ಬೆಂಗಳೂರು: (ಡಿ.3) Omicran ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಒಂದೇ ದಿನ ಓಮಿಕ್ರಾನ್ ಐದು ಕೇಸ್ ದಾಖಲಾಗಿವೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಸುದ್ದಿ ಗೋಷ್ಠಿಯಲ್ಲಿ ಹೇಳಿದರು.
ದಕ್ಷಿಣ ಆಫ್ರಿಕಾದಿಂದ ಬಂದ ವ್ಯಕ್ತಿ:
’46 ವರ್ಷದ ಸೋಂಕಿತ ವ್ಯಕ್ತಿ ನವೆಂಬರ್ 20ರಂದು ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಬಂದಿರುತ್ತಾರೆ. ವಿಮಾನ ನಿಲ್ದಾಣದಲ್ಲಿ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿತ್ತು.
ಮೂರು ದಿನ ಮಾತ್ರ ಹೋಟೆಲ್‌ನಲ್ಲಿ ಕ್ವಾರಂಟೈನ್ ಆಗಿದ್ದರು. ಮೂರು ದಿನಗಳ ನಂತರ ಪರೀಕ್ಷೆ ಮಾಡಲಾಗಿದೆ. ಆಗ ಅವರಿಗೆ ವರದಿ ನೆಗೆಟಿವ್ ಬಂದಿದೆ. ಈ ವ್ಯಕ್ತಿಯಲ್ಲಿ ರೋಗ ಲಕ್ಷಣಗಳು ಕಂಡು ಬಂದಿರಲಿಲ್ಲ’ ಎಂದು ಗುಪ್ತಾ ಹೇಳಿದ್ದಾರೆ.

ಸಭೆಯಲ್ಲಿ ಭಾಗಿ
ಪರೀಕ್ಷೆ ಬಳಿಕ ಇವರು ನೇರವಾಗಿ ಬೊಮ್ಮಸಂದ್ರಕ್ಕೆ ತೆರಳಿದ್ದಾರೆ. ನಂತರ ಅವರು ಮೀಟಿಂಗ್ ನಲ್ಲಿ ಭಾಗಿಯಾಗಿದ್ದಾರೆ. ಕಂಪನಿ ಬೋರ್ಡ್ ಮೀಟಿಂಗ್‌ನಲ್ಲಿ ಆರು ಜನ ಭಾಗಿಯಾಗಿದ್ದರು.
ಹೋಮ್ ಕ್ವಾರಂಟೈನ್ ಆಗದೇ ಮೀಟಿಂಗ್ನಲ್ಲಿ ಅವರು ಭಾಗಿಯಾಗಿದ್ದಾರೆ. ಹೀಗಾಗಿ ಪ್ರಥಮ ಸಂಪರ್ಕದಲ್ಲಿದ್ದವರಲ್ಲಿ ಸೋಂಕು ಹರಡಿರುವ ಸಾಧ್ಯತೆ ಇದೆ. ಈ ಬಗ್ಗೆ ಪರಶೀಲನೆ ನಡೆಸಲಾಗಿದ್ದು ಮಾದರಿಗಳನ್ನು ಪರೀಕ್ಷೆಗೆ ನೀಡಲಾಗಿದೆ.
2ನೇ ಸೋಂಕಿತ ವ್ಯಕ್ತಿ
ಇನ್ನೂ ‘ಎರಡನೇ ವ್ಯಕ್ತಿಗೆ ಯಾವುದೇ ಟ್ರಾವೆಲ್ ಹಿಸ್ಟ್ರಿ ಇಲ್ಲ. ಇದರ ಬಗ್ಗೆ ಪರಿಶೀಲನೆ ಮಾಡಲಾಗುತ್ತಿದೆ. ನವೆಂಬರ್ 22 ರಂದು ಎರಡನೇ ವ್ಯಕ್ತಿಗೆ ಪರೀಕ್ಷೆ ಮಾಡಲಾಗಿದೆ. ಈ ವೇಳೆ ಪಾಸಿಟಿವ್ ಬಂದಿದೆ. ನವೆಂಬರ್ 24 ಸೋಂಕು ದೃಢಪಟ್ಟಿದೆ.
13 ಪ್ರಥಮ 213 ದ್ವೀತಿಯ ಸಂಪರ್ಕದಲ್ಲಿದ್ದರು. ಇವರಲ್ಲಿ ಮೂವರಿಗೆ ಪಾಸಿಟಿವ್ ಬಂದಿದೆ. ಒಟ್ಟು ಐದು ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ’ ಎಂದು ಗುಪ್ತಾ ಹೇಳಿದರು.