ಬೆಂಗಳೂರು : (ಡಿ.2) Amulya ನಟಿ ಅಮೂಲ್ಯ ತಾಯಿ ಆಗುತ್ತಿದ್ದಾರೆ. ಈ ಶುಭ ಸುದ್ದಿಯನ್ನು ಸಾಮಾಜಿಕ ಜಾಲತಾಣದ ಮೂಲಕ ಹಂಚಿಕೊಂಡಿದ್ದಾರೆ.
ಇದೇ 2022ರ ಬೇಸಿಗೆಗೆ ಕುಟುಂಬಕ್ಕೆ ಹೊಸ ಸದಸ್ಯನ ಆಗಮನವಾಗಲಿದೆ ಎಂದು ಬರೆದುಕೊಂಡಿದ್ದಾರೆ. ಅಷ್ಟೇ ಅಲ್ಲದೇ ತಮ್ಮ ಪತಿ ಜಗದೀಶ್ ಜೊತೆಗಿನ ಫೋಟೋ ಶೇರ್ ಮಾಡಿಕೊಂಡು ಗುಡ್ ನ್ಯೂಸ್ ನೀಡಿದ್ದಾರೆ. ತಾವು ಮೊದಲ ಮಗವಿನ ಆಗಮನದ ನಿರೀಕ್ಷೆಯಲ್ಲಿ ಇರುವುದಾಗಿ ಅವರು ತಿಳಿಸಿದ್ದಾರೆ.
We are not just 2 now 😍
— Amulya (@nimmaamulya) December 2, 2021
Due this summer 2022 ❤️#familygrowing #AJhappiness@JagdishRChandra
Pic – @deepak_vijay_photography pic.twitter.com/QefEuZjyOa
ಬಾಲ ನಟಿಯಾಗಿ ಮಿಂಚಿದ್ದ ಅಮೂಲ್ಯ
ನಟಿ ಅಮೂಲ್ಯ ಬಾಲನಟಿಯಾಗಿ ಚಿತ್ರರಂಗಕ್ಕೆ ಕಾಲಿಟ್ಟಿದ್ದರು. ಚೆಲುವಿನ ಚಿತ್ತಾರ ಸಿನಿಮಾ ಮೂಲಕ ಹೀರೋಯಿನ್ ಆಗಿ ಸ್ಯಾಂಡಲ್ ವುಡ್ ಗೆ ಕಾಲಿಟ್ಟಿದ್ದ ಅಮೂಲ್ಯ ಚಿಕ್ಕ ವಯಸ್ಸಿನಲ್ಲಿಯೇ ಸ್ಟಾರ್ ಹೀರೋಯಿನ್ ಆಗಿ ಮಿಂಚಿದರು.
ಗಣೇಶ್, ಯಶ್, ಲವ್ಲೀ ಸ್ಟಾರ್ ಪ್ರೇಮ್, ಅಜಯ್ ರಾವ್, ದುನಿಯಾ ವಿಜಯ್ ಮುಂತಾದ ಸ್ಟಾರ್ ಕಲಾವಿದರಿಗೆ ಜೋಡಿಯಾಗಿ ನಟಿಸಿದ್ದಾರೆ.
ನಾನು ನನ್ನ ಕನಸು ಸಿನಿಮಾದಲ್ಲಿ ಬಹುಭಾಷಾ ಕಲಾವಿದ ಪ್ರಕಾಶ್ ರೈ ಜತೆ ತೆರೆಹಂಚಿಕೊಂಡಿದ್ದಾರೆ. 2017ರಲ್ಲಿ
ರಾಜಕೀಯ ಹಿನ್ನೆಲೆಯ ಕುಟುಂಬದವರಾದ ಜಗದೀಶ್ ಜತೆ ಅಮೂಲ್ಯ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.
‘ನಾವೀಗ ಕೇವಲ ಇಬ್ಬರಲ್ಲ’ ಎಂಬ ಕ್ಯಾಪ್ಷನ್ ಮೂಲಕ ಅಮೂಲ್ಯ ಸಿಹಿ ಸುದ್ದಿ ನೀಡಿದ್ದಾರೆ.