Secular TV
Friday, January 27, 2023
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle
No Result
View All Result
Secular TV
No Result
View All Result

Job Fair:’ಉದ್ಯಮಿಯಾಗು, ಉದ್ಯೋಗ ನೀಡು’ ಕೈಗಾರಿಕಾ ಅದಾಲತ್ ಕಾರ್ಯಕ್ರಮ

Secular TVbySecular TV
A A
Reading Time: 1 min read
Job Fair:’ಉದ್ಯಮಿಯಾಗು, ಉದ್ಯೋಗ ನೀಡು’ ಕೈಗಾರಿಕಾ ಅದಾಲತ್  ಕಾರ್ಯಕ್ರಮ
0
SHARES
Share to WhatsappShare on FacebookShare on Twitter

ಕಲಬುರಗಿ: (ಜ.2): Job Fair: ವಿದ್ಯಾವಂತ ಯುವಕರಿಗೆ ಸ್ಥಳದಲ್ಲೇ ಉದ್ಯೋಗ ಹಾಗೂ ಉದ್ಯಮ ಆರಂಭಿಸುವವರಿಗೆ ಸೂಕ್ತ ಮಾರ್ಗದರ್ಶನ ನೀಡುವ ಬಹುನಿರೀಕ್ಷಿತ ಉದ್ಯಮಿಯಾಗು ಉದ್ಯೋಗ ನೀಡು ಹಾಗೂ ಕೈಗಾರಿಕಾ ಅದಾಲತ್ ಕಾರ್ಯಕ್ರಮ ನಾಳೆ ಕಲಬುರಗಿಯಲ್ಲಿ ನಡೆಯಲಿದೆ.

ಕಲ್ಯಾಣ ಕರ್ನಾಟಕ ಭಾಗದ ಕೇಂದ್ರಬಿಂದು ಕಲಬುರಗಿಯಲ್ಲಿ ನಾಳೆ ಗುಲ್ಬರ್ಗ ವಿವಿಯ ಡಾ.ಬಿ.ಆರ್.ಅಂಬೇಡ್ಕರ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿಯವರು ಚಾಲನೆ ನೀಡುವರು.

Industrialist Minister Murugesh Nirani

ವೇದಿಕೆಗೆ ಪುನೀತ್ ರಾಜ್‍ಕುಮಾರ್ ಹೆಸರು

ಕಾರ್ಯಕ್ರಮ ನಡೆಯುವ ವೇದಿಕೆಗೆ ಕನ್ನಡದ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅವರ ಹೆಸರನ್ನು ನಾಮಕರಣ ಮಾಡಲಾಗಿದೆ. ಪುನೀತ್ ರಾಜ್‍ಕುಮಾರ್ ಕೇವಲ ಚಿತ್ರನಟರಂಗಕ್ಕೆ ತಮ್ಮನ್ನು ಗುರುತಿಸಿಕೊಳ್ಳದೆ ಅವರೊಬ್ಬ ಯಶಸ್ವಿ ಉದ್ಯಮಿಯೂ ಹೌದು. ತಮ್ಮ ಸಂಸ್ಥೆಗಳಲ್ಲಿ ನೂರಾರು ಜನರಿಗೆ ಉದ್ಯೋಗ ನೀಡುವ ಮೂಲಕ ಉದ್ಯೋಗದಾತರೂ ಆಗಿದ್ದರು.

ಈಗಾಗಲೇ ಕರ್ನಾಟಕ ಸರ್ಕಾರ ಪುನೀತ್ ರಾಜ್‍ಕುಮಾರ್ ಸ್ಮರಣಾರ್ಥವಾಗಿ ಅವರಿಗೆ ಪ್ರತಿಶಿಷ್ಟ ಕರ್ನಾಟಕ ರತ್ನ ಪ್ರಶಸ್ತಿಯನ್ನು ಸಹ ಘೋಷಿಸಿದೆ.

Murgesh Nirani

ವಿವಿದ ಜಿಲ್ಲೆಯಿಂದ ಭಾಗಿ

ಯುವಕರನ್ನು ಉದ್ಯಮದತ್ತ ಆಕರ್ಷಿಸಲು ಮುಂದಾಗಿರುವ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿಯವರು ಮುಂದೆ ನಡೆಯಲಿರುವ ಉದ್ಯಮಿಯಾಗು ಉದ್ಯೋಗ ನೀಡು ಕಾರ್ಯಕ್ರಮದ ವೇದಿಕೆಗೆ ಅವರ ಹೆಸರನ್ನು ನಾಮಕರಣ ಮಾಡಲು ತೀರ್ಮಾನಿಸಿದ್ದಾರೆ.

ಕಲಬುರಗಿ ಜಿಲ್ಲೆಯ ಜನತೆಯ ಜೊತೆ ಪುನೀತ್ ರಾಜ್‍ಕುಮಾರ್ ಅವಿನಾಭಾವ ಸಂಬಂಧ ಹೊಂದಿದ್ದರು. ಅನೇಕ ಸಂದರ್ಭಗಳಲ್ಲಿ ಇಲ್ಲಿಗೆ ಬಂದಾಗ ಪ್ರವಾಸಿ ತಾಣಗಳು ಮತ್ತು ಧಾರ್ಮಿಕ ಕೇಂದ್ರಗಳಿಗೆ ಭೇಟಿ ನೀಡುತ್ತಿದ್ದರು. ಅವರ ಹೆಸರನ್ನು ಅಜಾರಾಮರಗೊಳಿಸಲು ಮುಂದಾಗಿದ್ದು, ನಾಳೆ ನಡೆಯುವ ಕಾರ್ಯಕ್ರಮದ ವೇದಿಕೆಗೆ ಅವರ ಹೆಸರನ್ನೇ ನಾಮಕರಣ ಮಾಡಿರುವುದು ವಿಶೇಷವಾಗಿದೆ.

ಬೆಳಗ್ಗೆ 10 ಗಂಟೆಗೆ ಆರಂಭವಾಗಲಿರುವ ಈ ವಿಶೇಷ ಕಾರ್ಯಕ್ರಮಕ್ಕೆ ಈಗಾಗಲೇ ಎಲ್ಲ ಸಿದ್ದತೆಗಳನ್ನು ಕೈಗೊಳ್ಳಲಾಗಿದ್ದು, ಕಲ್ಯಾಣ ಕರ್ನಾಟಕದ ಯಾದಗಿರಿ, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ ಮತ್ತು ಬೀದರ್ ಜಿಲ್ಲೆಯ ಸಾವಿರಾರು ವಿದ್ಯಾರ್ಥಿಗಳು ಮತ್ತು ಯುವ ಉದ್ಯಮಿಗಳು ಭಾಗವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಭಾಗವಹಿಸಲಿರುವ ಹೊರ ಜಿಲ್ಲೆಯ ವಿದ್ಯಾರ್ಥಿಗಳಿಗೆ ಸೂಕ್ತ ಸಾರಿಗೆ ವ್ಯವಸ್ಥೆ ಕಲ್ಪಿಸಲಾಗಿದೆ. ಕಾರ್ಯಾಗಾರಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಬಂದಲ್ಲಿ ಮುಂಜಾಗ್ರತವಾಗಿ ಭವನದ ಹೊರಗಡೆಯೂ ವೀಕ್ಷಣೆಗೆ ಸ್ಕ್ರೀನ್ ಅಳವಡಿಸಲಾಗುತ್ತಿದೆ.

ಈಗಾಗಲೇ ಕಳೆದ ನವೆಂಬರ್‍ನಲ್ಲಿ ಬೆಂಗಳೂರಿನ ಅರಮನೆಯಲ್ಲಿ ಮೊದಲ ಉದ್ಯಮಿಯಾಗು ಉದ್ಯೋಗ ನೀಡು ಮತ್ತು ಕೈಗಾರಿಕಾ ಅದಾಲತ್ ನಡೆಸಲಾಗಿತ್ತು.

ಜ.18 ರಿಂದ ವಿವಿಧ ಜಿಲ್ಲೆಗಳಲ್ಲಿ ಕಾರ್ಯಕ್ರಮ:

ಮೊದಲ ಬಾರಿಗೆ ನಡೆಸಿದ ಈ ಕಾರ್ಯಕ್ರಮಕ್ಕೆ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ ಸೇರಿದಂತೆ ಸುತ್ತಮುತ್ತಲ ಜಿಲ್ಲೆಯ ಸಾವಿರಾರು ಐಟಿಐ, ಎಂಜಿನಿಯರಿಂಗ್, ಎಂಬಿಎ, ಬಿಬಿಎಂ ಸೇರಿದಂತೆ ಮತ್ತಿತರ ವೃತ್ತಿಪರ ಕೋರ್ಸ್‍ಗಳನ್ನು ಮುಗಿಸಿದ ವಿದ್ಯಾರ್ಥಿಗಳು ಭಾಗವಹಿಸಿ ತಮ್ಮ ಅರ್ಹತೆಗೆ ಅನುಗುಣವಾಗಿ ಉದ್ಯೋಗ ಪಡೆದಿದ್ದರು.

ಜೊತೆಗೆ ಹೊಸದಾಗಿ ಉದ್ಯಮ ಆರಂಭಿಸುವವರಿಗೆ ಯಶಸ್ವಿ ಉದ್ಯಮಿಗಳಿಂದ ಮಾರ್ಗದರ್ಶನ, ಸಲಹೆ ನೀಡಲಾಗಿತ್ತು. ಇದು ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದ್ದರಿಂದ ಇದೀಗ ಕಲಬುರಗಿಯಲ್ಲಿ 2ನೇ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ಈ ಮೂಲಕ ಸರ್ಕಾರವೇ ಉದ್ಯಮಿಗಳ ಮನೆ ಬಾಗಿಲಿಗೆ ಹೋಗಿ ಉದ್ಯಮದಾರರ ಸಮಸ್ಯೆ ಆಲಿಸಿ, ಸಮಸ್ಯೆ ಇತ್ಯರ್ಥ ಪಡಿಸುವ ಪ್ರಾಮಾಣಿಕ ಪ್ರಯತ್ನ ಮಾಡಲಿದೆ.

ಇದೇ 18ರಂದು ಸಾಂಸ್ಕøತಿಕ ನಗರಿ ಮೈಸೂರು ಹಾಗೂ 28ರಂದು ಕುಂದಾನಗರ, ಬೆಳಗಾವಿ ಹಾಗೂ ಫೆಬ್ರವರಿಯಲ್ಲಿ ದಕ್ಷಿಣ ಕನ್ನಡ ಮತ್ತು ತುಮಕೂರಿನಲ್ಲಿ ಆಯೋಜಿಸಲಾಗಿದೆ.

ಇದನ್ನೂ ಓದಿ:Mekedatu project:ಜಿಲ್ಲೆಗೆ ಬಂದಮೇಲೆ ನನ್ನ ಸ್ಥಾನ ಗಟ್ಟಿಯಾಗಿದ್ದು: ಸಿದ್ದರಾಮಯ್ಯ

ಸಚಿವ ಮುರುಗೇಶ್ ನಿರಾಣಿಯವರ ಪ್ರವಾಸದ ವಿವರ

ಎರಡು ದಿನಗಳ ಕಾಲ ಕಲಬುರಗಿ ಪ್ರವಾಸ ನಡೆಸಲಿರುವ ಜಿಲ್ಲಾ ನಿಯೋಜಿತ ಉಸ್ತುವಾರಿ ಸಚಿವರಾಗಿರುವ ಮುರುಗೇಶ್ ನಿರಾಣಿಯವರು ಸೋಮವಾರ ಸಂಜೆ 6 ಗಂಟೆಗೆ 36ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಅಂಗವಾಗಿ ಏರ್ಪಡಿಸಿರುವ ಸಾಧಕರ ಸನ್ಮಾನ ಕಾರ್ಯಕ್ರಮದಲ್ಲಿ ಭಾಗಿಯಾಗುವರು. ಕಾರ್ಯಕ್ರಮವು ಪೂಜ್ಯ ಶ್ರೀ ಬಸವರಾಜಪ್ಪ ಅಪ್ಪ ಸ್ಮಾರಕ
ಭವನದಲ್ಲಿ ನಡೆಯಲಿದೆ.

ಮಂಗಳವಾರ ಬೆಳಗ್ಗೆ 11 ಗಂಟೆಗೆ 36ನೇ ರಾಜ್ಯ ಪತ್ರಕರ್ತರ ಸಮ್ಮೇಳನದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗುವರು.
11.45ಕ್ಕೆ ಕಲಬುರಗಿಯ ಡಿಸಿಸಿ ಬ್ಯಾಂಕ್ ಆವರಣದಲ್ಲಿ ಹಮ್ಮಿಕೊಂಡಿರುವ ಡಿಸಿಸಿ ಬ್ಯಾಂಕ್ ಅಡಿಗಲ್ಲು ಸಮಾರಂಭ, ಎಟಿಎಂ ವ್ಯಾನ್ ಉದ್ಘಾಟನೆ ಮತ್ತು 300 ಸಹಕಾರ ಸಂಘಗಳಿಗೆ ಎಟಿಎಂ ಯಂತ್ರಗಳ ವಿತರಣಾ ಕಾರ್ಯಕ್ರಮಗಳನ್ನು ನಡೆಸಲಾಗುವುದು.
ಮಧ್ಯಾಹ್ನ 2 ಗಂಟೆಗೆ ಅಳಂದ ವಿಧಾನಸಭಾ ಕ್ಷೇತ್ರದಲ್ಲಿ ನೂತನವಾಗಿ ನಿರ್ಮೀಸಿರುವ ತಾಲ್ಲೂಕು ಆಡಳಿತ ಭವನ ಕಟ್ಟಡ ಉದ್ಘಾಟನೆಯ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ.

RECOMMENDED

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
  • 409 Followers
  • 23.7k Followers

MOST VIEWED

  • Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    Relationship: ನಿಮ್ಮ ಹುಡುಗ ವರ್ಜಿನ್ ಅನ್ನೋದನ್ನ ಹೀಗೆ ಮೊದಲ ರಾತ್ರಿಯಲ್ಲಿಯೇ ತಿಳಿದುಕೊಳ್ಳಿ !

    0 shares
    Share 0 Tweet 0
  • Hunsur Crime : ಸೊಸೆಯನ್ನೇ ಮಂಚಕ್ಕೆ ಕರೆದ ನೀಚ ಮಾವ..!

    0 shares
    Share 0 Tweet 0
  • Lifestyle: ಸಂಗಾತಿ ಜೊತೆ ಸುಂದರ ರಾತ್ರಿ ಕಳೆಯಬೇಕಾ? ಈ ಟಿಪ್ಸ್ ಫಾಲೋ ಮಾಡಿ

    0 shares
    Share 0 Tweet 0
  • Seetharam: ಕಾಂಗ್ರೆಸ್ ಪಕ್ಷಕ್ಕೆ ಮತ್ತೊಂದು ಆಘಾತ ; ‘ಕೈ’ಗೆ ಸೀತಾರಾಮ್ ಗುಡ್ ಬೈ..?

    0 shares
    Share 0 Tweet 0
  • Break-Up: ಪುರುಷರೇ ಎಚ್ಚರ ಎಚ್ಚರ; ಈ ಕಾರಣಗಳಿಂದಲೇ ದೂರವಾಗ್ತಾಳೆ ಪತ್ನಿ

    0 shares
    Share 0 Tweet 0

Related Posts

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ
Entertainment

ಸೆಟ್ಟೇರಿತು ಕೋಮಲ್ ನಟನೆಯ ‘ರೋಲೆಕ್ಸ್ ಕೋಮಲ್’ ಸಿನಿಮಾ- ನಾಳೆಯಿಂದ ಚಿತ್ರೀಕರಣ ಆರಂಭ

January 27, 2023
Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ
Entertainment

Kranti Release: ಸಾಮಾಜಿಕ ಕಳಕಳಿ ಹೊತ್ತ ‘ಕ್ರಾಂತಿ’ ಅದ್ಧೂರಿ ಬಿಡುಗಡೆ

January 27, 2023
PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!
Entertainment

PHOTO GALLERY: ಕ್ರಿಕೆಟಿಗ ಕೆಎಲ್ ರಾಹುಲ್, ಅಥಿಯಾ ಶೆಟ್ಟಿ  ಬ್ಯೂಟಿಫುಲ್ ಮದುವೆ ಫೋಟೋಗಳು…!

January 27, 2023
ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ
Karnataka

ವೈದ್ಯಾಧಿಕಾರಿ ಡಾ. ಮಮತಾ ಅವರಿಗೆ ವರ್ಷದ ವ್ಯಕ್ತಿ ಪ್ರಶಸ್ತಿ

January 27, 2023
ಭಾರತದಲ್ಲಿ ಶೇ.6ರಷ್ಟು ಜನ ವಿಶೇಷ ಚೇತನರು : ದಿವ್ಯಾ ಎಸ್ ಹೊಸೂರ್
Bangalore

ಭಾರತದಲ್ಲಿ ಶೇ.6ರಷ್ಟು ಜನ ವಿಶೇಷ ಚೇತನರು : ದಿವ್ಯಾ ಎಸ್ ಹೊಸೂರ್

January 26, 2023
Darshan Thogudeepa: ದರ್ಶನ್ ಮೇಲೆ ಶೂ ಎಸೆದ್ರು ನುಗುತ್ತಲೇ ‘ತಪ್ಪೇನು ಇಲ್ಲ ಚಿನ್ನ..ಪರವಾಗಿಲ್ಲ ಬಿಡ್ರೊ’ ಎಂದ ಯಜಮಾನ..! : ದಾಸನ ಮಾತಿಗೆ ತಲೆಬಾಗಿದ ಫ್ಯಾನ್ಸ್..!
Entertainment

Darshan Thogudeepa: ದರ್ಶನ್ ಮೇಲೆ ಶೂ ಎಸೆದ್ರು ನುಗುತ್ತಲೇ ‘ತಪ್ಪೇನು ಇಲ್ಲ ಚಿನ್ನ..ಪರವಾಗಿಲ್ಲ ಬಿಡ್ರೊ’ ಎಂದ ಯಜಮಾನ..! : ದಾಸನ ಮಾತಿಗೆ ತಲೆಬಾಗಿದ ಫ್ಯಾನ್ಸ್..!

December 19, 2022
Just Pass Cinema: ಸೆಟ್ಟೇರಿದ ಶ್ರೀ ‘ಜಸ್ಟ್ ಪಾಸ್’ ಸಿನಿಮಾ – ಜನವರಿ 2ರಿಂದ ಚಿತ್ರೀಕರಣ
Entertainment

Just Pass Cinema: ಸೆಟ್ಟೇರಿದ ಶ್ರೀ ‘ಜಸ್ಟ್ ಪಾಸ್’ ಸಿನಿಮಾ – ಜನವರಿ 2ರಿಂದ ಚಿತ್ರೀಕರಣ

December 15, 2022
BJP Government: ವರ್ಗಾವಣೆಯಲ್ಲಿ ಬಿಜೆಪಿ ಕುತಂತ್ರ: ಚುನಾವಣಾ ಆಯೋಗದ ಮೊರೆ ಹೋದ ಎಎಪಿ
Uncategorized

BJP Government: ವರ್ಗಾವಣೆಯಲ್ಲಿ ಬಿಜೆಪಿ ಕುತಂತ್ರ: ಚುನಾವಣಾ ಆಯೋಗದ ಮೊರೆ ಹೋದ ಎಎಪಿ

December 14, 2022
Next Post
Health Tips:ಈ ತರಕಾರಿಯಲ್ಲಿದೆ ವಿಶೇಷ ಶಕ್ತಿ: ಅಧಿಕ ಬಿಪಿ, ಜಾಂಡಿಸ್ ಫಟಾಫಟ್ ಮಾಯಾ

Health Tips:ಈ ತರಕಾರಿಯಲ್ಲಿದೆ ವಿಶೇಷ ಶಕ್ತಿ: ಅಧಿಕ ಬಿಪಿ, ಜಾಂಡಿಸ್ ಫಟಾಫಟ್ ಮಾಯಾ

Covid Vaccination: ರಾಜ್ಯಾದ್ಯಂತ ಶಾಲೆ ಕಾಲೇಜುಗಳಲ್ಲಿ 15 ರಿಂದ 18 ವರ್ಷದ ಮಕ್ಕಳಿಗೆ ಕೊವಿಡ್ ಲಸಿಕೆ ಅಭಿಯಾನ

Covid Vaccination: ರಾಜ್ಯಾದ್ಯಂತ ಶಾಲೆ ಕಾಲೇಜುಗಳಲ್ಲಿ 15 ರಿಂದ 18 ವರ್ಷದ ಮಕ್ಕಳಿಗೆ ಕೊವಿಡ್ ಲಸಿಕೆ ಅಭಿಯಾನ

No Result
View All Result
  • Just-In
  • Karnataka
  • Bangalore
  • Politics
  • Secular Special
  • Crime
  • Entertainment
  • Lifestyle

© 2022 Secular Tv - Secular TV Secular Tv.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist