ಬೆಂಗಳೂರು: (ಡಿ.6) Omicron Virus: ಕರ್ನಾಟಕದಲ್ಲಿ ಒಮಿಕ್ರಾನ್ ವೈರಸ್ ಪತ್ತೆಯಾದ ಹಿನ್ನೆಲೆಯಲ್ಲಿ ಕೊರೋನಾ ಪ್ರಕರಣಗಳ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ವಿಶೇಷ ಆದೇಶವನ್ನು ಹೊರಡಿಸಿದೆ.
ಕೊರೋನಾ ಪ್ರಕರಣಗಳ ನಿಯಂತ್ರಣಕ್ಕಾಗಿ IAS ಅಧಿಕಾರಿಗಳಿಗೆ ವಿಶೇಷ ಜವಾಬ್ದಾರಿ ನೀಡಲು ಸರ್ಕಾರ ನಿರ್ಧರಿಸಿದೆ.ರೂಪಾಂತರಿ ವೈರಸ್ ಒಮಿಕ್ರಾನ್ ವೈರಸ್ ನಿರ್ವಹಣೆ ಹಾಗೂ ಕಟ್ಟೆಚ್ಚರ ವಹಿಸಲು ನೋಡಲ್ ಅಧಿಕಾರಿಗಳ ನೇಮಕ ಮಾಡಲಾಗಿದೆ.
ವಿಧಾನಸೌಧದಲ್ಲಿ ಇಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಖಾತೆ ಸಚಿವ ಬಿ . ಸಿ ನಾಗೇಶ್ ಅವರ ನೇತೃತ್ವದಲ್ಲಿ ಕೊರೋನ ಕುರಿತಾಗಿ ಸಭೆ ನಡೆಸಲಾಯಿತು. ಸಾಮೂಹಿಕ ಸಭೆ ನಡೆಸದೆ ಪ್ರತ್ಯೇಕವಾಗಿ ಮಾಹಿತಿ ಸಂಗ್ರಹ ಮಾಡಲಾಗಿತ್ತು ಮೊದಲು ಸಾರ್ವಜನಿಕ ಶಿಕ್ಷಣ ಇಲಾಖೆ ಆಯುಕ್ತರಿಂದ ಇವರ ಪಡೆಯಲಾಗಿದೆ.
ಶಿಕ್ಷಣ ಸಂಸ್ಥೆ ನಿಯಮ ಪಾಲಿಸುತ್ತಿಲ್ಲ

ಕೊರೋನಾ ಮಾರ್ಗಸೂಚಿ ಪ್ರಕಟಿಸುವಂತೆ ಖಾಸಗಿ ಶಾಲೆಗಳ ಒಕ್ಕೂಟದಿಂದ ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಖಾತೆ ಸಚಿವ ಬಿ.ಸಿ ನಾಗೇಶ್ ಅವರು ಮನವಿ ಮಾಡಿದ್ದಾರೆ.
ಈ ಬಗ್ಗೆ ಮಾತನಾಡಿದ ಕ್ಯಾಮ್ಸ್ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಅವರು ಮಾತನಾಡಿ, ಶಾಲೆಯಲ್ಲಿ ಸರ್ಕಾರದ ಮಾರ್ಗಸೂಚಿಗಳು ಪಾಲನೆಯಾಗುತ್ತಿಲ್ಲ. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ನಿಯಮಗಳನ್ನು ಪಾಲಿಸುತ್ತಿಲ್ಲ.
ಕೋಚಿಂಗ್ ಸೆಂಟರ್ ಟುಟೋರಿಯಲ್ ಗಳು ಸೇರಿದಂತೆ ಶಿಕ್ಷಣ ಸಂಸ್ಥೆಗಳಿಗೆ ಶಿಕ್ಷಣ ಇಲಾಖೆಯಿಂದ ಪ್ರತ್ಯೇಕ ಮಾರ್ಗಸೂಚಿಯನ್ನು ಪ್ರಕಟಿಸಬೇಕು.
ಇದನ್ನೂ ಓದಿ: Omicron Virus: 2 ಲಸಿಕೆ ತೆಗೆದುಕೊಂಡವರಲ್ಲಿ ಸೋಂಕಿನ ತೀವ್ರತೆ ಕಡಿಮೆ: ಡಾ.ಕೆ.ಸುಧಾಕರ್
ಸೋಂಕು ಹೆಚ್ಚಾದರೆ ಎದುರಿಸಲು ರಾಜ್ಯ ಸರ್ಕಾರ ಸಿದ್ಧವಿದೆ. ಮುಖ್ಯಮಂತ್ರಿಯವರು ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುತ್ತಾರೆ ಸರ್ಕಾರ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು. ಜೋಕಿನಿಂದ ಆತಂಕಪಡುವ ಅಗತ್ಯವಿಲ್ಲ ಎಂದು ತಜ್ಞರು ಕೂಡ ಹೇಳಿದ್ದಾರೆ. ರಾಜ್ಯದಲ್ಲಿ ಲಸಿಕೆ ಅಭಿಯಾನ ವೇಗವಾಗಿ ನಡೆಯುತ್ತಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ ಅಶ್ವಥ್ ನಾರಾಯಣ್ ಅವರು ಹೇಳಿದ್ದಾರೆ.