ಹೈದರಾಬಾದ್: (ಡಿ.29) Humble Politician : ರಾಜಕೀಯದಲ್ಲಿ ಸಾಮಾನ್ಯವಾಗಿ ಪಕ್ಷ ಅಧಿಕಾರಕ್ಕೆ ಬಂದರೆ ಮದ್ಯ ನಿಷೇಧಿಸುವುದಾಗಿ ಪ್ರಚಾರ ಹೊರಡಿಸುತ್ತಾರೆ. ಆದರೆ ಇಲ್ಲೊಂದು ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ಬಂದರೆ 75 ರೂಪಾಯಿಗೆ ಮಧ್ಯ ನೀಡಲಾಗುವುದು ಎಂದು ಹೇಳಿಕೆ ನೀಡಿದ್ದಾರೆ.
ಆಂಧ್ರಪ್ರದೇಶದ ಬಿಜೆಪಿ ಅಧ್ಯಕ್ಷ ಸೋಮು ವೀರರಾಜು ಅವರು ಮುಂಬರುವ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಬಿಜೆಪಿ ಪಕ್ಷಕ್ಕೆ ಅಧಿಕಾರ ನೀಡಿದರೆ 75 ರೂಪಾಯಿಗೆ ಮಧ್ಯ ನೀಡಲಾಗುವುದು ಎಂದು ಹೇಳಿಕೆ ನೀಡಿದ್ದಾರೆ.
ವಿಜಯವಾಡದಲ್ಲಿ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ನೀವು ಬಿಜೆಪಿಗೆ ಅಧಿಕಾರ ನೀಡಿದರೆ ನಿಮಗೆ 75 ರೂಪಾಯಿಗೆ ಮದ್ಯ ಮಾರಾಟ ಮಾಡಲಾಗುತ್ತದೆ, ಒಂದು ವೇಳೆ ಅಧಿಕ ಆದಾಯ ಬಂದಲ್ಲಿ ರೂಪಾಯಿಗೆ ಮಧ್ಯ ನೀಡುವುದಾಗಿ ಆಶ್ವಾಸನೆ ನೀಡಿದ್ದಾರೆ.

ರಾಜ್ಯದಲ್ಲಿ ಕಡಿಮೆ ಗುಣಮಟ್ಟದ ಮಧ್ಯವನ್ನು ಅಧಿಕ ಬೆಲೆಗೆ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ. ರಾಜ್ಯದಲ್ಲಿ ಕಡಿಮೆ ಬೆಲೆಗೆ ಮದ್ಯ ಸಿಗಬೇಕಾದರೆ 2024ರ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಜನರು ಬಿಜೆಪಿ ಅಧಿಕಾರ ನೀಡಬೇಕು ಎಂದು ಹೇಳಿದ್ದಾರೆ.
ಇದನ್ನೂ ಓದಿ: Karnataka Band: ಸೂರ್ಯ ಈಕಡೆ ಬರಲಿ, ಚಂದ್ರ ಆ ಕಡೆ ಹೋಗಲಿ ಬಂದ್ ಮಾಡುವುದು ಶತಸಿದ್ಧ: ವಾಟಾಳ್ ನಾಗರಾಜ್
ಆಂಧ್ರಪ್ರದೇಶದಲ್ಲಿ ಕುಟುಂಬ ರಾಜಕಾರಣ ನಡೆಯುತ್ತಿದೆ ಈ ನಿಟ್ಟಿನಲ್ಲಿ ಜನರು ಬಿಜೆಪಿಗೆ ಮತ ನೀಡಬೇಕು ಎಂದು ಹೇಳಿಕೆ ನೀಡಿದ್ದಾರೆ.