ಬೆಂಗಳೂರು: (ಡಿ.10): Plastic Ban: ರಾಜ್ಯಾದ್ಯಂತ ಎಲ್ಲಾ ಶಾಲಾ ಹಾಗೂ ಶಿಕ್ಷಣ ಇಲಾಖೆಗಳ ಕಚೇರಿಯಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ ಮಾಡಿ ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.
ಶಿಕ್ಷಣಕ್ಕೆ ಸಂಸ್ಥೆಗಳು, ಸಮಾರಂಭಗಳಲ್ಲಿ ಪ್ಲಾಸ್ಟಿಕ ಬಳಸುವಂತಿಲ್ಲ ಈ ಕುರಿತು ಎಲ್ಲಾ ಡಿಡಿಪಿಐ ಹಾಗೂ ಬಿಇಒಗಳಿಗೆ ಸೂಚನೆ ನೀಡಲಾಗಿದೆ.

ಶಿಕ್ಷಣ ಇಲಾಖೆಯ ಕಚೇರಿಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧ ಮಾಡಿದ್ದು, ಪ್ಲಾಸ್ಟಿಕ್ ಬ್ಯಾಗ್, ಬಿತ್ತಿಪತ್ರ ತೋರಣ ಪ್ಲಾಸ್ಟಿಕ್ ಬಾವುಟ, ಫ್ಲೆಕ್ಸ್, ಪ್ಲಾಸ್ಟಿಕ್ ತಟ್ಟೆ, ಥರ್ಮಕೋಲ್ ಸೇರಿದಂತೆ ಪ್ಲಾಸ್ಟಿಕ್ ನಿಂದ ತಯಾರಿಸಿದ ವಸ್ತುಗಳನ್ನು ಬಳಸದಂತೆ ನಿಷೇಧ ಹೊರಡಿಸಿದೆ.
ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಅವರು ಮಾತನಾಡಿ, ಪ್ಲಾಸ್ಟಿಕ್ ಸುತ್ತಿದ ಹೂಗುಚ್ಚ, ಪ್ಲಾಸ್ಟಿಕ್ ಹಾಳೆಯಿಂದ ಮಾಡಿದ ಪುಸ್ತಕಗಳನ್ನು ನೀಡುತ್ತಿರುವುದು ಗಮನಕ್ಕೆ ಬಂದಿದೆ. ಹೀಗಾಗಿ ಸಚಿವರು ಪ್ಲಾಸ್ಟಿಕ್ ಗೆ ಕಡಿವಾಣ ಹಾಕಿದ್ದು ರಾಜ್ಯದಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧದ ಕುರಿತು ಅಗತ್ಯ ಕ್ರಮ ಕೈಗೊಳ್ಳುವಂತೆ ಅವರು ತಿಳಿಸಿದ್ದಾರೆ.