ಬೆಂಗಳೂರು: (ಡಿ.26) Night Curfew: ಒಮಿಕ್ರೋನ್ ವೈರಸ್ ಪ್ರಕರಣಗಳು ಗಣನೀಯವಾಗಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನೈಟ್ ಕರ್ಫ್ಯೂ ಜಾರಿ ಮಾಡಲಾಗಿದೆ.
ಡಿ.28ರಿಂದ ನೈಟ್ ಕರ್ಫ್ಯೂ:
ಗ್ರಹ ಮಂತ್ರಿ ಕಚೇರಿ ಕೃಷ್ಣಾದಲ್ಲಿ ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ಅವರು ರಾಜ್ಯದಂತ ಹತ್ತು ದಿನಗಳ ಕಾಲ ಕರ್ಫ್ಯೂ ಜಾರಿ ಗೊಳಿಸಿ ಘೋಷಿಸಿದ್ದಾರೆ.ಡಿ.28ರಿಂದ ಹತ್ತು ದಿನಗಳ ಕಾಲ ರಾತ್ರಿ 10 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ನೈಟ್ ಕರ್ಫ್ಯೂ ಜಾರಿ ಇರಲಿದೆ.

50:50 ನಿಯಮ
ಸಿನಿಮಾ ಥಿಯೇಟರ್ ಗಳಿಗೆ ಸದ್ಯ ನಿಯಮ ಅನ್ವಯವಾಗಿಲ್ಲ ಎಂದು ಹೇಳಿದ್ದಾರೆ. ಜನವರಿ 10ರಿಂದ ಬೂಸ್ಟರ್ ನೀಡಲಾಗುತ್ತದೆ. ರಾಜ್ಯದಂತ ಬೂಸ್ಟರ್ ಡೋಸ್ ನೀಡಲಾಗುತ್ತಿದ್ದು ಆಯಾ ಕ್ಷೇತ್ರದ ಸಚಿವರು ಚಾಲನೆ ನೀಡಲಿದ್ದಾರೆ ಎಂದು ತಿಳಿಸಿದರು. ಮಕ್ಕಳಿಗೆ ಲಸಿಕೆ ನೀಡಲು ಕೇಂದ್ರದಿಂದ ಗೈಡ್ಲೈನ್ಸ್ ಬಂದ ಬಳಿಕ ಮಾಹಿತಿ ನೀಡಲಾಗುತ್ತದೆ ಎಂದು ಹೇಳಿದರು.
ಸಭೆಯಲ್ಲಿ ಮಾತನಾಡಿದ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಅವರು, ಸಾರ್ವಜನಿಕ ಸ್ಥಳಗಳಲ್ಲಿ ರಾತ್ರಿ ಹೊಸವರ್ಷ ಆಚರಿಸುವಂತಿಲ್ಲ ಸಭೆ-ಸಮಾರಂಭಗಳಲ್ಲಿ ಶೇಕಡಾ 50 ರಷ್ಟು ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ.
ಹಗಲಿನಲ್ಲೂ ಬಾರ್ ಪಬ್ ಕ್ಲಬ್ ರೆಸ್ಟೋರೆಂಟ್ಗಳಲ್ಲಿ ಶೇಕಡಾ 50 ರಷ್ಟು ಜನರಿಗೆ ಮಾತ್ರ ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಆಸ್ಪತ್ರೆಗಳಲ್ಲಿ 4000 ಐಸಿಯು ಹಾಸಿಗೆಗಳು ಸಿದ್ಧಪಡಿಸಿ ಕೊಂಡಿದ್ದೇವೆ ಹಾಗೂ 7,500 ಹಾಸಿಗೆಗಳು ಐಸಿಯು ಹಾಸಿಗೆಗಳಿಗಾಗಿ ಮೇಲ್ದರ್ಜೆಗೆ ಏರಿಸಲಾಗುವುದು ಎಂದು ಹೇಳಿದರು.
0 ಸಭೆಯಲ್ಲಿ ಇಂದು ಕಂದಾಯ ಸಚಿವ ಆರ್ ಅಶೋಕ್, ಗೃಹಸಚಿವ ಆರಗ ಜ್ಞಾನೇಂದ್ರ, ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ರವಿಕುಮಾರ್ ತಾಂತ್ರಿಕ ಸಲಹಾ ಸಮಿತಿ ಮುಖ್ಯಸ್ಥ ಡಾ. ಎಂ ಕೆ ಸುದರ್ಶನ್,ಗೃಹ ಕಾರ್ಯದರ್ಶಿ ರಜನೀಶ್ ಗೋಯಲ್, ಸಿಎಂ ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಪ್ರಸಾದ್, ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್, ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರು ಸೇರಿದಂತೆ ಅಧಿಕಾರಿಗಳು ಭಾಗಿಯಾಗಿದ್ದರು.