ಚೆನ್ನೈ: (ಡಿ.8) Army Helicopter Crash: ತಮಿಳುನಾಡಿನ ಊಟಿಯಲ್ಲಿ ಇಂದು ಮಧ್ಯಾಹ್ನ ಸೇನಾ ಹೆಲಿಕಾಪ್ಟರ್ ಪತನಗೊಂಡ ಘಟನೆಯ ಬಗ್ಗೆ ಸ್ಥಳೀಯ ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿದ್ದಾರೆ.
“ಮರಕ್ಕೆ ಡಿಕ್ಕಿ ಹೊಡೆದ ರಭಸಕ್ಕೆ ಸದ್ದು ಕೇಳಿಸಿತು. ತಕ್ಷಣ ಹೊರಬಂದು ನೋಡಿದರೇ ಹೆಲಿಕ್ಯಾಪ್ಟರ್ ಮರಕ್ಕೆ ಡಿಕ್ಕಿ ಹೊಡೆದು ದೊಡ್ಡ ಬೆಂಕಿಯ ಜ್ವಾಲೆ ಉರಿಯತೊಡಗಿತು.

ಹೆಲಿಕ್ಯಾಪ್ಟರ್ ಡಿಕ್ಕಿ ಹೊಡೆದ ತಕ್ಷಣ ಮೂವರು ಸಿಗುತ್ತಿರುವುದನ್ನು ಗಮನಿಸಿದೆ ಎಂದು ಹೇಳಿದ್ದಾರೆ. ಘಟನಾ ಸ್ಥಳದಲ್ಲಿ ಇದ್ದ ಮತ್ತೋರ್ವ ಪ್ರತ್ಯಕ್ಷದರ್ಶಿ ವಿವರಣೆ ನೀಡಿದ್ದು”ಮಂಜು ತುಂಬಿಕೊಂಡಿದ್ದ ಕಾರಣ ಹೆಲಿಕ್ಯಾಪ್ಟರ್ ಮರಕ್ಕೆ ಡಿಕ್ಕಿ ಹೊಡೆದಿದೆ ನಾನು ಘಟನಾಸ್ಥಳಕ್ಕೆ ಹೋಗುತ್ತಿದ್ದಂತೆ ಬೆಂಕಿ ಹತ್ತಿಕೊಂಡು ಉಳಿಯುತ್ತಿತ್ತು” ಎಂದು ಹೇಳಿದ್ದಾರೆ.
ಇಂದು ಮಧ್ಯಾಹ್ನ ಸೇನಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರ ಪತ್ನಿ ಸೇರಿದಂತೆ 13 ಮಂದಿ ಹೆಲಿಕ್ಯಾಪ್ಟರ್ ನಲ್ಲಿ ಪ್ರಯಾಣಿಸುತ್ತಿದ್ದರು. ಈ ವೇಳೆ ತಮಿಳುನಾಡಿನ ಊಟಿಯ ಕುನ್ನೂರಿನಲ್ಲಿ ಹೆಲಿಕ್ಯಾಪ್ಟರ್ ಮರಕ್ಕೆ ಡಿಕ್ಕಿ ಹೊಡೆದು ಪತನಗೊಂಡಿದೆ. ಘಟನೆಯಲ್ಲಿ ಸೇನಾ ಮುಖ್ಯಸ್ಥ ಬಿಪಿನ್ ರಾವತ್ ಹಾಗೂ ಪತ್ನಿ ಸೇರಿದಂತೆ 12 ಮಂದಿ ದುರ್ಮರಣಕ್ಕೀಡಾಗಿದ್ದಾರೆ.