Teachers Promotion: (ಡಿ,15): ಶಿಕ್ಷಕರಿಗೆ ಬಡ್ತಿ ನೀಡಲು ಶಿಕ್ಷಣ ಇಲಾಖೆ ಹೊಸ ನಿಯಮ ರೂಪಿಸಿ ಬಿಡುಗಡೆ ಮಾಡಿದೆ. ಶಿಕ್ಷಕರಿಗೆ ಬಡ್ತಿ ನೀಡಲು ಸ್ಪರ್ಧಾತ್ಮಕ ಪರೀಕ್ಷೆ ನಡೆಸುವುದಾಗಿ ಸಾರ್ವಜನಿಕ ಶಿಕ್ಷಣ ಇಲಾಖೆ ತಿಳಿಸಿದೆ.
ಬಡ್ತಿ ನೀಡುವ ಸಂದರ್ಭದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ಕಡ್ಡಾಯವಾಗಿ ನಡೆಸಬೇಕು ಎಂದು ಸೂಚನೆ ನೀಡಲಾಗಿದೆ ಆರರಿಂದ ಎಂಟನೇ ತರಗತಿ ಶಿಕ್ಷಕರ ನೇಮಕಾತಿ ನಿಯಮ ಅನ್ವಯವಾಗುತ್ತದೆ.
ಪ್ರಾಥಮಿಕ ಶಾಲೆಗಳಲ್ಲಿ ಇರುವ 75ಕ್ಕೂ ಹೆಚ್ಚು ಸಾವಿರ ಶಿಕ್ಷಕರು ಈಗಾಗಲೇ ಪದವಿಯನ್ನು ಪೂರೈಸಿದ್ದಾರೆ. ಶಿಕ್ಷಕರನ್ನು ಆರರಿಂದ ಎಂಟನೇ ತರಗತಿಗೆ ನೇಮಿಸಬೇಕು ಎಂಬ ಕೂಗು ಕೇಳಿ ಬಂದಿರುವ ಹಿನ್ನೆಲೆಯಲ್ಲಿ ಬಡ್ತಿ ನೀಡುವ ಸಂದರ್ಭದಲ್ಲಿ ಪ್ರಾಧಿಕಾರದ ನಿಯಮದ ಪ್ರಕಾರ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವಂತೆ ಸೂಚನೆ ನೀಡಲಾಗಿದೆ.
ಪದವೀಧರ ಶಿಕ್ಷಕರಿಗೆ ಬಡ್ತಿ ನೀಡುವ ಸಂದರ್ಭದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ನಡೆಸುವುದು ಬೇಡ ಎನ್ನಲಾಗುತ್ತಿದ್ದು. 2017ರಲ್ಲಿ ರೂಪಿಸಲಾಗಿರುವ ನಿಯಮಾವಳಿಗಳಲ್ಲಿ ತಿದ್ದುಪಡಿ ತಂದು 2021ರಲ್ಲಿ ಹೊಸ ನೇಮಕಾತಿ ನಿಯಮ ಜಾರಿಗೊಳಿಸಲಾಗಿದೆ.