ಬೆಂಗಳೂರು: ನ.28 ISRO:ಇಸ್ರೋ ಸಂಸ್ಥೆಯನ್ನು ಗುಜರಾತಿಗೆ ಸ್ಥಳಾಂತರಿಸಿರುವ ವಿಷಯ ಕುರಿತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರಿಗೆ ಪತ್ರ ಬರೆದಿದ್ದಾರೆ.
ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದಾರೆ,ಪ್ರಸ್ತಾಪವನ್ನು ಕೂಡಲೇ ಕೈಬಿಡಬೇಕಾಗಿ ವಿನಂತಿಸುತ್ತಿದ್ದೇನೆ. ನಿಮ್ಮ ಬಿಡುವಿನ ಸಮಯದಲ್ಲಿ ನಮ್ಮ ಮನವಿಯ ಗಮನಹರಿಸಿ ಎಂದು ಕೇಳಿಕೊಳ್ಳುತ್ತೇನೆ.ಕರ್ನಾಟಕ ನಾಡಿನ ಜನರ ಹೆಮ್ಮೆ ಹಾಗೂ ಆತ್ಮಗೌರವಕ್ಕೆ ಸಂಬಂಧಪಟ್ಟ ಯೋಜನೆಯ ವಿಚಾರವಾಗಿ ನಾನು ಎಂದು ಪತ್ರ ಬರೆಯುತ್ತಿರುವುದು ನನ್ನ ಕರ್ತವ್ಯವಾಗಿದೆ.
ಹಲವು ದಶಕಗಳಿಂದ ಬೆಂಗಳೂರಿನಲ್ಲಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಕೇಂದ್ರ ಕಚೇರಿ ಹಾಗೂ ಬಾಹ್ಯಾಕಾಶ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗೆ ಪ್ರತಿಯೊಬ್ಬ ಕನ್ನಡಿಗರು ಹೆಮ್ಮೆ ಪಡುತ್ತಾರೆ.ನಿಮಗೆ ತಿಳಿದಿರುವಂತೆ 2007ರಿಂದ ಹೆಸರು ಮಾನವ ಸಹಿತ ಬಾಹ್ಯಾಕಾಶ ಗಗನಯಾನ ಯೋಜನೆಗೆ ಬೇಕಾದ ತಂತ್ರಜ್ಞಾನವನ್ನೂ ಸಿದ್ಧಪಡಿಸಿಕೊಂಡು ಬಂದಿದೆ.

ಇಸ್ರೋ ಕನ್ನಡಿಗರ ಹೆಮ್ಮೆ:
2023ರಲ್ಲಿ ಇಸ್ರೋ ಸಂಸ್ಥೆ ತನ್ನ ಮೊದಲ ಮಾನವ ಸಹಿತ ಬಾಹ್ಯಾಕಾಶಯಾನದಲ್ಲಿ ಜಿಎಸ್ ಎಲ್ ಟಿ ರಾಕೆಟ್ ಉಡಾವಣೆಗೆ ಸಿದ್ಧತೆ ನಡೆಸಿದೆ. ಇದು ಯಶಸ್ವಿಯಾದರೆ ಅಮೆರಿಕ ಚೀನಾ ನಾಲ್ಕನೇ ದೇಶ ಭಾರತವಾಗಲಿದೆ ಎಂದು ಹೇಳಿದ್ದಾರೆ.
ಈ ರೀತಿಯ ಗಗನಯಾನ ಯೋಜನೆಯ ಬಗ್ಗೆ ಕನ್ನಡಿಗರು ಭಾವನಾತ್ಮಕ ಸಂಬಂಧವನ್ನು ಹೊಂದಿದ್ದಾರೆ. ಯೋಜನೆಯನ್ನು ಬೆಂಗಳೂರಿನಿಂದ ಗುಜರಾತಿಗೆ ಸ್ಥಳಾಂತರ ಮಾಡುವ ಪ್ರಯತ್ನ ನಡೆಯುತ್ತಿದೆ ಎಂಬ ಸುದ್ದಿ ಕೇಳಿ ಕನ್ನಡಿಗರು ಬೇಸರಗೊಂಡಿದ್ದಾರೆ.
ಯೋಜನೆಯನ್ನು ಸ್ಥಳಾಂತರ ಆಗದೆ ದೇಶದ ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯವನ್ನು ಕಡೆಗಣಿಸಿ ಅದಕ್ಕೆ ದ್ರೋಹ ಬಗೆದು ಕನ್ನಡಿಗರ ಭಾವನೆಗೆ ಧಕ್ಕೆ ತರುವ ಪ್ರಯತ್ನ ಮಾಡುತ್ತಿದೆ ಎಂದು ಭಾವಿಸಲಾಗುತ್ತಿದೆ.
ಕನ್ನಡಿಗರ ಸ್ವಾಭಿಮಾನ ಹಾಗೂ ಆತ್ಮಗೌರವಕ್ಕೆ ಧಕ್ಕೆ ತರುವ ಕೆಲಸವಾಗಿದೆ. ಭವಿಷ್ಯದಲ್ಲಿ ಗಂಭೀರ ಪರಿಣಾಮವನ್ನು ಬೀರುತ್ತದೆ. ಬಾಹ್ಯಾಕಾಶ ಕೇಂದ್ರವನ್ನು ಸ್ಥಳಾಂತರ ಮಾಡುವ ಪ್ರಯತ್ನವನ್ನು ತಡೆಯಬೇಕು ಎಂದು ಬರೆದಿದ್ದಾರೆ.