ಚೆನ್ನೈ:( ಡಿ.8) CDS General Bipin Rawat : ತಮಿಳುನಾಡಿನ ಊಟಿಯಲ್ಲಿ ಸೇನಾ ಹೆಲಿಕ್ಯಾಪ್ಟರ್ ಪತನದಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಅವರೂ ಕೂಡ ಸಾವನ್ನಪ್ಪಿದ್ದಾರೆ.
ಹೆಲಿಕಾಪ್ಟರ್ ಪತನದಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಅವರ ಪತಿ ಸೇರಿ ಒಟ್ಟು 14 ಮಂದಿ ಸಾವನ್ನಪ್ಪಿದ್ದಾರೆ.

ಹೆಲಿಕಾಪ್ಟರ್ ದುರಂತದಲ್ಲಿ ಮೃತಪಟ್ಟ ಮೂರು ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಸೇರಿ ಎಲ್ಲಾ 13 ವರ್ಷಗಳನ್ನು ನಾಳೆ ದೆಹಲಿಗೆ ಸ್ಥಳಾಂತರಿಸಲಾಗುವುದು ಎಂದು ಸೇನಾ ಮೂಲಗಳು ತಿಳಿಸಿದೆ.
ಸೇನಾ ವಿಧಿವಿಧಾನಗಳ ಜೊತೆ ಸಕಲ ಸರ್ಕಾರಿ ಗೌರವಗಳೊಂದಿಗೆ ನಾಳೆ ದೆಹಲಿಯಲ್ಲಿ ಅಂತ್ಯಕ್ರಿಯೆ ನಡೆಯುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
ಚೆನ್ನೈನಿಂದ ವಿಶೇಷ ವಿಮಾನದಲ್ಲಿ ಪಾರ್ಥಿವ ಶರೀರಗಳನ್ನು ದೆಹಲಿಗೆ ತರಲಾಗುವುದು ಹಾಗೂ ಅಂತಿಮ ದರ್ಶನದ ಬಳಿಕ ಅಂತ್ಯಕ್ರಿಯೆ ನಡೆಯಲಿದೆ. ಈ ಕುರಿತಂತೆ ಪ್ರಧಾನಿ ಮೋದಿಯವರು ಇಂದು ಸಂಜೆ ನಡೆಯಲಿರುವ ತುರ್ತು ಸಭೆಯಲ್ಲಿ ಚರ್ಚಿಸಲಾಗುತ್ತದೆ ಎಂದು ಹೇಳಲಾಗಿದೆ