Secular TV
Tuesday, January 31, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Constitution Day: ಜಾತಿ ವ್ಯವಸ್ಥೆಗೆ ಬಲಿಯಾದ ಶೋಷಿತರು ಇನ್ನಷ್ಟು ಅನ್ಯಾಯ ಶೋಷಣೆಗೊಳಗಾಗುತ್ತಾರೆ: ಮಾಜಿ ಸಿಎಂ ಸಿದ್ದರಾಮಯ್ಯ

Secular TVbySecular TV
A A
Reading Time: 2 mins read
Constitution Day: ಜಾತಿ ವ್ಯವಸ್ಥೆಗೆ ಬಲಿಯಾದ ಶೋಷಿತರು ಇನ್ನಷ್ಟು ಅನ್ಯಾಯ ಶೋಷಣೆಗೊಳಗಾಗುತ್ತಾರೆ: ಮಾಜಿ ಸಿಎಂ ಸಿದ್ದರಾಮಯ್ಯ
0
SHARES
Share to WhatsappShare on FacebookShare on Twitter

ಬೆಂಗಳೂರು: (ನ.26): Constitution Day :ಜಗತ್ತಿನಲ್ಲಿಯೇ ಅತಿದೊಡ್ಡ ಪ್ರಜಾಪ್ರಭುತ್ವ ದೇಶ ಭಾರತ ಎಂಬ ಹೆಮ್ಮೆಯನ್ನು ನಮಗೆ ತಂದುಕೊಟ್ಟಿರುವುದು ನಮ್ಮ ಸಂವಿಧಾನ. ಧರ್ಮನಿರಪೇಕ್ಷತೆ, ಪ್ರಜಾಸತ್ತಾತ್ಮಕ ಮತ್ತು ಗಣತಂತ್ರ ಎಂಬ ಮಂತ್ರಗಳ ನಮ್ಮ ಸಂವಿಧಾನದ ಆಧಾರ ಸ್ತಂಭಗಳಾಗಿವೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ಸಂವಿಧಾನ ದಿನವಾದ ಇಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ಭಾರತ ಸಂವಿಧಾನದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಜಗತ್ತಿನಲ್ಲಿಯೇ ಅತಿದೊಡ್ಡ ಪ್ರಜಾಪ್ರಭುತ್ವ ದೇಶ ಭಾರತ ಎಂಬ ಹೆಮ್ಮೆಯನ್ನು ನಮಗೆ ತಂದುಕೊಟ್ಟಿರುವುದು ನಮ್ಮ ಸಂವಿಧಾನ. ಧರ್ಮನಿರಪೇಕ್ಷತೆ, ಪ್ರಜಾಸತ್ತಾತ್ಮಕ ಮತ್ತು ಗಣತಂತ್ರ ಎಂಬ ಮಂತ್ರಗಳ ನಮ್ಮ ಸಂವಿಧಾನದ ಆಧಾರ ಸ್ತಂಭಗಳಾಗಿವೆ.

ಒಬ್ಬ ವ್ಯಕ್ತಿಗೆ ಒಂದು ಮತ:

ಭಾರತ ಸಂವಿಧಾನವು ಸಮಾನತೆಯನ್ನು ಸಾರಿ ಹೇಳಿದೆ. ಯಾವುದೇ ವ್ಯಕ್ತಿ ಇನ್ನೊಬ್ಬ ವ್ಯಕ್ತಿಗಿಂತ ಮೇಲೂ ಅಲ್ಲ ಕೀಳೂ ಅಲ್ಲ. ಹಾಗಾಗಿಯೇ ಒಬ್ಬ ವ್ಯಕ್ತಿಗೆ ಒಂದು ಮತ, ಒಂದು ಮತಕ್ಕೆ ಒಂದು ಮೌಲ್ಯ ತತ್ವವನ್ನು ಅಳವಡಿಸಲಾಗಿದೆ. ಸಂವಿಧಾನದ ಇಂತಹ ಎಲ್ಲ ಆಶಯಗಳನ್ನು ಎತ್ತಿಹಿಡಿಯುವುದು ಇಂದು ನಮ್ಮೆಲ್ಲರ ಮುಂದಿರುವ ಜವಾಬ್ದಾರಿ ಮತ್ತು ಹೊಣೆಗಾರಿಕೆಯಾಗಿದೆ.

ಅಂಬೇಡ್ಕರ್ ಅವರು ತಾವೇ ರಚಿಸಿರುವ ಸಂವಿಧಾನದ ಬುನಾದಿ ಮೇಲೆ ಭವಿಷ್ಯದ ಭಾರತವನ್ನು ನಿರ್ಮಾಣಮಾಡಲು ಬಯಸಿದ್ದರು. ಆದರೆ ಸಂವಿಧಾನವನ್ನು ಮನ:ಪೂರ್ವಕವಾಗಿ ಒಪ್ಪದೆ ಇದ್ದ ಹಿಂದೂ ಧರ್ಮದೊಳಗಿದ್ದ ಒಂದು ವರ್ಗ ಮನುಸ್ಮೃತಿ ಆಧಾರದಲ್ಲಿ ಸಮಾಜವನ್ನು ನಿರ್ಮಾಣ ಮಾಡಲು ಹೊರಟಿರುವುದು ಅಂಬೇಡ್ಕರ್ ಅವರಿಗೆ ತಿಳಿದಿತ್ತು. ಈ ಹಿನ್ನೆಲೆಯಲ್ಲಿಯೇ ಅವರು ಹಿಂದೂಧರ್ಮವನ್ನು ತ್ಯಜಿಸುವ ನಿರ್ಧಾರ ಕೈಗೊಂಡಿದ್ದರು ಎಂದು ಹೇಳಿದರು.

One Man one Vote

ಇದನ್ನೂ ಓದಿ:Constitution Day: ಸಂವಿಧಾನ ದಿನ: ಭಾರತದ ಪ್ರತಿ ಪ್ರಜೆಗಳ ಸಂಪತ್ತು ʼಭಾರತ ಸಂವಿಧಾನʼ”

ಸಂವಿಧಾನದ ಮೇಲೆ ಗೌರವಿಲ್ಲ:

ಹಿಂದೂ ಧರ್ಮದೊಳಗಿರುವ  ರೋಗಗ್ರಸ್ತ ಮನಸ್ಸುಗಳಿಗೆ ಸಂವಿಧಾನಕ್ಕಿಂತ ಮನುಸ್ಮೃತಿಯೇ ಹೆಚ್ಚು ಪ್ರಿಯವೆನಿಸಿದೆ. ಅದು ಸಾರಿರುವ ಜಾತಿ ವ್ಯವಸ್ಥೆಯ ಬುಡ ಭದ್ರಪಡಿಸುವ ಕೆಲಸವನ್ನು ಈ ವರ್ಗ ಗುಟ್ಟಾಗಿ ಮಾಡುತ್ತಿದೆ.

ಸಂವಿಧಾನವನ್ನು ಬದಲಾವಣೆ ಮಾಡಲಿಕ್ಕಾಗಿಯೇ ನಾವು ಅಧಿಕಾರಕ್ಕೆ ಬಂದಿದ್ದೇವೆ ಎಂದು ಕೇಂದ್ರ ಸಚಿವರೊಬ್ಬರು ಬಹಿರಂಗವಾಗಿ ಹೇಳಿಕೆ ನೀಡಿದ್ದಾರೆ. ಈ ದೇಶದ ಪ್ರಧಾನಿಯಾಗಲಿ, ಅವರ ಪಕ್ಷವಾಗಲಿ ಬಾಯಿಮಾತಿಗಾದರೂ ಸಚಿವರ ಸಂವಿಧಾನ ವಿರೋಧಿ ಹೇಳಿಕೆಯನ್ನು ಖಂಡಿಸುವುದಿಲ್ಲಎಂದರು.

ಇಂತಹವರಿಗೆ ಸಂವಿಧಾನದ ಮೇಲೆ ಗೌರವ ಇಲ್ಲ ಹಾಗೂ ಸಾರುವ ಆಶಯಗಳ ಮೇಲೆ ನಂಬಿಕೆ ಇಲ್ಲ. ಸಾಮಾಜಿಕ ನ್ಯಾಯದ ಸಿದ್ಧಾಂತ, ಜಾತಿನಾಶ, ಅಸ್ಪೃಶ್ಯತೆಯ ನಿರ್ಮೂಲನೆ ಯಾವುದೂ ಅವರಿಗೆ ಬೇಕಾಗಿಲ್ಲ. ಪಟ್ಟಭದ್ರ ಹಿತಾಸಕ್ತಿಯನ್ನು ಹೊಂದಿರುವ ಯಥಾಸ್ಥಿತಿವಾದಿಗಳು.

ಇಂದು ರಾಷ್ಟ್ರೀಯತೆ ಎಂಬ ಪದ ಹಲವು ವಾದ-ವಿವಾದಗಳು, ಚರ್ಚೆಗಳನ್ನು ಹುಟ್ಟುಹಾಕಿದೆ. ಒಂದು ಸಮುದಾಯ ಅಥವಾ ಒಂದು ಧರ್ಮದ ನೀತಿಗಳೇ ರಾಷ್ಟ್ರೀಯತೆ ಎಂಬಂತೆ ಬಿಂಬಿಸಲಾಗುತ್ತಿದೆ. ಏಕರೂಪದ ಈ ರಾಷ್ಟ್ರೀಯತೆ ನಮ್ಮ ಸಂವಿಧಾನದ ಭದ್ರ ಬುನಾದಿಗೆ ಧಕ್ಕೆಯುಂಟು ಮಾಡಲಿದೆ.

ಪ್ರತಿಯೊಬ್ಬರಿಗೂ ಧರ್ಮದ ಹಕ್ಕುಇದೆ:

ಧರ್ಮನಿರಪೇಕ್ಷತೆ ಸಂವಿಧಾನದ ಮೂಲ ಆಶಯಗಳಲ್ಲಿ ಒಂದಾಗಿದ್ದು, ಪ್ರತಿಯೊಬ್ಬ ವ್ಯಕ್ತಿಯೂ ತನಗೆ ಇಷ್ಟವಾದ ಧರ್ಮವನ್ನು ಆಚರಿಸುವ, ಅನುಸರಿಸುವ ಪಾಲಿಸುವ ಹಕ್ಕು ನೀಡಿದೆ. ರಾಜಕಾರಣ ಮತ್ತು ಶಿಕ್ಷಣದಲ್ಲಿ ಧರ್ಮ ಇಣುಕಬಾರದು ಎಂಬುದು ಧರ್ಮನಿರಪೇಕ್ಷತೆಯ ಆಶಯವೂ ಹೌದು. ಭಾರತ ಸಂವಿಧಾನದ ಮೂಲ ಆಶಯವೂ ಇದಾಗಿದೆ. ಸಂವಿಧಾನ ವಿಜ್ಞಾನವನ್ನು ಪ್ರತಿಪಾದಿಸುತ್ತದೆ ಮೂಢನಂಬಿಕೆಯನ್ನಲ್ಲ.

ಭಾರತ ಹಲವು ವೈವಿಧ್ಯತೆ, ಆಚಾರ, ವಿಚಾರ, ಸಂಸ್ಕೃತಿಗಳನ್ನು ತನ್ನ ಉದರದಲ್ಲಿ ಕಾಪಿಟ್ಟುಕೊಂಡಿದೆ. ಇಂತಹ ವೈವಿಧ್ಯತೆಯಲ್ಲಿ ಏಕತೆಯನ್ನು ಕಾಪಾಡಿಕೊಂಡು ಮುನ್ನಡೆಯಲು ನಾವು ಮತ್ತೊಮ್ಮೆ ಸಂಕಲ್ಪ ಮಾಡಬೇಕಾಗಿದೆ.

ಅಭಿವ್ಯಕ್ತಿ ಸ್ವಾತಂತ್ರ್ಯ ನಮ್ಮ ಸಂವಿಧಾನ ನಮಗೆ ನೀಡಿರುವ ಮತ್ತೊಂದು ಮಹತ್ವದ ಕೊಡುಗೆ. ಮಾನವ ಬೆಳವಣಿಗೆಯ ಇತಿಹಾಸದಲ್ಲಿ ಅಭಿವ್ಯಕ್ತಿ ಸ್ವಾತಂತ್ರ್ಯ ಅತ್ಯುನ್ನತ ಘಟ್ಟ. ನಮ್ಮ ಸಂವಿಧಾನ ಇದನ್ನು ಯಾವುದೇ ಧರ್ಮ, ಜಾತಿ, ಲಿಂಗ ತಾರತಮ್ಯವಿಲ್ಲದೆ ಕಲ್ಪಿಸಿದೆ. ಈ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವುದು ಈಗ ನಮ್ಮ ಮುಂದಿರುವ ಸವಾಲಾಗಿದೆ.

Right to Religion

ಇದನ್ನೂ ಓದಿ:Constitution Day: ಸಂವಿಧಾನ ದಿನ: ಭಾರತದ ಪ್ರತಿ ಪ್ರಜೆಗಳ ಸಂಪತ್ತು ʼಭಾರತ ಸಂವಿಧಾನʼ”

ರಾಜಕೀಯ ಸ್ವತಂತ್ರ್ಯ ಶಾಶ್ವತವಲ್ಲ

ಸ್ವಾತಂತ್ರ್ಯಕ್ಕಿಂತಲೂ ಮೊದಲು ಸಮಾನತೆ ಸ್ಥಾಪನೆಯಾಗಬೇಕು ಎಂದು ಅಂಬೇಡ್ಕರ್ ಬಯಸಿದ್ದರು. ನಾವು ಕೇವಲ ರಾಜಕೀಯ ಸ್ವಾತಂತ್ರ್ಯದಿಂದ ತೃಪ್ತರಾಗಬಾರದು, ರಾಜಕೀಯ ಪ್ರಜಾತಂತ್ರವನ್ನು ಸಾಮಾಜಿಕ ಪ್ರಜಾತಂತ್ರವನ್ನಾಗಿ ಮಾಡಬೇಕು. ಸಾಮಾಜಿಕ ಪ್ರಜಾಪ್ರಭುತ್ವ ಸ್ಥಾಪನೆಯಾಗದೆ ಇದ್ದರೆ ರಾಜಕೀಯ ಪ್ರಜಾತಂತ್ರ ಯಶಸ್ಸು ಕಾಣಲಾರದು ಎಂದು ಅಂಬೇಡ್ಕರ್ ಎಚ್ಚರಿಸಿದ್ದರು.

ಭಾರತದಲ್ಲಿ ಸಾಮಾಜಿಕ ಸಮಸ್ಯೆಗಳನ್ನು ಸುಧಾರಿಸದೆ ಆರ್ಥಿಕ ಸುಧಾರಣೆ ತರಲು ಹೇಗೆ ಸಾಧ್ಯ? ಎಂದು ಡಾ. ಅಂಬೇಡ್ಕರ್ ಕೇಳಿದ್ದರು. ಜಾತಿ ವ್ಯವಸ್ಥೆಯಂತಹ ಭೀಕರ ಸಾಮಾಜಿಕ ರೋಗಕ್ಕೆ ಬಲಿಯಾಗಿರುವ ಭಾರತದ ಅಭಿವೃದ್ದಿ ಕೇವಲ ರಾಜಕೀಯ ಸ್ವಾತಂತ್ರ್ಯದಿಂದ ಸಾಧ್ಯ ಇಲ್ಲ ಎನ್ನುವುದು ಅಂಬೇಡ್ಕರ್ ಅವರ ಸ್ಪಷ್ಟ ನಿಲುವಾಗಿತ್ತು. ಈ ಅಭಿಪ್ರಾಯವೇ ಅಂಬೇಡ್ಕರ್ ಮತ್ತು ಗಾಂಧೀಜಿ ನಡುವಿನ ಭಿನ್ನಾಭಿಪ್ರಾಯಕ್ಕೆ ಕಾರಣವಾಗಿತ್ತು.

ಉಳ್ಳವರ ಕೈಗೆ ರಾಜಕೀಯ ಅಧಿಕಾರವನ್ನು ನೀಡುವುದರಿಂದ ಬಡವರು, ಜಾತಿ ವ್ಯವಸ್ಥೆಗೆ ಬಲಿಯಾದ ಶೋಷಿತರು ಇನ್ನಷ್ಟು ಅನ್ಯಾಯ ಶೋಷಣೆಗೊಳಗಾಗುತ್ತಾರೆ. ಇದನ್ನು ತಪ್ಪಿಸಬೇಕಾದರೆ ಮೊದಲು ಸಾಮಾಜಿಕ ಸ್ವಾತಂತ್ರ್ಯವನ್ನು ಪಡೆದುಕೊಂಡು ಸಾಮಾಜಿಕ ಮತ್ತುಆರ್ಥಿಕ ಸಮಾನತೆಯನ್ನು ಸಾಧಿಸಬೇಕು ಎನ್ನುವುದು ಅಂಬೇಡ್ಕರ್ ಅವರ ಸ್ಪಷ್ಟ ನಿಲುವಾಗಿತ್ತು. ಸಾಮಾಜಿಕ ಮತ್ತು ಆರ್ಥಿಕ ತಾರತಮ್ಯವನ್ನು ನಿವಾರಣೆ ಮಾಡುವುದು ನಮ್ಮ ಕರ್ತವ್ಯವಾಗಿದೆ.

ಇವರಿಬ್ಬರೂ ಸಮಾನತೆಯ ಹರಿಕಾರರು:

ಬಸವಣ್ಣ ಮತ್ತು ಅಂಬೇಡ್ಕರ್ ವೈಯಕ್ತಿಕವಾಗಿ ನನಗೆ ಜ್ಞಾನಗುರುಗಳು, ನಾನು ಬಸವ ಜಯಂತಿಯ ದಿನವೇ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದು. ಸಂವಿಧಾನದ ಆಶಯಗಳನ್ನು ಜಾರಿಗೆತರುವುದೆಂದರೆ ಅಂಬೇಡ್ಕರ್ ಆಶಯಗಳನ್ನು ಜಾರಿಗೆ ತಂದ ಹಾಗೆ.

ಅದೇರೀತಿ ಅಂಬೇಡ್ಕರ್ ಆಶಯಗಳನ್ನು ಜಾರಿಗೆತರುವುದೆಂದರೆ ಅದು ಬಸವಣ್ಣನ ಚಿಂತನೆಗಳನ್ನು ಜಾರಿಗೆ ತಂದ ಹಾಗೆ. ಬಸವಣ್ಣ ಮತ್ತು ಅಂಬೇಡ್ಕರ್ ಸಿದ್ಧಾಂತಗಳ ನಡುವೆ ಹಲವಾರು ಬಗೆಯ ಸಾಮ್ಯತೆಗಳನ್ನು ಕಂಡುಕೊಳ್ಳಲು ಸಾಧ್ಯ. ಬಸವಣ್ಣನವರು ಕಟ್ಟಿ ಬೆಳೆಸಿದ ಅನುಭವ ಮಂಟಪಕ್ಕೂ, ಅಂಬೇಡ್ಕರ್ ಸಂವಿಧಾನದ ಮೂಲಕ ನೀಡಿರುವ ಪ್ರಜಾಪ್ರಭುತ್ವ ವ್ಯವಸ್ಥೆಗೂ ಸಾಮ್ಯತೆಗಳಿವೆ. ಇಬ್ಬರ ದೃಷ್ಟಿಯಲ್ಲಿಯೂ ಸಾಮಾನ್ಯ ಜನರೇ ಪ್ರಭುಗಳೂ. ಇಬ್ಬರೂ ಜಾತಿ-ಮತ ಮೀರಿದ ಸಮಾನತೆಯ ಹರಿಕಾರರು.

ಬಸವಣ್ಣನವರು ಹಾಗೂ ಅಂಬೇಡ್ಕರ್‌ ಅವರೂ ಸಮಾಜದ ಪಿಡುಗುಗಳಾದ ವರ್ಣ ವ್ಯವಸ್ಥೇ, ಜಾತಿತಾರತಮ್ಯ ಮತ್ತು ವೈದಿಕಷಾಹಿಯನ್ನು ವಿರೋದಿಸಿದ್ದರು. ಕೋಮುವಾದ, ಜಾತಿತಾರತಮ್ಯ. ಮೂಢ ನಂಬಿಕೆ, ಕಂದಾಚಾರ ಮೊದಲಾದ ಸಾಮಾಜಿಕ ಪಿಡುಗುಗಳೆಲ್ಲ ಮತ್ತೆ ತಲೆಎತ್ತಲು ಪ್ರಯತ್ನಿಸುತ್ತಿರುವ ಈ ಹೊತ್ತಿನಲ್ಲಿ ಅದರ ವಿರುದ್ಧದ ಹೋರಾಟಕ್ಕೆ ನಮಗಿರುವ ಅಸ್ತ್ರಗಳೆಂದರೆ ಬುದ್ಧ, ಬಸವಣ್ಣ, ಅಂಬೇಡ್ಕರ್ ಮೊದಲಾದವರ ತತ್ವ-ಸಿದ್ಧಾಂತಗಳು.

ಇದರ ಮೂಲಕವಷ್ಟೇ ಸಂವಿಧಾನದ ಮೂಲ ಆಶಯವಾದ ಸಮಸಮಾಜವನ್ನು ನಿರ್ಮಾಣ ಮಾಡಲು ಸಾಧ್ಯ. ನಾವು ಸಂವಿಧಾನವನ್ನು ರಕ್ಷಿಸಿದರೆ ಸಂವಿಧಾನ ನಮ್ಮನ್ನು ರಕ್ಷಿಸುತ್ತದೆ ಎಂದು ಸಂವಿಧಾನದ ಒಳಾರ್ಥವನ್ನು ತಿಳಿಸಿದ್ದಾರೆ.

RECOMMENDED

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್
Entertainment

ಇಂದು ನಾನು ಏನೇ ಆಗಿದ್ದರು ಪೋಷಕರು ಹಾಗೂ ಗುರುಗಳು ಕಾರಣ-ಸಂಗೀತ ನಿರ್ದೇಶಕ ಪ್ರದ್ಯೋತನ್

January 30, 2023
ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ
Entertainment

ಸೆಟ್ಟೇರಿತು ನೈಜ ಘಟನೆ ಆಧಾರಿತ ‘ರೇಸರ್’ ಸಿನಿಮಾ- ಭರತ್ ವಿಷ್ಣುಕಾಂತ್ ನಿರ್ದೇಶನದ ಮೊದಲ ಸಿನಿಮಾ

January 30, 2023
‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ
Entertainment

‘ಹೊಂದಿಸಿ ಬರೆಯಿರಿ’ ಚಿತ್ರತಂಡದಿಂದ ವಿನೂತನ ಪ್ರಚಾರ – ಪತ್ರದ ಮೂಲಕ ಮನೆ ಮನೆಗೂ ಬರಲಿದೆ ಸಿನಿಮಾ ಆಮಂತ್ರಣ

January 28, 2023
ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್
Entertainment

ಸೆಟ್ಟೇರಿತು ಧೋನಿ ಎಂಟರ್ಟೈನ್ಮೆಂಟ್ಸ್ ಮೊದಲ ತಮಿಳು ಸಿನಿಮಾ – ಚಿತ್ರಕ್ಕೆ ‘ಲೆಟ್ಸ್ ಗೆಟ್ ಮ್ಯಾರೀಡ್’ ಟೈಟಲ್

January 28, 2023
ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
Next Post
Covid 19: ಧಾರವಾಡ ಎಸ್‌ಡಿಎಂ ಮೆಡಿಕಲ್‌ ಕಾಲೇಜಿನ 116 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆ

Covid 19: ಧಾರವಾಡ ಎಸ್‌ಡಿಎಂ ಮೆಡಿಕಲ್‌ ಕಾಲೇಜಿನ 116 ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆ

ಜನರ ಮುಂದೊಂದು ಪ್ರಶ್ನೆ ಇಟ್ಟ ಡಿಕೆಶಿ (D K Shivakumar)

D K Shivakumar:‌ ಭ್ರಷ್ಟ ಬಿಜಿಪಿ ಸರ್ಕಾರವನ್ನು ಕಿತ್ತೊಗೆಯಬೇಕು: ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist