ಬೆಳಗಾವಿ: (ಡಿ.15) Kannada Flag :ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಶಿವಸೇನಾ ಕಾರ್ಯಕರ್ತರು ಕನ್ನಡ ಬಾವುಟವನ್ನು ಸುಟ್ಟುಹಾಕಿದ್ದಾರೆ.
ವಿಧಾನಮಂಡಲದ ಚಳಿಗಾಲದ ಅಧಿವೇಶನಕ್ಕೆ ಪರ್ಯಾಯವಾಗಿ ಮಹಾರಾಷ್ಟ್ರ ಏಕೀಕರಣ ಸಮಿತಿ MES ಅವರು ಹಮ್ಮಿಕೊಂಡಿದ್ದ ಮಹಾಮೇಳಾವ ಸಂದರ್ಭದಲ್ಲಿ ಸಂಘಟನೆಯ ಅಧ್ಯಕ್ಷ ದೀಪಕ ದಳವಿ ಅವರಿಗೆ ಕನ್ನಡಪರ ಹೋರಾಟಗಾರ ಮಸಿ ಎರಚಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಿ ಕನ್ನಡ ಬಾವುಟವನ್ನು ಸುಟ್ಟು ಹಾಕಿ ಬಡತನ ಮೆರೆದಿದ್ದಾರೆ.

ಪ್ರತಿಭಟನೆ ಸಮಯದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿ ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದ್ದಾರೆ. ಸದ್ಯ ಧ್ವಜಕ್ಕೆ ಬೆಂಕಿ ಹಚ್ಚಿರುವುದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ಕೆಲ ವಿಡಿಯೋಗಳು ವಿಡಿಯೋ ಬಗ್ಗೆ ಧ್ವಜಕ್ಕೆ ಬೆಂಕಿ ಹಾಕಲಾಗಿದೆ ಮುಂದೆ ನಿಮ್ಮ ಮನೆಗಳಿಗೆ ಬೆಂಕಿ ಹಚ್ಚುವುದು ಬಾಕಿ ಉಳಿದಿದೆ ಎಂಬ ಸಂದೇಶವನ್ನು ಕೂಡ ಪೋಸ್ಟ್ ಮಾಡಿದ್ದಾರೆ. ಇದೀಗ ಕನ್ನಡ ಧ್ವಜ ಸತ್ತಿರುವ ಬಗ್ಗೆ ನಲ್ಲಿ ಅಭಿಯಾನ ನಡೆಸಲಾಗುತ್ತಿದೆ.