ಬೆಂಗಳೂರು: (ಡಿ.30) Karnataka Band: ಎಂಇಎಸ್ ಸಂಘಟನೆಯನ್ನು ನಿಷೇಧ ಮಾಡಬೇಕು ಎಂದು ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಕರ್ನಾಟಕ ಬಂದ್ ಗೆ ಕರೆ ನೀಡಿದ್ದರು. ಆದರೆ ಇದೀಗ ವಾಟಾಳ್ ನಾಗರಾಜ್ ಅವರು ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ.
ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಕರ್ನಾಟಕ ಬಂದ್ ಹಿಂಪಡೆಯಬೇಕು ಎಂದು ಹಲವು ರಾಜಕೀಯ ನಾಯಕರು ಮನವಿ ಮಾಡಿದ್ದರೂ, ಹಿಂದೆ ಸರಿಯಾದ ವಾಟಾಳ್ ನಾಗರಾಜ್ ಅವರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಮನವಿಗೆ ಸ್ಪಂದಿಸಿದ್ದಾರೆ.
ಸಿಎಂ ಬಸವರಾಜ್ ಬೊಮ್ಮಾಯಿ ಭರವಸೆ
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಕರ್ನಾಟಕ ಬಂದ್ ಮಾಡುವುದರಿಂದ ಜನರಿಗೆ ತೊಂದರೆಯಾಗುತ್ತದೆ ಕರ್ನಾಟಕ ಬಂದ್ ಹಿಂಪಡೆಯಬೇಕು ಎಂದು ಮನವಿ ಮಾಡಿದರು ಇತ್ತೀಚಿಗೆ ತಮ್ಮ ಕಚೇರಿಗೆ ಭೇಟಿ ನೀಡುವಂತೆ ಮುಖ್ಯಮಂತ್ರಿ ಅವರು ಸೂಚನೆ ನೀಡಿದ್ದರು.
ಈ ಹಿನ್ನೆಲೆಯಲ್ಲಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿರುವ ವಾಟಾಳ್ ನಾಗರಾಜ್ ಅವರು ಕರ್ನಾಟಕ ಬಂದ್ ಹಿಂಪಡೆಯುವುದಾಗಿ ಘೋಷಣೆ ಮಾಡಿದ್ದಾರೆ.
ಸಿಎಂ ಭೇಟಿ ಬಳಿಕ ಮಾತನಾಡಿರುವ ವಾಟಾಳ್ ನಾಗರಾಜ್ ಅವರು, ಕರ್ನಾಟಕ ಬಂದ್ ಮುಂದೂಡಲು ನಿರ್ಧಾರ ಮಾಡಲಾಗಿದೆ. ಎಂಇಎಸ್ ಸಂಘಟನೆಯ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಭರವಸೆ ನೀಡಿದ್ದಾರೆ ಈ ಹಿನ್ನೆಲೆಯಲ್ಲಿ ಬಂದ್ ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.

ನಾವು ಮುಖ್ಯಮಂತ್ರಿಗೆ ಗಡುವು ಕೊಟ್ಟಿಲ್ಲ, ನೀವು ಎಂಇಎಸ್ ಸಂಘಟನೆ ನಿಷೇಧ ಮಾಡಬೇಕು ಅಂತ ಹೇಳಿದ್ದೇವೆ ನನಗೆ ಈ ಸಲ ಬಂದು ಹಿಂಪಡೆಯಲು ಇಷ್ಟವಿರಲಿಲ್ಲ. ನಾಳೆ ಬಂದು ಮಾಡುವುದಿಲ್ಲ ಆದರೆ ಜನವನ್ನು ಇಪ್ಪತ್ತೆರಡಕ್ಕೆ ಕರ್ನಾಟಕ ಬಂದ್ ಮಾಡುತ್ತೇವೆ. ಮುಖ್ಯಮಂತ್ರಿಯವರು ಎರಡು ಬಾರಿ ಮನವಿ ಮಾಡಿ ನಮ್ಮನ್ನು ಕರೆಸಿ ಕಾನೂನು ಪ್ರಕಾರ ಎಂಇಎಸ್ ನಿಷೇಧಕ್ಕೆ ಏನೆಲ್ಲಾ ಮಾಡಬೇಕೋ ಅದನ್ನು ಮಾಡ್ತೀನಿ.
ಬಂದ್ ಕರೆ ಹಿಂದೆ ಪಡೀರಿ ಅಂತ ಮುಖ್ಯಮಂತ್ರಿ ಹೇಳಿದರು. ಅವರ ಮಾತಿಗೆ ಗೌರವ ಕೊಟ್ಟು, ನಾವು ಒಂದು ತೀರ್ಮಾನ ತೆಗೆದುಕೊಂಡೆವು. ನಾಳೆ ಬಂದ್ ಮಾಡಿದ್ರೆ ಹೊಸವರ್ಷಾಚರಣೆಗೆ ತೊಂದರೆ ಆಗುತ್ತೆ ಅಂತ ಹೇಳಿದ್ರು. ಚಲನಚಿತ್ರ ವಾಣಿಜ್ಯ ಮಂಡಳಿಯವರು ಮೂರು ಚಿತ್ರ ಬಿಡುಗಡೆ ಆಗುತ್ತೆ, ನಮ್ಮ ಬೆಂಬಲ ಇಲ್ಲ ಎಂದು ಹೇಳಿದರು ಎಂದಿದ್ದಾರೆ.
ನಾವು ನಿಮ್ಮ ಜೊತೆ ಇದ್ದೇವೆ ಸಿಎಂ
ಬಸವರಾಜ್ ಬೊಮ್ಮಾಯಿ ಅವರು ನಾವು ನಿಮ್ಮ ಜೊತೆ ಇದ್ದೇವೆ ಎಂದು ಪ್ರೀತಿ ಮಾತು ಅಭಿಮಾನದಿಂದ ಹೇಳಿದ್ದಾರೆ. ಇಂದು ಬೆಳಗ್ಗೆಯಿಂದಲೂ ನಮ್ಮ ಒಕ್ಕೂಟದವರು ಬಂದು ಬೇಡ ಎಂದು ಒತ್ತಡ ತಂದರು ಅವರ ಮಾತನ್ನು ನಾನು ಬೆಲೆ ಕೊಡಬೇಕಾಗಿತ್ತು ಹಾಗೆಯೇ ಮುಖ್ಯಮಂತ್ರಿಯವರು ಬೆಲೆ ಕೊಡಬೇಕಾಯಿತು. ಹೀಗಾಗಿ ನಾಳೆ ನಡೆಯಬೇಕಾಗಿದ್ದ ಬಂದ ನಡೆಯುವುದಿಲ್ಲ ಮುಖ್ಯಮಂತ್ರಿಗಳ ಮಾತಿಗೆ ಬೆಲೆಕೊಟ್ಟು ಬಂದು ಹಿಂದೆ ಪಡೆದಿದ್ದೇನೆ ಎಂದು ಹೇಳಿದ್ದಾರೆ.
ಸಿಎಂ ಹಾಗೂ ವಾಟಾಳ್ ನಾಗರಾಜ್ ಮಾತುಕತೆ:
ಕರ್ನಾಟಕ ಬಂದ ಕೈಬಿಡುವಂತೆ ವಾಟಾಳ್ ನಾಗರಾಜ್ ಅವರಿಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇಂದು ಮನವಿ ಮಾಡಿಕೊಂಡಿದ್ದರು. ಅದೇ ರೀತಿ ವಾಟಾಳ್ ನಾಗರಾಜ್ ಅವರನ್ನು ಕಚೇರಿಗೆ ಕರೆಯಿಸಿಕೊಂಡು ಮಾತನಾಡಿದ್ದಾರೆ. ಯಾವುದೇ ಕಂಡೀಶನ್ ಗಳು ಬೇಡ ಕನ್ನಡಕ್ಕೆ ಅನ್ಯಾಯ ಆಗುವಂತೆ ಸರ್ಕಾರ ನಡೆದುಕೊಂಡಿಲ್ಲ.
ದುಷ್ಕೃತ್ಯ ಎಸಗಿದ ಕಿಡಿಗೇಡಿಗಳನ್ನು ನಾವು ಬಂಧಿಸಿದ್ದೇವೆ ಕನ್ನಡ ಸಂಘಟನೆಗಳ ಅಹವಾಲು ಆಲಿಸಲು ಸರ್ಕಾರ ಬದ್ಧವಾಗಿದೆ. ಬಂದ್ ಮಾಡಿ ರಾಜ್ಯದ ಜನತೆಗೆ ತೊಂದರೆ ಆಗುವುದು ಬೇಡ ಎಂದು ಸಿಎಂ ಅವರು ಮಾತುಕತೆ ನಡೆಸಿದ್ದಾರೆ.
ಕನ್ನಡದ ರಕ್ಷಣೆಗಾಗಿ ನಮ್ಮ ಸರ್ಕಾರ ನಿಮ್ಮ ಜೊತೆ ಗಟ್ಟಿಯಾಗಿ ನಿಲ್ಲುತ್ತದೆ ಎಂದು ಹೇಳಿದ್ದಾರೆ ನನ್ನ ಮನವಿಗೆ ಸ್ಪಂದಿಸಿ, ಬಂದರೆ ಹಿಂಪಡೆದಿರುವ ನಿರ್ಧಾರವನ್ನು ನಾನು ಗೌರವಿಸುತ್ತೇನೆ. ಎಂಇ ಎಸ್ ನಿಷೇಧದ ಬಗ್ಗೆ ಕಾನೂನು ಪ್ರಕಾರ ಪರಿಶೀಲಿಸುತ್ತೇವೆ ಎಂದು ಹೇಳಿದ್ದಾರೆ.
ಬಂದ್ ವಾಪಸ ಪಡೆದಿಲ್ಲ: ಬದಲಿಗೆ ಮುಂದೂಡಿದೇನೆ:
ಕರ್ನಾಟಕ ಬಂದ್ ಮಾಡುವುದು ಹಿಂಪಡೆದಿಲ್ಲ.ಮುಂದೆ ಯಾವಾಗ ಕರ್ನಾಟಕ ಬಂದ್ ಮಾಡಬೇಕು ಎಂಬುದನ್ನು ತಿಳಿಸುತ್ತೇವೆ. ಇನ್ನೆರಡು ದಿನಗಳಲ್ಲಿ ಸಭೆ ಕರೆದು ಹೋರಾಟ ಹೇಗೆ ಮಾಡಬೇಕು ಎನ್ನುವ ತೀರ್ಮಾನವನ್ನು ಪ್ರಕಟಿಸುತ್ತೇನೆ ಎಂದು ಕನ್ನಡಪರ ಸಂಘಟನೆಯ ನಾಯಕ ಕೆ.ಆರ್ ಕುಮಾರ್ ಅವರು ಹೇಳಿದ್ದಾರೆ.