ಬೆಂಗಳೂರು: (ಡಿ.16) Kannada Flag:ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ MES ಮುಖಂಡರು ಕನ್ನಡ ಧ್ವಜವನ್ನು ಸುಟ್ಟುಹಾಕಿ ಅಪಮಾನ ಮಾಡಿರುವುದಕ್ಕೆ ಸಾಕಷ್ಟು ಚರ್ಚೆಗಳೂ ನಡೆಯುತ್ತಿದೆ.
ಚಿತ್ರರಂಗ ಸೇರಿದಂತೆ ರಾಜಕೀಯ ವಲಯದಲ್ಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ವಿರೋಧ ವ್ಯಕ್ತವಾಗಿದೆ. ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಬಾವುಟವನ್ನು ಸುತ್ತು ಹಾಕಿರುವುದನ್ನು ತೀವ್ರವಾಗಿ ಖಂಡಿಸಿ, ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.
ವರ ನಟ ಡಾ. ರಾಜಕುಮಾರ್ ಅವರ ಭಾವಚಿತ್ರವನ್ನು ಹಾಕಿ “ನಮ್ಮ ನಾಡಧ್ವಜ ಅವರಿಗೆ ತಕ್ಕ ಶಿಕ್ಷೆಯಾಗಲಿ. ನಿಜವಾದ ಕನ್ನಡಪರ ಹೋರಾಟಗಾರರನ್ನು ಬಿಡುಗಡೆಗೊಳಿಸಿ ಜೈ ಕನ್ನಡ ಜೈ ಕರ್ನಾಟಕ” ಎಂದು ಶಿವರಾಜಕುಮಾರ ಟ್ವೀಟ್ ಮಾಡಿದ್ದಾರೆ
ಡಾ ರಾಜಕುಮಾರ್ ಅವರು ಕನ್ನಡ ಧ್ವಜವನ್ನು ಹಿಡಿದಿದ್ದು ಪಕ್ಕದಲ್ಲಿ ಶಿವರಾಜಕುಮಾರ್ ತಮ್ಮ ನಿಲುವನ್ನು ವ್ಯಕ್ತಪಡಿಸಿದ್ದಾರೆ. ಡಾ ರಾಜಕುಮಾರ್ ಅವರು ಹಿಡಿದಿರುವ ಕಾರ್ಡಿನಲ್ಲಿ ಆಳ್ ಕನ್ನಡ , ತಾಯ್ ಬಾಳ್ ಕನ್ನಡ ತಾಯ್ ಎಂಬ ವಾಕ್ಯನ ವಿದೆ.
ಶಿವರಾಜ್ ಕುಮಾರ್ ಅವರು ಅಭಿಯಾನಕ್ಕೆ ಬೆಂಬಲ ಸೂಚಿಸಿದ್ದು ಕನ್ನಡ ಹೋರಾಟಗಾರರನ್ನು ಬಿಡುಗಡೆಗೊಳಿಸಿ ಎನ್ನುವ ಹಾಷ್ಟಾಗ್ ನೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಗೃಹಮಂತ್ರಿ ಅರಗ ಜ್ಞಾನೆಂದ್ರ ಅವರಿಗೆ ಟ್ಯಾಗ್ ಮಾಡಿದ್ದಾರೆ.
ನಮ್ಮ ನಾಡ ಧ್ವಜ ಸುಟ್ಟವರಿಗೆ ತಕ್ಕ ಶಿಕ್ಷೆ ಆಗಲಿ. ನಿಜವಾದ ಕನ್ನಡಪರ ಹೋರಾಟಗಾರರನ್ನು ಬಿಡುಗಡೆಗೊಳಿಸಿ. ಜೈ ಕನ್ನಡ. ಜೈ ಕರ್ನಾಟಕ.#ಕನ್ನಡಹೋರಾಟಗಾರರನ್ನಬಿಡುಗಡೆಗೊಳಿಸಿ#releasekannadaactivists@BSBommai @CMofKarnataka @JnanendraAraga @COPBELAGAVI pic.twitter.com/qcjOVdb4SS
— DrShivaRajkumar (@NimmaShivanna) December 15, 2021
ಶಿವರಾಜ್ ಕುಮಾರ್ ಅವರು ಮಾಡಿರುವ ಸಾವಿರಾರು ಅಭಿಮಾನಿಗಳು ಬೆಂಬಲ ವ್ಯಕ್ತಪಡಿಸಿದ್ದು ಅಪಾರ ಸಂಖ್ಯೆಯಲ್ಲಿ ಶೇರ್ ಮಾಡಿದ್ದಾರೆ.
MES ಕಾರ್ಯಕರ್ತರ ವಿರುದ್ಧ ನವರಸ ನಾಯಕ ಜಗ್ಗೇಶ್ ಆಕ್ರೋಶ
ಇನ್ನೂ ಸ್ಯಾಂಡಲ್ವುಡ್ನ ನವರಸ ನಾಯಕ ಜಗ್ಗೇಶ್ ಅವರು ಕೂಡ ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು ಟ್ವಿಟ್ಟರ್ ನಲ್ಲಿ ಪೋಸ್ಟ್ ಒಂದನ್ನು ಶೇರ್ ಮಾಡಿದ್ದಾರೆ.
ಮಹಾರಾಷ್ಟ್ರದ MES ಕಾರ್ಯಕರ್ತರ ವಿರುದ್ಧ ನವರಸ ನಾಯಕ ಜಗ್ಗೇಶ್ ಅವರು ಆಕ್ರೋಶ ವ್ಯಕ್ತಪಡಿಸಿದ ಬೆನ್ನಲ್ಲೇ ಟ್ವಿಟ್ಟರ್ ನಲ್ಲಿ ಪೋಸ್ಟ್ ಹಾಕಿದ್ದಾರೆ.
ಈ ಕೃತ್ಯ ಕೈಗೊಂಡವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹಾಗೂ ಗೃಹಮಂತ್ರಿ ಆರಗ ಜ್ಞಾನೇಂದ್ರ ಅವರನ್ನು ಒತ್ತಾಯಿಸಿದ್ದಾರೆ ಬಿಜೆಪಿ ಮುಖಂಡರು ಆಗಿರುವ ಜಗ್ಗೇಶ್ ಅವರು ತಮ್ಮ ಸೋಶಿಯಲ್ ಮೀಡಿಯಾ ಮೂಲಕ ಕನ್ನಡ ಬಾವುಟವನ್ನು ಸುಟ್ಟುಹಾಕಿದ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಬರೆದಿದ್ದಾರೆ.
ಕನ್ನಡ ಬಾವುಟ ಅಪಮಾನಿಸಿದ ಅವರ ಮೇಲೆ ಕಾನೂನು ಕ್ರಮಕ್ಕೆ ಒತ್ತಾಯ ಹಾಗೂ ಕನ್ನಡಪರ ವಿಷಯಕ್ಕೆ ಹೋರಾಟ ಮಾಡಿದ ಕನ್ನಡ ಕನ್ನಡ ಸೈನಿಕರನ್ನು ದಯಮಾಡಿ ಬಿಡುಗಡೆಗೊಳಿಸಿ ಎಂದು ಮುಖ್ಯಮಂತ್ರಿ ಹಾಗೂ ಗೃಹ ಮಂತ್ರಿ ಅವರಿಗೆ ಮಾಡಿದ್ದಾರೆ.
ಕರ್ನಾಟಕದಲ್ಲಿ ಕನ್ನಡ ಭಾಷೆ ಸಾರ್ವಭೌಮ ಎಂದು ಬರೆದುಕೊಂಡು ಕನ್ನಡ ಧ್ವಜಕ್ಕೆ ಬೆಂಕಿ ಇಡುತ್ತಿರುವ ಚಿತ್ರವನ್ನು ಜಗ್ಗೇಶ್ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಶೇರ್ ಮಾಡಿದ್ದಾರೆ ಈ ಬಗ್ಗೆ ಅಭಿಮಾನಿಗಳು ಕಾರ್ಯಕರ್ತರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.
ಕನ್ನಡ ಬಾವುಟ ಅಪಮಾನಿಸಿದವರ ಮೇಲೆ ಕಾನೂನು ಕ್ರಮಕ್ಕೆ ಒತ್ತಾಯ…
— ನವರಸನಾಯಕ ಜಗ್ಗೇಶ್ (@Jaggesh2) December 15, 2021
ಹಾಗು ಕನ್ನಡಪರ ಈ ವಿಷಯಕ್ಕೆ ಹೋರಾಟ ಮಾಡಿದ ಕನ್ನಡ ಸೈನಿಕರ ದಯಮಾಡಿ ಬಿಡುಗಡೆಗೊಳಿಸಿ ಮಾನ್ಯ ಮುಖ್ಯ ಮಂತ್ರಿಗಳು @BSBommai ಗೃಹಮಂತ್ರಿಗಳು @JnanendraAraga 🙏🙏
ಕರ್ನಾಟಕದಲ್ಲಿ ಕನ್ನಡ ಭಾಷೆ ಸಾರ್ವಭೌಮ…. pic.twitter.com/wLmbQpdNe9
ಅಂದು ನಡೆದದ್ದು ಏನು?
ಮಹಾರಾಷ್ಟ್ರ ಏಕೀಕರಣ ಸಮಿತಿ ಅಧ್ಯಕ್ಷ ದೀಪಕ ಬೆಳವಣಿಗೆ ಕಪ್ಪುಮಸಿ ಬರೆದಿರುವುದನ್ನು ಖಂಡಿಸಿ ಮಹಾರಾಷ್ಟ್ರದಲ್ಲಿ ಶಿವಸೇನೆ ಕಾರ್ಯಕರ್ತರು ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚುವ ಮೂಲಕ ಪುಂಡತನ ಮೆರೆದಿದ್ದರು. ಶಿವಸೇನಾ ಕಾರ್ಯಕರ್ತರು ಪ್ರತಿಭಟನೆ ಸಮಯದಲ್ಲಿ ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚಿದ್ದು, ಕನ್ನಡಿಗರ ಆಕ್ರೋಶಕ್ಕೆ ಕಾರಣವಾಗಿದೆ. ಕನ್ನಡ ಧ್ವಜಕ್ಕೆ ಬೆಂಕಿ ಹಚ್ಚುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ
ಇದನ್ನೂ ಓದಿ: Kannada Flag:ಮಹಾರಾಷ್ಟ್ರದಲ್ಲಿ ಕನ್ನಡ ಬಾವುಟ ಸುಟ್ಟುಹಾಕಿದ ಶಿವಸೇನೆ ಕಾರ್ಯಕರ್ತರು