾಗೂ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಹಾಗೂ ತುಮಕೂರಿನಲ್ಲಿ ಮಳೆಯಾಗಲಿದೆ.