ಚೆನ್ನೈ:( ಡಿ.8): Helicopter Crash: ತಮಿಳುನಾಡಿನ ಊಟಿಯಲ್ಲಿ ಸೇನಾ ಹೆಲಿಕ್ಯಾಪ್ಟರ್ ಪತನದಲ್ಲಿ ಸಾವನ್ನಪ್ಪಿದವರ ಸಂಖ್ಯೆ 11ಕ್ಕೆ ಏರಿಕೆಯಾಗಿದೆ. ರಕ್ಷಣಾ ಪಡೆ ಸಿಬ್ಬಂದಿಗಳ ಮುಖ್ಯಸ್ಥ ಬಿಪಿನ್ ರಾವತ್ ಸೇರಿ ಮೂವರ ಸ್ಥಿತಿ ಗಂಭೀರವಾಗಿದೆ.
ಬಿಪಿನ್ ರಾವತ್ ಅವರ ಪತ್ನಿ ಸೇರಿ ಒಟ್ಟು 14 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದ್ದು ಕಾಲೇಜಿನಲ್ಲಿರುವ ಕಾರ್ಯಕ್ರಮದಲ್ಲಿ ಭಾಗಿಯಾಗಲು ತೆರಳುತ್ತಿದ್ದರು ಎನ್ನಲಾಗಿದೆ.

ತಮಿಳುನಾಡಿನ ಊಟಿಯಲ್ಲಿ ಸಂಭವಿಸಿದ ಹೆಲಿಕ್ಯಾಪ್ಟರ್ ದುರಂತದಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರ ಪತ್ನಿ ಮಧುಲಿಕಾ ರಾವತ್ ಅವರು ದುರಂತದಲ್ಲಿ ಮೃತ ಪಟ್ಟಿದ್ದಾರೆ.
ಘಟನಾ ಸ್ಥಳದಲ್ಲಿ 11 ಪ್ರದೇಶಗಳು ಪತ್ತೆಯಾಗಿದೆ ಮಿ. ಸೀರೀಸ್ ಹೆಲಿಕಾಪ್ಟರ್ ಕೊಯಮತ್ತೂರು ಮತ್ತು ಸುಲೂರ್ ನಡುವೆ ಅಪಘಾತಕ್ಕೀಡಾಗಿದೆ.
ಇದನ್ನೂ ಓದಿ: ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಪ್ರಯಾಣಿಸುತ್ತಿದ್ದ ಹೆಲಿಕ್ಯಾಪ್ಟರ್ ಪತನ: 2 ಮಂದಿ ಸಾವು
ಸಿಡಿಎಸ್ ಜನರಲ್ ಬಿಪಿನ್ ರಾವತ್, ಮಧುಲಿಕಾ ರಾವತ್, ಬ್ರಿಗಡಿಯರ್ ಎಲ್.ಎಸ್ ನಾಯಕ್, ಲೆಫ್ಟಿನೆಂಟ್ ಹರ್ಜಿಂದರ್ ಸಿಂಗ್, ಎನ್.ಕೆ ಗುರು ಸೇವಕ ಸಿಂಗ್ , ಎನ್.ಕೆ ಜಿತೇಂದ್ರ ಸಿಂಗ್ , ಎನ್.ಕೆ ವಿವೇಕ ಕುಮಾರ್ , ಎನ್. ಸಾಯಿ ತೇಜ, ಹೆಚ್ ಎ. ವಿ. ಸಾತ್ಪಾಲ್ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ
ಈಗಾಗಲೇ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಘಟನಾ ಸ್ಥಳಕ್ಕೆ ತೆರಳುವ ಸಾಧ್ಯತೆ ಇದ ಹಾಗೂ ದುರಂತದ ಕುರಿತಂತೆ ತನಿಖೆಗೆ ಆದೇಶಿಸಲಾಗಿದೆ.