ಬೆಂಗಳೂರು: (ಜ.2) Vaccination: 15 ರಿಂದ 18 ವರ್ಷದವರೆಗಿನ ಮಕ್ಕಳಿಗೆ ಇಂದಿನಿಂದ ಕೋವ್ಯಾಕ್ಸಿನ್ ಲಸಿಕೆ ಅಭಿಯಾನ ನಡೆಯಲಿದೆ. ದೇಶಾದ್ಯಂತ ವ್ಯಾಕ್ಸಿನೇಷನ್ ನೀಡಲು ಸಿದ್ಧತೆಗಳು ನಡೆದಿದ್ದು ನಿನ್ನೆ ಸಂಜೆ ಹೊತ್ತಿಗೆ ಕೋವಿನ್ ಆ್ಯಪ್ ಮೂಲಕ 6.35 ಲಕ್ಷ ಮಂದಿ ನೋಂದಣಿ ಮಾಡಿಕೊಂಡಿದ್ದಾರೆ.

15-18 ವರ್ಷದವರೆಗಿನ ಎಲ್ಲರಿಗೂ ಲಸಿಕೆಯನ್ನು ಪಡೆಯಬಹುದು. 2007 ಇಸವಿಯಲ್ಲಿ ಜನಿಸಿದ ಎಲ್ಲರಿಗೂ ಕೊರೋನಾ ಲಸಿಕೆಯನ್ನು ಪಡೆಯಲು ಅರ್ಹರಾಗಿರುತ್ತಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.
ಲಸಿಕೆ ಕಾರ್ಯಕ್ರಮಕ್ಕೆ ಇಂದು ಬೆಳಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಚಾಲನೆ ನೀಡಿದರು. ಬೆಂಗಳೂರಿನ ಮೂಡಲಪಾಳ್ಯ ಸರ್ಕಾರಿ ಶಾಲೆ ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಚಾಲನೆ ಕಾರ್ಯಕ್ರಮ ನಡೆಯಿತು.

ಜಿಲ್ಲಾ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ತಾಲೂಕುಗಳಲ್ಲಿ ಶಾಸಕರಿಂದ ಲಸಿಕಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ.
ಮಕ್ಕಳಿಗೆಂದೇ ಸದ್ಯಕ್ಕೆ ಇಡೀ ರಾಜ್ಯದಲ್ಲಿ 16 ಲಕ್ಷ ಡೋಸ್ ಕೊವಾಕ್ಸಿನ್ ಲಸಿಕೆ ದಾಸ್ತಾನು ಮಾಡಲಾಗಿದೆ. ರಾಜ್ಯದ ಶಾಲೆಗಳಲ್ಲಿ ಮಕ್ಕಳಿಗೆ ಲಸಿಕೆ ನೀಡಲಾಗುತ್ತದೆ

ಅಸ್ವಸ್ತತೆ ಹೊಂದಿರುವ ಮಕ್ಕಳಿಗೆ ಆರೋಗ್ಯ ಕೇಂದ್ರಗಳಲ್ಲಿ ಲಸಿಕೆ ನೀಡಲು ಸೂಚನೆ ನೀಡಲಾಗಿದೆ ಆನ್ಲೈನ್ನಲ್ಲಿ ಮಕ್ಕಳಿಗೆ ಶಾಲೆಗಳು ದಿನಾಂಕ ನಿಗದಿಮಾಡಿ ಬರಹೇಳಿ ಲಸಿಕೆ ನೀಡಬೇಕು ಎಂದು ಸೂಚನೆ ನೀಡಲಾಗಿದೆ.