ಬೆಂಗಳೂರು: (ಡಿ.9) Crocodile: ಜೀವಂತ ಮೊಸಳೆ ಮರಿಯನ್ನು ಮಾರಾಟಕ್ಕೆ ಯತ್ನಿಸುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಜಯನಗರದ ಅಬ್ದುಲ್ ಖಾಲಿದ್ ಮತ್ತು ರಾಮನಗರ ನಿವಾಸಿಯಾದ ಗಂಗಾಧರ ಬಂಧಿತ ಆರೋಪಿಗಳು ಎಂದು ಗುರುತಿಸಲಾಗಿದೆ.

ನಗರದ ಚೆನ್ನಮ್ಮನಕೆರೆ ಅಚ್ಚುಕಟ್ಟು ಠಾಣಾ ವ್ಯಾಪ್ತಿಯ ಈಶ್ವರಿ ಥಿಯೇಟರ್ ಸಮೀಪದ ಬಿಲ್ಡಿಂಗ್ ನಲ್ಲಿ ಆರೋಪಿಗಳು ಸಿಕ್ಕಿಬಿದ್ದಿದ್ದಾರೆ. ಬಿಳಿ ಬಣ್ಣದ ನೀರಿನ ಕ್ಯಾನ್ ಒಳಗೆ ಜೀವಂತ ಮೊಸಳೆ ಮರಿ ತಂದು ಮಾರಾಟ ಮಾಡಲು ಆರೋಪಿಗಳು ಯತ್ನಿಸಿದ್ದರು ಎನ್ನಲಾಗಿದೆ. ಮೊಸಳೆ ಮರಿಯನ್ನು ಪೊಲೀಸರು ರಕ್ಷಿಸಿದ್ದಾರೆ.
ಪೊಲೀಸರು ಆರೋಪಿಗಳನ್ನು ಬಂಧಿಸಿ ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣೆಯಲ್ಲಿ ವನ್ಯಜೀವಿ ಸಂರಕ್ಷಣಾ ಕಾಯ್ದೆ 1972 ರ ಅಡಿ ಎಫ್ಐಆರ್ ದಾಖಲು ಮಾಡಿ, ಆರೋಪಿಗಳ ವಿರುದ್ಧ ಕೇಸ್ ದಾಖಲು ಮಾಡಲಾಗಿದೆ.