ಬೆಂಗಳೂರು: (ಡಿ.3)Omicron Virus ರಾಜ್ಯದಲ್ಲಿ ರೂಪಾಂತರಿ ಒಮಿಕ್ರಾನ್ ತಡೆ ಕುರಿತು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ತಜ್ಞರ ಜೊತೆ ಸುದೀರ್ಘ ಸಭೆಯ ನಂತರ ಕಂದಾಯ ಸಚಿವ ಆರ್.ಅಶೋಕ್ ಮಾಧ್ಯಮಗಳಿಗೆ ಹೇಳಿಕೆ ನೀಡಿದರು.
ರಾಜ್ಯದಲ್ಲಿ 2 ಒಮಿಕ್ರಾನ್ ಪ್ರಕರಣ ಪತ್ತೆಯಾಗಿದ್ದು, ವಿಶ್ವದಲ್ಲಿ 400 ಪ್ರಕರಣ ಪತ್ತೆಯಾಗಿದೆ. ಈ ರೋಗದಿಂದ ಯಾವುದೆ ಸಾವಿನ ವರದಿ ಇಲ್ಲ. ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಹೆಚ್ಚಿನ ಮಾಹಿತಿ ನೀಡುವಂತೆ ಮನವಿ ಮಾಡಲಾಗುವುದು ಎಂದರು.
ವಿಮಾನ ನಿಲ್ದಾಣದಲ್ಲಿ ಪರೀಕ್ಷೆ ಕಡ್ಡಾಯ ಮಾಡಲಾಗಿದ್ದು, ನೆಗೆಟಿವ್ ಬಂದ್ರೆ ಮಾತ್ರ ನಗರ ಪ್ರವೇಶಕ್ಕೆ ಬಿಡುವುದು. ಇನ್ನು ಮುಂದೆ ಸಿನೆಮಾ, ಮಾಲ್ ಗಳಿಗೆ ಹೋಗುವವರಿಗೆ ಎರಡೂ ಡೋಸ್ ಲಸಿಕೆ ಕಡ್ಡಾಯ ಮಾಡಲಾಗಿದೆ ಎಂದರು.
ಇದನ್ನೂ ಓದಿ: New Guidelines: ರಾಜ್ಯದಲ್ಲಿ ಒಮಿಕ್ರಾನ್ ಪತ್ತೆ ಹಿನ್ನಲೆ – ಸರ್ಕಾರದಿಂದ ನ್ಯೂ ಗೈಡ್ ಲೈನ್ಸ್
ಶಾಲಾ ಕಾಲೇಜುಗಳಲ್ಲಿ ಯಾವುದೇ ಸಮಾರಂಭ ನಡೆಸಲು ಅವಕಾಶ ಇಲ್ಲ. ಮದುವೆ ಸಮಾರಂಭ 500. ಕ್ಕಿಂತ ಕಡಿಮೆ ಮಾಡಲಾಗುವುದು.ಪ್ರತಿ ದಿನ ಒಂದು ಲಕ್ಷ ಟೆಸ್ಟ್ ಮಾಡಲು ತೀರ್ಮಾನ ಮಾಡಲಾಗಿದೆ ಎಂದರು.
ಕೊವಿಡ್ 2 ಅಲೆಯ ಸಂದರ್ಭದಲ್ಲಿ ಮಾಡಿದಂತೆ ಆಕ್ಚಿಜನ್ ಹಾಗೂ ಐಸಿಯು ಬೆಡ್ ಸಿದ್ಧಗೊಳಿಸಲು ಸೂಚನೆ ನೀಡಲಾಗಿದೆ ಎಂದರು.
ಬೆಳಗಾವಿಯಲ್ಲಿಯೇ ಅಧಿವೇಶನ
ಬೆಳಗಾವಿಯಲ್ಲಿ ನಿಗಧಿತ ದಿನಾಂಕ ಮತ್ತು ಸಮಯಕ್ಕೆ ಸರಿಯಾಗಿ ಚಳಿಗಾಲದ ವಿಧಾನ ಮಂಡಲದ ಅಧಿವೇಶನ ನಡೆಯಲಿದೆ ಎಂದರು. ಈ ಸಂದರ್ಭದಲ್ಲಿ ಅಬಕಾರಿ ಸಚಿವ ಆರ್.ಗೋಪಾಲಯ್ಯ ಉಪಸ್ಥಿತರಿದ್ದರು.