ದಾವಣಗೆರೆ: (ಡಿ.17) Food Poison: ವಿಷ ಆಹಾರ ಸೇವಿಸಿ 40ಕ್ಕೂ ಹೆಚ್ಚು ವಿದ್ಯಾರ್ಥಿನಿಯರು ಅಸ್ವಸ್ಥಗೊಂಡ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ಪಟ್ಟಣದಲ್ಲಿ ನಡೆದಿದೆ.
ಅಲ್ಪಸಂಖ್ಯಾತರ ಮೊರಾರ್ಜಿ ಬಾಲಕಿಯರ ವಿದ್ಯಾರ್ಥಿ ನಿಲಯದಲ್ಲಿ ಇಂದು ಬೆಳಗ್ಗೆ ವಿಷಯ ಆಹಾರ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥ ಗೊಂಡು ಆಸ್ಪತ್ರೆಗೆ ದಾಖಲಿಸಲಾಗಿದೆ.

ವಿದ್ಯಾರ್ಥಿ ನಿಲಯದಲ್ಲಿ ಒಟ್ಟು 107 ಬಾಲಕಿಯರಿದ್ದು, ನಲವತ್ತಕ್ಕೂ ಹೆಚ್ಚು ಮಕ್ಕಳು ಹೊಟ್ಟೆ ನೋವಿನಿಂದ ಬಳಲುತ್ತಿದ್ದರೆ. ಇಂದು ಬೆಳಗ್ಗೆ ಚಪಾತಿ ಬೀಟ್ರೂಟ್ ಪಲ್ಯ ಸೇವನೆ ಮಾಡಿದ್ದರು ಎನ್ನಲಾಗಿದೆ.
ಬೆಳಗ್ಗೆ 9 ಗಂಟೆಗೆ ಉಪಹಾರ ಅವಲಕ್ಕಿ ಸೇವಿಸಿದ್ದು ಹತ್ತು ಗಂಟೆಯ ವೇಳೆ ಇಬ್ಬರಲ್ಲಿ ಹೊಟ್ಟೆ ನೋವು ಕಾಣಿಸಿಕೊಂಡಿದೆ. ನಂತರ ಒಬ್ಬೊಬ್ಬರಾಗಿ ಹೊಟ್ಟೆನೋವಿನಿಂದ ಅಸ್ವಸ್ಥರಾಗಿದ್ದಾರೆ.
ಕೂಡಲೇ ಸಾರ್ವಜನಿಕರ ಸಹಾಯದಿಂದ ಶಿಕ್ಷಕರು ವಿದ್ಯಾರ್ಥಿಗಳನ್ನು ಆಂಬುಲೆನ್ಸ್ ಮೂಲಕ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಇದನ್ನೂ ಓದಿ: Marriage Age:ಮಹಿಳೆಯರ ಮದುವೆ ವಯಸ್ಸು18 ರಿಂದ 21 ಕ್ಕೆ ಏರಿಸಲು ಪ್ರಸ್ತಾವನೆ
ಅಧಿಕಾರಿಗಳ ಭೇಟಿ:
ಮಕ್ಕಳು ಅಸ್ವಸ್ಥಗೊಂಡು ಇರುವುದನ್ನು ಕಂಡು ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ನೀರಜ್ ಹಾಗೂ ತಾಲೂಕು ಆರೋಗ್ಯಾಧಿಕಾರಿ ಡಾ ನಾಗರಾಜ್ ಮಕ್ಕಳ ತಜ್ಞ ಡಾ ಜಯಕುಮಾರ್ ಅವರು ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡುತ್ತಿದ್ದಾರೆ.
ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ಶಶಿಧರಯ್ಯ, ಪ.ಪಂ ಅಧ್ಯಕ್ಷ ಸಿದ್ದಪ್ಪ, ಪಟ್ಟಣ ಪಂಚಾಯತ್ ಸದಸ್ಯರು ಹಾಗೂ ಯುವ ಮುಖಂಡರು ಆಸ್ಪತ್ರೆಗೆ ಭೇಟಿ ನೀಡಿ ಮಕ್ಕಳಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ.ಆಹಾರದಲ್ಲಿ ಯಾವ ವ್ಯತ್ಯಾಸವಾಗಿದೆ ಎಂಬುದು ತಿಳಿದುಬಂದಿಲ್ಲ.