ಬೆಂಗಳೂರು: (ಡಿ.3) Senior Actor Shivaram: ಹಿರಿಯ ನಟ ಶಿವರಾಂ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿಲ್ಲ ಎಂದು ಪ್ರಶಾಂತ್ ಆಸ್ಪತ್ರೆ ವೈದ್ಯ ಡಾ.ಆನಂದ್ ತಿಳಿಸಿದ್ದಾರೆ.
ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ನಟ ಶಿವರಾಂ ಆರೋಗ್ಯದಲ್ಲಿ ಯಾವುದೇ ಚೇತರಿಕೆ ಕಂಡುಬಂದಿಲ್ಲ. ಐಸಿಯುನಲ್ಲಿ ಚಿಕಿತ್ಸೆ ಮುಂದುವರಿದಿದೆ ಎಂದು ವಿವರಿಸಿದ್ದಾರೆ.

ಶಿವರಾಂ ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಯಾವುದೇ ಚೇತರಿಕೆ ಕಂಡುಬಂದಿಲ್ಲ. ನಿನ್ನೆ ಹೇಗಿದ್ದರೋ, ಇಂದೂ ಹಾಗೇ ಇದ್ದಾರೆ. ಇಂದು ನುರಿತ ವೈದ್ಯರು ಪರೀಕ್ಷೆ ಮಾಡಿ ನಂತರ ಮಾಹಿತಿ ನೀಡಲಿದ್ದಾರೆ. ಇನ್ನೂ ಕೋಮಾ ಸ್ಥಿತಿಲ್ಲಿದ್ದು, ಶಿವರಾಂ ಬದುಕುಳಿದರೆ ಅದ್ಭುತವೇ ಸರಿ ಎಂದು ಹೇಳಿದ್ದಾರೆ.
ಮನೆಯಲ್ಲಿ ಪೂಜೆ ಮಾಡುತ್ತಿದ್ದ ಸಂದರ್ಭದಲ್ಲಿ ಬಿದ್ದು ಬ್ರೈನ್ ಡ್ಯಾಮೇಜ್ ಆಗಿ ಶಿವರಾಂ ಬೆಂಗಳೂರಿನ ಸೀತಾ ಸರ್ಕಲ್ ಬಳಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಿರಿಯ ನಟನ ಆರೋಗ್ಯ ವಿಚಾರಿಸಲು ನಟ ಶಿವರಾಜ್ ಕುಮಾರ್, ಗಿರಿಜಾ ಲೋಕೇಶ್ ಸೇರಿದಂತೆ ಹಲವು ಕಲಾವಿದರು ಆಸ್ಪತ್ರೆಗೆ ಭೇಟಿ ನೀಡಿದ್ದಾರೆ.