ಬೆಳಗಾವಿ: (ಡಿ.13): Puneeth RajKumar: ಅಕಾಲಿಕ ನಿಧನ ಹೊಂದಿದ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಪದ್ಮಶ್ರೀ ಪ್ರಶಸ್ತಿ ನೀಡಲು ಶಿಫಾರಸು ಮಾಡಲಾಗಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಅವರು ಹೇಳಿದರು.
ನಟ ಪುನೀತ್ ರಾಜಕುಮಾರ್ ಅವರಿಗೆ ಮರಣೋತ್ತರವಾಗಿ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಲಾಗಿತ್ತು. ಬೆಳಗಾವಿಯ ಸುವರ್ಣ ಸೌಧದಲ್ಲಿ ಮೊದಲ ದಿನ ಅಧಿವೇಶನದ ಸಂದರ್ಭದಲ್ಲಿ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸುತ್ತ ಮಾತನಾಡಿದ ಅವರು, ಪುನೀತ್ ರಾಜಕುಮಾರ್ ಅವರನ್ನು ಸಿಎಂ ಅವರು ನೆನೆದು, ಸರ್ಕಾರ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಿತ್ತು. ಇದೀಗ ಪ್ರಶಸ್ತಿ ನೀಡುವ ದಿನಾಂಕವನ್ನು ಘೋಷಣೆ ಮಾಡಲಾಗುವುದು ಎಂದು ಹೇಳಿದರು.
ಇದನ್ನೂ ಓದಿ: Kashi Vishwanath Corridor: ಕಾಶಿ ವಿಶ್ವನಾಥ ಕಾರಿಡಾರ್ ಉದ್ಘಾಟಿಸಿದ ಪ್ರಧಾನಿ ಮೋದಿ

ಕರ್ನಾಟಕ ರತ್ನ ಪ್ರಶಸ್ತಿ ಅಲ್ಲದೆ, ಪದ್ಮಶ್ರೀ ಪುರಸ್ಕಾರ ಪ್ರಶಸ್ತಿಗೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಹೇಳಿದರು.
ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಪುನೀತ್ ರಾಜಕುಮಾರ್ ಅವರಿಗೆ ನುಡಿನಮನ ಸಲ್ಲಿಸುತ್ತಾ, ಪುನೀತ್ ಅವರ ನಿಧನ ಕರುನಾಡೆ ಕಂಬನಿ ಮಿಡಿದಿದೆ. ಅವರಿಗೆ ಸಾಯುವಂತಹ ವಯಸ್ಸಾಗಿರಲಿಲ್ಲ ಎಂದು ಆತ್ಮಕ್ಕೆ ಶಾಂತಿ ಕೋರಿದರು.
ಬೆಳಗಾವಿಯ ಮೊದಲ ಅಧಿವೇಶನ ಆದ್ದರಿಂದ, ಪುನೀತ್ ರಾಜಕುಮಾರ್ ಅವರ ವಿಷಯವನ್ನು ಸದನದಲ್ಲಿ ಪ್ರಸ್ತಾಪಿಸಲಾಯಿತು. ಈ ಬಗ್ಗೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಮಾತನಾಡಿ, ಸಿನಿಮಾ ಕ್ಷೇತ್ರವಲ್ಲದೆ ಅನೇಕ ಕ್ಷೇತ್ರಗಳಿಗೆ ಪುನೀತ್ ರಾಜಕುಮಾರ್ ಅವರ ಕೊಡುಗೆ ನೀಡಿದ್ದಾರೆ.
ಇತ್ತೀಚೆಗೆ ನಿಧನರಾದ ಹಿರಿಯನಟ ಶಿವರಾಂ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.